Chitradurga news|Nammajana.com|29-10-2025
ನಮ್ಮಜನ ಸಮಾಚಾರ ಚಿತ್ರದುರ್ಗ: ಮದಕರಿ ನಾಡಿನಲ್ಲಿ (Madakari Jayanti-2025) ಮದಕರಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡಿ ದುರ್ಗದ ಮತ್ತು 77 ಪಾಳೇಗಾರರ ಇತಿಹಾಸವನ್ನು ಭವಿಷ್ಯದ ಪೀಳಿಗೆಗೆ ಇತಿಹಾಸ ತಿಳಿಸುವ ಅವಶ್ಯಕತೆ ಇದೆ ಎಂದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಹೇಳಿದರು.
ನಾಯಕ ಸಮಾಜದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ರಾಜವೀರ ಮದಕರಿ ನಾಯಕ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಚಿತ್ರದುರ್ಗ ಎಂದರೆ ಮದಕರಿನಾಯಕ ಮದಕರಿ ನಾಯಕ ಎಂದರೆ ಚಿತ್ರದುರ್ಗ ಎಂಬ ಮಾತು ಇಡೀ ದೇಶದಲ್ಲಿ ಕೇಳಿಸುತ್ತಿದ್ದು ಇದು ಈ ನೆಲದ ಶಕ್ತಿಯಾಗಿದೆ. ಮದಕರಿನಾಯಕ ಅವರು ಸರ್ವ ಜನಾಂಗದ ಏಳ್ಗೆ ಬಯಸುವ ಮೂಲಕ (Madakari Jayanti-2025) ಚಿತ್ರದುರ್ಗ ಆಳ್ವಿಕೆ ಮಾಡಿದ ಚಿತ್ರದುರ್ಗ ನಗರಕ್ಕೆ ಹೊಸ ರೂಪ ಕೊಟ್ಟ ಕೀರ್ತಿ ಮದಕರಿನಾಯಕ ಅವರಿಗೆ ಸಲ್ಲುತ್ತದೆ.
ಮದಕರಿನಾಯಕ ಅವರು ಕಟ್ಟಿಸಿದ ಕೆರೆ ಕಟ್ಟೆಗಳಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಅದೆಷ್ಟೋ ಪುಷ್ಕರಣಿ, ಹೊಂಡಗಳು, ಕೆರೆಗಳ ತುಂಬುವುದಿಂದ ಜಲಮಟ್ಟ ಹೆಚ್ಚಳ ಜೊತೆಗೆ ಜನರಿಗೆ ಹಾಹಾಕಾರ ಆಗದಂತೆ ಜನರಿಗೆ ಅನುಕೂಲವಾಗಿದ್ದು 77 ಪಾಳೇಗಾರರು ಸಹ ಶಕ್ತಿಶಾಲಿಗಾಳಾಗಿ ದುರ್ಗವನ್ನು ರಕ್ಷಿಸಿ ಸರ್ವ ಜನಾಂಗದ ಶಾಂತಿಯ ತೋಟದಂತೆ ಆಳ್ವಿಕೆ ನಡೆಸಿದ್ದು ಮುಂದಿನ ದಿನಗಳಲ್ಲಿ ಸಹ ಇನ್ನೂ ಅದ್ದೂರಿಯಾಗಿ ಮದಕರಿ ಜಯಂತಿ ಆಚರಣೆ ಮಾಡಲಾಗುತ್ತದೆ.
ನಾಯಕ ಸಮಾಜ ಎಲ್ಲ ರಾಜಕೀಯವನ್ನು ಬದಿಗೊತ್ತಿ ಒಂದುಗೂಡಬೇಕು. ಯಾರು ಯಾವುದೇ ರಾಜಕೀಯ ಪಕ್ಷದಲ್ಲಿದ್ದರೂ ಚಿಂತೆಯಿಲ್ಲ. ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು. ಉಳಿದಂತೆ ಸಮಾಜದ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು. ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ಅದರಂತೆ ಪ್ರತಿ ವರ್ಷ ದುರ್ಗೋತ್ಸವ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸರ್ಕಾರದಿಂದ ಮಆಚರಿಸಲಿ: ಬಿ.ಶ್ರೀರಾಮುಲು
ಮಾಜಿ ಸಚಿವ ಬಿ.ಶ್ರೀರಾಮುಲು ಮಾತನಾಡಿ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಮದಕರಿ ನಾಯಕ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸಬೇಕೆಂದು ಒತ್ತಾಯಿಸಿದರು.
ಕಳೆದ ಚುನಾವಣೆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಚಿತ್ರದುರ್ಗದಲ್ಲಿ ಮದಕರಿ ನಾಯಕ ಥೀಮ್ ಪಾರ್ಕ್ ನಿರ್ಮಾಣ ಮಾಡುವುದಾಗಿ ಕೇಂದ್ರ ಸರ್ಕಾರದ ಗೃಹಸಚಿವ ಅಮಿತ್ ಶಾ ತಿಳಿಸಿದ್ದರು.
ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿಲ್ಲ. ಹಾಗಾಗಿ ಈಗ ಕಾಂಗ್ರೇಸ್ ಸರ್ಕಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಿ.ಸುಧಾಕರ್ ಜಾಗ ನೀಡಿದರೆ ಇದರಲ್ಲಿ ಥೀಮ್ ಪಾರ್ಕ್ (Madakari Jayanti-2025) ನಿರ್ಮಾಣ ಮಾಡಲು ಸಮಾಜ ಸಹಕಾರ ನೀಡಲಿದೆ ಎಂದರು.
ಚಿತ್ರದುರ್ಗದ ಪಾಳೇಗಾರರು ಉತ್ತಮ ಆಡಳಿತಕ್ಕೆ ಹೆಸರುವಾಸಿಯಾಗಿದ್ದರು. ನೆರೆ ರಾಜ್ಯಗಳ ರಾಜರು ಚಿತ್ರದುರ್ಗದ ಮೇಲೆ ದಂಡೆತ್ತಿ ಬಂದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ ಕಾರಣ ತಮ್ಮ ಸಾಮ್ರಾಜ್ಯ ರಕ್ಷಣೆಗೆ ಭದ್ರ ಕೋಟೆ ನಿರ್ಮಾಣ ಮಾಡಲಾಗಿತ್ತು. ಎಲ್ಲ ಸಮುದಾಯಗಳ ಹಿತರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕೆಲಸಗಳನ್ನು ಮಾಡಿದರು. ಮದಕರಿ ನಾಯಕ ಮಾಡಿರುವ ಕೆಲಸ ಸೂರ್ಯ, ಚಂದ್ರ ಇರುವವರೆಗೆ ಶಾಶ್ವತವಾಗಿರುತ್ತವೆ ಎಂದು ಹೇಳಿದರು.
ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನಿಧ್ಯವಹಿಸಿ ಮಾತನಾಡಿದರು. ಮಾದಾರ ಚೆನ್ನಯ್ಯ ಸ್ವಾಮೀಜಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಇಮ್ಮಡಿ ಕೇತೇಶ್ವರ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಕಾರ್ಯಕ್ರಮದ ರೂವಾರಿ ಹಾಗೂ ಉದ್ಯಮಿ ಶ್ರೀನಿವಾಸ ನಾಯಕ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ, ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಕಲ್ಲವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಕಾಂಗ್ರೇಸ್ ಮುಖಂಡ ಯೋಗೀಶ್ ಬಾಬು, ಗುಡ್ಡದೇಶ್ವರಪ್ಪ, ರತ್ನಮ್ಮ ಸೇರಿದಂತೆ ಸಮಾಝದ ಅನೇಕ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಬಳಿಕ ಕನಕ ವೃತ್ತದಿಂದ ಮದಕರಿ ನಾಯಕ ವೃತ್ತದವರೆಗೆ ಮದಕರಿ ನಾಯಕರ ಕಲಾ ಕೃತಿಯ ಮೆರವಣಿಗೆ ನಡೆಸಲಾಯಿತು. ರಾತ್ರಿ ೮ ಗಂಟೆಯಿAದ ಮದಕರಿ ನಾಯಕ ವೃತ್ತದಲ್ಲಿ ಲೇಸರ್ ಲೈಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯ ಜನರು ಈ ಸೊಬಗನ್ನು ಕಣ್ತ್ತುಂಬಿಕೊಂಡರು.
ಇದನ್ನೂ ಓದಿ: ಗೋಲ್ಡ್ ರೇಟ್ ಭರ್ಜರಿ ಇಳಿಕೆ | Gold Rate Today
ನಾಯಕ ಸಮಾಜ ಸ್ವಾಭಿಮಾನಿ ಸಮಾಜ: ಡಿ.ಸುಧಾಕರ್
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ನಾಯಕ ಸಮಾಜ ಸ್ವಾಭಿಮಾನಿ ಸಮಾಜ. ಪರಿಶ್ರಮದಿಂದ ಬದುವಕ ಸಮಾಜ. ಇಂತಹ ನಾಯಕ ಸಮಾಜದ ಮುಕುಟ ಮಣಿ ಮದಕರಿ ನಾಯಕರ ಹೆಸರಿನಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಅಗತ್ಯವಿರುವ ಜಾಗ ಕಾಯ್ದಿರಿಸಲಾಗಿದೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಪಾರ್ಕ್ (Madakari Jayanti-2025) ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗುವುದು. ಮದಕರಿ ನಾಯಕರು ಸಾಮಾಜಿಕವಾಗಿ ಅನೇಕ ಉತ್ತಮ ಕಾರ್ಯಗಳನ್ನು ಮಾಡಿದ್ದಾರೆ. ಅವನ್ನು ಜಗತ್ತಿಗೆ ತಿಳಿಸುವ ಕೆಲಸ ಮಾಡಲಾಗುವುದು ಎಂದರು.


