Chitradurga news|nammajana.com|12-6-2024
ನಮ್ಮಜನ.ಕಾಂ, ಚಿತ್ರದುರ್ಗ: ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಬಿಜೆಪಿ ಯುವ ಮುಖಂಡ ಎಂ.ಸಿ.ರಘುಚಂದನ್ (MC Raghuchandan) ದೆಹಲಿಯಲ್ಲಿ ಕೇಂದ್ರ ಸಚಿವರುಗಳಾದ ಎಚ್.ಡಿ.ಕುಮಾರಸ್ವಾಮಿ ಮತ್ತು ವಿ.ಸೋಮಣ್ಣ ಇವರುಗಳನ್ನು ಭೇಟಿಯಾಗಿ ಶುಭ ಕೋರಿದರು.
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗದಲ್ಲಿ ಕೈಗಾರಿಕೆಯನ್ನು ಸ್ಥಾಪಿಸಿ ನಿರುದ್ಯೋಗಿಗಳ ಕೈಗೆ ಕೆಲಸ ನೀಡಬೇಕು.
ಇದನ್ನೂ ಓದಿ: CHNNAGIRI ADIKE RATE: ಚನ್ನಗಿರಿ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ರೇಟ್
ಭದ್ರಾಮೇಲ್ದಂಡೆ ಯೋಜನೆ ಶೀಘ್ರವೇ ಪೂರ್ಣಗೊಳ್ಳುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದರ ಜೊತೆಗೆ ಚಿತ್ರದುರ್ಗದಲ್ಲಿ ಶೀಘ್ರವೇ ಮೆಡಿಕಲ್ ಕಾಲೇಜು ಕಟ್ಟಡ ಪೂರ್ಣಗೊಳಿಸಿ ಜಿಲ್ಲೆಯ ಬಡವರಿಗೆ ಸುಲಭವಾಗಿ ವೈದ್ಯಕೀಯ ಚಿಕಿತ್ಸೆ ದೊರಕುವಂತೆ ಮಾಡಬೇಕೆಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಚಿವ ಸೋಮಣ್ಣ (MC Raghuchandan) ಇವರುಗಳಲ್ಲಿ ಮನವಿ ಮಾಡಿದರು.