Chitradurga news|nammajana.com|20-02-2025
ನಮ್ಮಜನ.ಕಾಂ, ಚಿತ್ರದುರ್ಗ: ಇಂದಿನ ವಿದ್ಯಾರ್ಥಿಗಳು ಮೊಬೈಲ್ ಆಕರ್ಷಣೆಯ ಹೊಡತಕ್ಕೆ ಸಿಕ್ಕಿ ತಮ್ಮ ಅಮೂಲವ್ಯವಾದ (Library) ಬದುಕಿನ ಮೌಲ್ಯಗಳನ್ನು ಮರೆಯುತ್ತಿದ್ದಾರೆ.
ಅವರನ್ನು ಮತ್ತೆ ಸಾಹಿತ್ಯ, ಪುಸ್ತಕ, ಓದಿನ ಅಭಿರುಚಿಯತ್ತ ಆಕರ್ಷಿಸುವ ಸಲುವಾಗಿ ಶಾಲೆಯಲ್ಲಿ ಮಕ್ಕಳ ಸ್ನೇಹಿ ಗ್ರಂಥಾಲಯಕ್ಕೆ ನಿರ್ಮಾಣಕ್ಕೆ ಕೈ ಹಾಕಿದ್ದಾರೆ ಸರ್ಕಾರಿ (Library) ಪ್ರೌಢಶಾಲೆ(ಕೋಟೆ)ಯ ಚಿತ್ರಕಲಾ ಶಿಕ್ಷಕ ನಿರಂಜನಮೂರ್ತಿ.

“ನನ್ನ ಶಾಲೆ, ನನ್ನ ಕನಸು” ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಯಾವುದರಲ್ಲೂ ಕಡಿಮೆ ಇರಬಾರದು. ಖಾಸಗಿ ಶಾಲೆಯಲ್ಲಿ ಸಿಗುವ ಸೌಲಭ್ಯಗಳು ನನ್ನ ವಿದ್ಯಾರ್ಥಿಗಳಿಗೂ ಸಿಗಬೇಕೆಂಬ ಹಂಬಲ ಈ ಶಿಕ್ಷಕರದ್ದಾಗಿದೆ.
ಈ ಮಕ್ಕಳ ಸ್ನೇಹಿ ಗ್ರಂಥಾಲಯದಲ್ಲಿ ಸುಮಾರು ಐದು ಸಾವಿರ ಪುಸ್ತಕಗಳನ್ನು ಹೊಂದಿದ್ದು ಮಕ್ಕಳು ಯಾವುದೇ ಭಯವಿಲ್ಲದೆ ತಮಗೆ ಇಷ್ಟವಾದ ಪುಸ್ತಕವನ್ನು ಓದಿ ಆ ಪುಸ್ತಕದ ಪರಿಚಯ (Library) ಮಾಡಲು ಒಂದು ವೇದಿಕೆಯನ್ನೂ ನಿರ್ಮಿಸಿದ್ದಾರೆ.
ಸರ್ಕಾರಿ ಪ್ರೌಢಶಾಲೆ (ಕೋಟೆ) ಸುಮಾರು 80 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ಶಾಲೆಯಾಗಿದ್ದು, ಇದು ಒಂದು ಕಾಲಘಟ್ಟದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ನೀಡಿ ಕಲೆ, ಸಾಹಿತ್ಯ, ವಿಜ್ಞಾನ, ಸಾಮಾಜಿಕ, (Library) ರಾಜಕೀಯ ಕ್ಷೇತ್ರದಲ್ಲಿ ಈ ನಾಡಿಗೆ ಕೀರ್ತಿ ತಂದುಕೊಟ್ಟಿದೆ.
ಇಂತಹ ಶಾಲೆಗೆ ಏನಾದರೂ ಶಾಶ್ವತ ಕೊಡುಗೆ ನೀಡಬೇಕು ಎಂದು ಈ ಕಾರ್ಯಕ್ಕೆ ಮುಂದಾಗಿದ್ದು, ಸಾಕಷ್ಟು ಶ್ರಮವಹಿಸಿ ಸಿದ್ಧಪಡಿಸಿರುವ ಈ ಗ್ರಂಥಾಲಯಕ್ಕೆ “ಮಿಗುವ ನಕ್ಷತ್ರಗಳ ಕೊಠಡಿ” ಎಂದು ಹೆಸರಿಡಲಾಗಿದೆ. ಇದೇ ಫೆ.21ರಂದು (Library) ಶುಕ್ರವಾರ ಗ್ರಂಥಾಲಯದ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ಫೆ.21ರಂದು ಮಕ್ಕಳ ಸ್ನೇಹಿ ಗ್ರಂಥಾಲಯ ಪ್ರಾರಂಭೋತ್ಸವ:
ಚಿತ್ರದುರ್ಗ ನಗರದ ಸರ್ಕಾರಿ ಪ್ರೌಢಶಾಲೆ (ಕೋಟೆ)ಯಲ್ಲಿ ಇದೇ ಫೆ.21ರಂದು ಬೆಳಿಗ್ಗೆ 11ಕ್ಕೆ ಮಕ್ಕಳ ಸ್ನೇಹಿ ಗ್ರಂಥಾಲಯ
ಪ್ರಾರಂಭೋತ್ಸವ ಕಾರ್ಯಕ್ರಮ:
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಉದ್ಘಾಟನೆ ನೆರವೇರಿಸುವರು.ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಸರ್ಕಾರಿ ಪ್ರೌಢಶಾಲೆ (ಕೋಟೆ) ಮುಖ್ಯ ಶಿಕ್ಷಕಿ ಸೌಮ್ಯ ಕುಮಾರಿ ಭಾಗವಹಿಸುವರು.
ಇದನ್ನೂ ಓದಿ: Cataract | ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ: ಜೆ.ವೈಶಾಲಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252