

Chitradurga News|Nammajana.com |21-4-2024

ನಮ್ಮಜನ.ಕಾಂ.ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನ ದಿನ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26 ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಇದನ್ನೂ ಓದಿ:ಚಿತ್ರದುರ್ಗ:ಯೋಗಿ ಆದಿತ್ಯನಾಥ್ ರೋಡ್ ಶೋ ರದ್ದು
ಎಲ್ಲಾ ಮದ್ಯದ ಅಂಗಡಿಗಳನ್ನು ಮುಚ್ಚುಬೇಕು. ಯಾವುದೇ ತರಹದ ಬಾರ್ ಅಂಡ್ ರೆಸ್ಟೋರೆಂಟ್, ಕ್ಲಬ್ ಮತ್ತು ಹೋಟೆಲ್, ಡಾಬಾ ಗಳಲ್ಲಿ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಮದ್ಯ ಮಾರಾಟ ಮಾಡುವಂತಿಲ್ಲ. ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದ್ದಾರೆ.


