Chitradurga News | Nammajana.com | 03-09-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಕರ್ನಾಟಕ(Medara Development Corporation) ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ಮೈಕ್ರೋ ಕ್ರೇಡಿಟ್ (ಪ್ರೇರಣಾ), ಸ್ವಯಂ ಉದ್ಯೋಗ ಕಾರ್ಯಕ್ರಮದಡಿ ನೇರ ಸಾಲ, ಹೈನುಗಾರಿಕೆ, ಸ್ವಾವಲಂಭಿ ಸಾರಥಿ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಉದ್ಯಮಶೀಲತಾ ಅಭಿವೃದ್ಧಿ, ಗಂಗಾ ಕಲ್ಯಾಣಗಂಗಾ ಕಲ್ಯಾಣ, ಹಾಗೂ ಭೂ ಒಡೆತನ ಯೋಜನೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ ಸೆಪ್ಟೆಂಬರ್ 17 ಕೊನೆಯ ದಿನವಾಗಿದೆ.

ಇದನ್ನೂ ಓದಿ: ಯೂರಿಯ ಗೊಬ್ಬರಕ್ಕಾಗಿ ದಿನಗಟ್ಟಲೇ ರೈತರ ಪರದಾಟ
ಆನ್‍ಲೈನ್ ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
2023-24 ಹಾಗೂ 2024-25ನೇ ಸಾಲಿನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪ್ರಸಕ್ತ ಸಾಲಿನ ಅರ್ಜಿಗಳೊಂದಿಗೆ ಸೇರಿಸಿ ಪರಿಗಣಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿರುವವರು ಮತ್ತೋಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
