Chitradurga news|nammajana.com|14-6-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗದ ವಿಆರ್ಎಸ್ ಬಡಾವಣೆಯ ವಾಸಿ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಆರೋಪಿಗಳ ಜೊತೆ ಗುರುವಾರ ಮಧ್ಯರಾತ್ರಿ 2 ಗಂಟೆ ಸಮಯದಲ್ಲಿ ನಗರದ ಹಲವು ಸ್ಥಳಗಳಲ್ಲಿ ಮಹಜರು (location is Mazaru Chitradurga) ನಡೆಸಿದ್ದಾರೆ.
ರೇಣುಕಸ್ವಾಮಿಯನ್ನು ಬೆಂಗಳೂರಿಗೆ ಕರೆದೊಯ್ದ 4ನೇ ಆರೋಪಿ ರಾಘವೇಂದ್ರ ಮತ್ತು ಇತರರ ಜೊತೆ ಪರಿಶೀಲನೆ ನಡೆಸಿದ್ದಾರೆ. ರೇಣುಕಸ್ವಾಮಿ ಕೆಲಸ ಮಾಡುತ್ತಿದ್ದ ಐಯುಡಿಪಿ ಲೇಔಟ್ ನ ಖಾಸಗಿ ಅಪೋಲೋ ಫಾರ್ಮಸಿ, ಕಿಡ್ನಪ್ ಮಾಡುವುದಕ್ಕಿಂದ ಮೊದಲು ಬೈಕ್ ನಿಲ್ಲಿಸಿದ್ದ ಪೆಟ್ರೋಲ್ ಬಂಕ್ ಪ್ರದೇಶ, ರೇಣುಕಸ್ವಾಮಿಯನ್ನು ಕಾರಿಗೆ ಹತ್ತಿಸಿಕೊಂಡ ಚಳ್ಳಕೆರೆ ಗೇಟ್ ಹಾಗೂ ತುರುವನೂರು ರಸ್ತೆಯಲ್ಲಿರುವ ರೇಣುಕಸ್ವಾಮಿ ನಿವಾಸದ ಬಳಿ ಪೊಲೀಸರು ಸ್ಥಳ ಮಹಜರು (location is Mazaru Chitradurga) ಪ್ರಕ್ರಿಯೆ ಮಾಡಿದ್ದಾರೆ.

ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ 14-6-2024
ಗುರುವಾರ ಬೆಳಗ್ಗೆ ಅಥವಾ ಮಧ್ಯಾಹ್ನ ಸ್ಥಳ ಮಹಜರು (location is Mazaru Chitradurga) ನಡೆಸಲು ಪೊಲೀಸರು ಆಗಮಿಸುತ್ತಾರೆ ಎಂಬ ಮಾಹಿತಿ ಇತ್ತು. ಅದಕ್ಕಾಗಿ ಸ್ಥಳೀಯ ಪೊಲೀಸರು ಭದ್ರತೆಗಾಗಿ ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಬೆಳಗ್ಗೆಯಿಂದಲೂ ಜನಜಂಗುಳಿಯಿಂದ ಕೂಡಿದ್ದ ಚಳ್ಳಕೆರೆ ಗೇಟ್ ನಲ್ಲಿ ಹೆಚ್ಚು ಜನರಿರುವ ಕಾರಣಕ್ಕೆ ಪೊಲೀಸರು ಪ್ರಕ್ರಿಯೆಯನ್ನು ಮುಂದೂಡಿದ್ದಾಗಿ ತಿಳಿಸಿದ್ದರು. ಆದರೆ ಜನರು ಮಲಗುವ ಸಮಯ ಮೀರಿ ತಡರಾತ್ರಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
ಇದನ್ನೂ ಓದಿ: Rotary Club Chitradurga: ರೋಟರಿ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಣೆ
ಡಿವೈಎಸ್ ಪಿ ಕಚೇರಿಯಲ್ಲಿ ಗುರುವಾರ ಶರಣಾಗಿದ್ದ 8 ನೇ (location is Mazaru Chitradurga) ಆರೋಪಿ ರವಿಯನ್ನು ಇದೇ ಸಂದರ್ಭದಲ್ಲಿ ಬೆಂಗಳೂರು ಪೊಲೀಸರಿಗೆ ಹಸ್ತಾಂತರ ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252