Chitradurga News | Nammajana.com | 18-08-2025
ನಮ್ಮಜನ ನ್ಯೂಸ್ ಕಾಂ, ಹೊಳಲ್ಕೆರೆ: ತಾಲ್ಲೂಕಿನ(leopard) ಗಿಲಿಕೇನಹಳ್ಳಿ ಗ್ರಾಮದಲ್ಲಿ ಭಾನುವಾರದಂದು ಹೊಲದಲ್ಲಿ ಮೆಕ್ಕೆಜೋಳಕ್ಕೆ ಗೊಬ್ಬರ ಹಾಕುತ್ತಿರುವಾಗ ತನುಜಾ ಎಂಬ ರೈತ ಮಹಿಳೆ ಮೇಲೆ ಚಿರತೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡಿದ್ದರು.
ಇದನ್ನೂ ಓದಿ: DGR ವತಿಯಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಚಿತ್ರದುರ್ಗ ನಗರದ ಉದಯ ನರ್ಸಿಂಗ್ ಹೋಮ್ ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಜಿಲ್ಲಾ ಉಪವಿಭಾಗಧಿಕಾರಿ ಮೆಹಬೂಬ್ ಜಿಲಾನಿ ಖುರೇಶಿ ಸೋಮವಾರ ಸಂಜೆ 7ಗಂಟೆಗೆ ಆಸ್ಪತ್ರೆಗೆ ಭೇಟಿ ಮಹಿಳೆಯನ್ನು ಉಪಚರಿಸಿದ್ದಾರೆ.
ಸ್ಥಳದಲ್ಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ಗಾಯಗೊಂಡ ಮಹಿಳೆಯ ಚಿಕಿತ್ಸೆಯ ಹಣವನ್ನು ಇಲಾಖೆಯಿಂದ ಭರಿಸಬೇಕು, ಮಾನವೀಯತೆಯ ದೃಷ್ಟಿಯಿಂದ ಮಹಿಳೆಗೆ ಇಲಾಖೆಯಿಂದ ನೆರವು ನೀಡಬೇಕು.
ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಉಪಟಳ ಹೆಚ್ಚಾಗಿದೆ ಹಾಗಾಗಿ ಕೂಡಲೇ ಚಿರತೆ ಸೆರೆ ಹಿಡಿಯಲು ಬೊನ್ ಅಳವಡಿಸಿ ಚಿರತೆಯನ್ನ ಸೆರೆ ಹಿಡಿದು ಮುಂದಾಗುವ ಅನಾಹುತ ತಪ್ಪಿಸಬೇಕು ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡಬಾರದು.
ಇದನ್ನೂ ಓದಿ: ಮೊಳಕಾಲ್ಮೂರು ತಾಲೂಕು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ : ನೇಮಕಾತಿಗೆ ಅರ್ಜಿ ಆಹ್ವಾನ
ಕಾಡು ಪ್ರಾಣಿಗಳಿಂದ ಜನರ ಜೀವಗಳನ್ನು ಉಳಿಸುವುದು ಅಧಿಕಾರಿಗಳ ಕರ್ತವ್ಯ ಮೊದಲು ಚಿರತೆ ಸೆರೆ ಹಿಡಿಯಲು ಕಾರ್ಯೋನ್ಮಖರಾಗಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇನ್ನೂ ಇದೇ ಸಂದರ್ಭದಲ್ಲಿ(leopard) ವೈದ್ಯರ ಜತೆ ಮಾತನಾಡಿ, ದಾಳಿಗೆ ಒಳಗಾದ ಮಹಿಳೆಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಅಗತ್ಯ ಚಿಕಿತ್ಸೆ ನೀಡಬೇಕು ಎಂದು ವೈದ್ಯರಿಗೆ ಸೂಚಿಸಿ ಸ್ಥಳದಲ್ಲಿದ್ದ ಮಹಿಳೆಯ ಕುಟುಂಬಸ್ತರಿಗೆ ಧೈರ್ಯ ತುಂಬಿದರು.
ಸ್ಥಳದಲ್ಲಿ ತಹಶೀಲ್ದಾರ್ ವಿಜಯಕುಮಾರ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252