Chitradurga news|nammajana.com|26-10-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 2024-25ನೇ (Loan facility) ಸಾಲಿಗೆ ಪರಿಶಿಷ್ಟ ಪಂಗಡ ಜನರ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಜನರ ಆರ್ಥಿಕ ಅಭಿವೃದ್ಧಿಗಾಗಿ ನಿಗಮದ ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸುವ ಸಂಬಂಧ ಪರಿಶಿಷ್ಟ ಪಂಗಡದ ಫಲಾಪೇಕ್ಷಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, (Loan facility) ಮೈಕ್ರೋಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ನಿಗಮದ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಪಂಗಡದ ಸಮುದಾಯದವರು ಸೇವಾಸಿಂಧು ಪೋರ್ಟಲ್ https://sevsindu.karnataka.
ಇದನ್ನೂ ಓದಿ: ಐತಿಹಾಸಿಕ ಕರೇಕಲ್ ಕೆರೆಗೆ ಬಾಗಿನ ಅರ್ಪಣೆ ಮಾಡುತ್ತಿರುವುದು ನನ್ನ ಪುಣ್ಯ: ಶಾಸಕ ಟಿ.ರಘುಮೂರ್ತಿ | Karekal kere
ಹೆಚ್ಚಿನ ಮಾಹಿತಿಗಾಗಿ ನಗರದ ಸರಸ್ವತಿಪುರಂ ಮುಖ್ಯ ರಸ್ತೆಯಲ್ಲಿನ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ (Loan facility) ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ಕಚೇರಿಯ ದೂರವಾಣಿ ಸಂಖ್ಯೆ 08194-221055 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.