Chitradurga News | Namma Jana | 11-04-2024
ಸಿರಿಗೆರೆ: ದೇಶದೆಲ್ಲೆಡೆ ಅಗತ್ಯ ವಸ್ತುಗಳ ಬೆಲೆಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಆರೋಪಿಸಿದರು.
ನಗರದ ವಿವಿಧೆಡೆ ಬುಧವಾರ ಮತಯಾಚಿಸಿ ಮಾತನಾಡಿದ ಅವರು, ಬೆಲೆ ಏರಿಕೆಗೆ ಜನಸಾಮಾನ್ಯರು ತತ್ತರಿಸಿದ್ದಾರೆ. ಸಿಲಿಂಡರ್ ಬಿಟ್ಟು, ಕಟ್ಟಿಗೆ ಹೊಲೆಗಳತ್ತ ಜನ ಗಮನಹರಿಸುತ್ತಿದ್ದಾರೆ. ಗ್ಯಾಸ್, ಪೆಟ್ರೋಲ್ ಬೆಲೆ ಏರಿಕೆಯಿಂದ ಜನ ಸಾಮಾನ್ಯರು ನಿತ್ಯ ಬಿಜೆಪಿ ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು.

ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರಿಗೆ ಈಗಾಗಲೇ ರಾಜ್ಯದ ಮತದಾದರರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ. ಅದೆ ಮಾದರಿಯಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನು ಓದಿ: ದುರ್ಗದಲ್ಲಿ ಯುಗಾದಿ: ಒಂದು ನೆನಪು
ಕಾಂಗ್ರೆಸ್ ಪಕ್ಷಕ್ಕೆ ಭಗವದ್ಗೀತೆ, ಬೈಬಲ್, ಕುರಾನ್ ಸೇರಿದಂತೆ ಎಲ್ಲ ಧರ್ಮಗ್ರಂಥಗಳ ಕುರಿತು ಗೌರವ ಇದೆ. ಆದರೆ, ಬಿಜೆಪಿ ನಾಯಕರಿಗೆ ಯಾವ ಧರ್ಮಗಳ ಗ್ರಂಥದ ಬಗ್ಗೆ ಗೌರವ ಇಲ್ಲ. ಭಗವದ್ಗೀತೆಗೆ ಕುರಿತು ಕೂಡ ಗೌರವ ಇಲ್ಲ ಎಂಬುದಕ್ಕೆ ಅವರು ನಡೆಸಿರುವ ಭ್ರಷ್ಟಾಚಾರ, ಗಲಭೆ, ಕೋಮುಧ್ವೇಷದ ಭಾಷಣವೇ ಸಾಕ್ಷಿ ಎಂದರು.
ಈಗಾಗಲೇ ಕ್ಷೇತ್ರದಲ್ಲಿ ಬಿ.ಎನ್.ಚಂದ್ರಪ್ಪ ಅವರನ್ನು ಗೆಲ್ಲಿಸಬೇಕೆಂದು ಎಲ್ಲ ಸಮುದಾಯದವರು ಸ್ವಯಂ ಆಗಿ ಸಂಘಟನೆಯಲ್ಲಿ ತೊಡಗಿದ್ದಾರೆ. ಬಸವಣ್ಣನ ಆಶಯದಡಿ ರಚನೆಗೊಂಡಿರುವ ಸಂವಿಧಾನವನ್ನೇ ಬದಲು ಮಾಡಲು ಮುಂದಾಗಿರುವ ಬಿಜೆಪಿಗೆ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ನೋಟ್ ಬ್ಯಾನ್, ಜಿ.ಎಸ್.ಟಿ., ಬೆಲೆ ಏರಿಕೆ ಕಾರಣಕ್ಕೆ ಈಗಾಗಲೇ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಬರುವ ದಿನಗಳಲ್ಲಿ ನೆಮ್ಮದಿ ಜೀವನಕ್ಕೆ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಜನರೇ ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ಮಾಜಿ ಸಚಿವ ಹೆಚ್. ಅಂಜನೇಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಲಿಂಗವ್ವನಾಗತಿಹಳ್ಳಿ ತೀಪ್ಪೇಸ್ವಾಮಿ ಬಸವರಾಜಯ್ಯ ವಿಜಯ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252