Chitradurga news|nammajana.com|21-9-2024
ನಮ್ಮಜನ.ಕಾಂ, ಚಿತ್ರದುರ್ಗ: ಇದೇ ಸೆಪ್ಟೆಂಬರ್ 24 ಮತ್ತು 25 ರಂದು ಚಿತ್ರದುರ್ಗ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಗೆ ಖುದ್ದಾಗಿ (Lokayukta) ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರಿಂದ ದೂರು ಹಾಗೂ ಅವಹಾಲುಗಳನ್ನು ಸ್ವೀಕರಿಸುವರು.
ಸರ್ಕಾರಿ ಕಚೇರಿಗಳಲ್ಲಿ ತಮ್ಮ ಕೆಲಸಗಳನ್ನು ಮಾಡಿಕೊಡಲು ಅಲ್ಲಿನ ಅಧಿಕಾರಿ, ಸಿಬ್ಬಂದಿಗಳು ಲಂಚದ ಹಣಕ್ಕಾಗಿ ಬೇಡಿಕೆಯಿಟ್ಟಲ್ಲಿ, ಸರ್ಕಾರವು ಸಾರ್ವಜನಿಕರಿಗಾಗಿ ರೂಪಿಸಲಾಗಿರುವ ಅನೇಕ ಯೋಜನೆಗಳನ್ನು ಸರ್ಕಾರಿ (Lokayukta) ಅಧಿಕಾರಿಗಳು ಅನುಷ್ಠಾನಗೊಳಿಸದೇ ಇರುವುದು ಮತ್ತು ಅಂತಹ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಅನಾವಶ್ಯಕ ವಿಳಂಬ, ಕರ್ತವ್ಯದಲ್ಲಿ ನಿರ್ಲಕ್ಷತನ, ತಾರತಮ್ಯ ತೋರುವುದು, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ಲಾಭ ಸರಿಯಾದ ರೀತಿಯಲ್ಲಿ ತಲುಪಿಸದೇ ಇರುವುದು ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ದೂರುಗಳನ್ನು ನಿಗಧಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ.
ಲೋಕಾಯುಕ್ತ ಅಧಿಕಾರಿಗಳ ತಾಲ್ಲೂಕು ಭೇಟಿ ವಿವರ:
ಸೆ.24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹಿರಿಯೂರು ತಾಲ್ಲೂಕು ಪಂಚಾಯಿತಿ, ಮೊಳಕಾಲ್ಮುರು ತಾಲ್ಲೂಕು ಪಂಚಾಯಿತಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ, ಚಳ್ಳಕೆರೆ ತಾಲ್ಲೂಕು ಪಂಚಾಯಿತಿಯಲ್ಲಿ ಲೋಕಾಯುಕ್ತ (Lokayukta) ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.
ಸೆ.25ರಂದು ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಹೊಸದುರ್ಗ ತಾಲ್ಲೂಕು ಪಂಚಾಯಿತಿ ಹಾಗೂ ಅಂದು ಮಧ್ಯಾಹ್ನ 2.30 ರಿಂದ ಸಂಜೆ 5.30 ರವರೆಗೆ ಹೊಳಲ್ಕೆರೆ (Lokayukta) ತಾಲ್ಲೂಕು ಪಂಚಾಯಿತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕರಿಸುವರು ಎಂದು ಕರ್ನಾಟಕ ಲೋಕಾಯುಕ್ತ ಚಿತ್ರದುರ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.