Chitradurga News |Nammajana.com | 23-4-2024
ನಮ್ಮಜನ.ಕಾಂ. ಹೊಳಲ್ಕೆರೆ : ಬಿಜೆಪಿ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಲು ಬಿಜೆಪಿ ಪಕ್ಷದ ಚಿತ್ರದುರ್ಗ ಸಂಸತ್ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಮತ ನೀಡಬೇಕೆಂದು ಬಿಜೆಪಿ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ಜಿ.ಎಂ.ಸುರೇಶ್ ತಿಳಿಸಿದರು.
ತಾಲ್ಲೂಕಿನ ರಾಮಗಿರಿ. ಬಿದುರ್ಗ ಸೇರಿ ವಿವಿಧ ಹಳ್ಳಿಗಳಲ್ಲಿ ಮಂಗಳವಾರ ಬಿಜೆಪಿ ಪಕ್ಷದ ಪರ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮತಯಾಚಿಸಿ ಮಾತನಾಡಿದರು.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ೪೦ ವರ್ಷಗಳಿಂದ ಬಿಜೆಪಿ ಪಕ್ಷವನ್ನ ಕಟ್ಟಿ ಬೆಳೆಸಿ ಹೋರಾಟ ಕೈಗೊಂಡಿದ್ದೇವೆ. ಅದರ ಪರಿಣಾಮವಾಗಿ ಬಿಜೆಪಿ ಪಕ್ಷ ಕ್ಷೇತ್ರದಲ್ಲಿ ಸುಭದ್ರವಾಗಿದೆ. ಎರಡು ಭಾರಿ ಎಂ.ಪಿ. ಮೂರು ಭಾರಿ ಎಂಎಲ್‌ಎ ಜನರು ಗೆಲ್ಲಿಸಿದ್ದಾರೆ. ಜನರು ಈ ಭಾರಿ ಬಿಜೆಪಿ ಪಕ್ಷಕ್ಕೆ ಬೆಂಬಲಿಸಲು ತುದಿಗಾಲಲ್ಲಿ ನಿಂತಿದ್ದು, ಬಿಜೆಪಿ ಪಕ್ಷಕ್ಕೆ ಬಹುಮತ ಸಿಗುವ ವಿಶ್ವಾಸ ವ್ಯಕ್ತ ಪಡಿಸಿದರು.
ಬಿಜೆಪಿ ಜಿಲ್ಲಾ ಖಚಾಂಚಿ ಎಸ್. ಆರ್.ಗಿರೀಶ್ ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ದೇಶದ ಭದ್ರತೆ ಹೆಚ್ಚಾಗಲಿದೆ. ದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಯಂತ್ರಣವಾಗಲಿದೆ.
ರಸ್ತೆ ಅಭಿವೃದ್ಧಿ,. ಶೈಕ್ಷಣಿಕ ಕ್ಷೇತ್ರ ಬದಲಾವಣೆ, ನೀರಾವರಿಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಹಾಗಾಗಿ ಚಿತ್ರದುರ್ಗದ ಸಂಸತ್ ಕ್ಷೇತ್ರವನ್ನು ಗೆಲ್ಲಬೇಕಾದರೆ ಬಿಜೆಪಿ ಪಕ್ಷದ ಅಭ್ಯರ್ಥಿ ಗೋವಿಂದಕಾರಜೋಳ್ ಇವರಿಗೆ ಮತ ನೀಡಬೇಕು ಎಂದರು.
ಮಾಜಿ ಅಧ್ಯಕ್ಷ ರಾಜಶೇಖರ್ ಮಾತನಾಡಿ, ಬಿಜೆಪಿ ಪಕ್ಷಕ್ಕೆ ಮತ ನೀಡುವಂತೆ ಜನರಿಗೆ ಜಾಗೃತಿ ಮೂಡಿಸಲಾಗುತ್ತದೆ. ಜನರು ಬಿಜೆಪಿ ಪಕ್ಷವನ್ನ ಗೆಲ್ಲಿಸಲು ಹೆಚ್ಚಿನ ಮತ ನೀಡಲಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಲಕ್ಷಕ್ಕೂ ಅಧಿಕ ಮತ ಸಿಕ್ಕಲ್ಲಿದೆ ಎಂದರು.
ಇದನ್ನೂ ಓದಿ: ಮುರುಘಾ ಶರಣರಿಗೆ ತಪ್ಪಿಲ್ಲ ಸಂಕಷ್ಟ | ಸುಪ್ರೀಂ ಕೋರ್ಟ್ ಜಾಮೀನು ರದ್ದು| ಕೋರ್ಟ್ ಹೇಳಿದ್ದೇನು
ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಧನಂಜಯ್ ನಾಯ್ಕ ಮಾತನಾಡಿ, ದೇಶದ ಭದ್ರತೆಗೆ ನಾವೆಲ್ಲರೂ ಬಿಜೆಪಿ ಪಕ್ಷಕ್ಕೆ ಬೆಂಬಲಿಸಬೇಕು. ಮೋದಿ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಮತ ನೀಡಲು ಮನವಿ ಮಾಡಿದರು.
ಮುಖಂಡರಾದ ಅಗ್ರಹಾರ ಬಸವರಾಜ್, ಮೂರ್ತಿಣ್ಣ, ಕಲ್ಲವನಾಗ್ತಿಹಳ್ಳಿ ಸುರೇಶ್, ಗುಂಡೇರಿ ಚಂದ್ರಶೇಖರ್ ಸೇರಿದಂತೆ ಹಲವಾರು ಮುಖಂಡರು ಪ್ರಚಾರ ಕೈಗೊಂಡರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252