Chitradurga News | Nammajana.com | 18-08-2025
ನಮ್ಮಜನ ನ್ಯೂಸ್ ಕಾಂ,ಚಳ್ಳಕೆರೆ: ನಗರದ(Mining)ರೈಲ್ವೆ ಗೇಟ್ ಬಳಿ ಮೈನಿಂಗ್ ಡಂಪಿಂಗ್ ಯಾರ್ಡ್ ಸ್ಥಳಾಂತರದ ಬಗ್ಗೆ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಆ.13ರಂದು ಜಿಲ್ಲಾಧಿಕಾರಿಗಳ ತಂಡ ಭೇಟಿ ನೀಡಿ ಚರ್ಚೆ ನಡೆಸಿತ್ತು.
ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ವಾಸ್ತಾಂಶವನ್ನು ಅರಿಯಲು ಮತ್ತು ವರದಿ ಸಿದ್ದಪಡಿಸಲು ಉಪವಿಭಾಗಾಧಿಕಾರಿ ಮೊಹಬೂಬ್ ಜಿಲಾನಿ ವಾಯುಮಾಲಿನ್ಯ ಪರಿಸರ ಅಧಿಕಾರಿ, ಜಿಲ್ಲಾ ಯೋಜನಾಧಿಕಾರಿ, ಗಣಿ ಮತ್ತು ಭೂಗರ್ಭ ಇಲಾಖೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಚಿರತೆ ದಾಳಿಗೆ ಒಳಗಾದ ಮಹಿಳೆಯ ಆರೋಗ್ಯ ವಿಚಾರಿಸಿದ AC ಮೆಹಬೂಬ್ ಜಿಲಾನಿ ಖುರೇಶಿ
ರೈಲ್ವೆ ನಿಲ್ದಾಣದ ಬಳಿ ಇರುವ ಡಂಪಿಂಗ್ ಯಾರ್ಡ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಸಂದರ್ಭದಲ್ಲಿ ಕೆಲವು ಸಾರ್ವಜನಿಕರು ಡಂಪಿಂಗ್ ಯಾರ್ಡ್ ಬಗ್ಗೆ ಆಗುತ್ತಿರುವ ತೊಂದರೆ ಬಗ್ಗೆ ಮಾಹಿತಿ ನೀಡಿದರು.
ಪ್ರತಿನಿತ್ಯ ಧೂಳು ಹಾಗೂ ಶಬ್ದದಿಂದ ಈ ಭಾಗದ ಜನರಿಗೆ ತೊಂದರೆಯಾಗುತ್ತಿದೆ ಎಂದು ತಿಳಿಸಿದರು. ಸಾರ್ವಜನಿಕರ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡದೊಂದಿಗೆ ಆಗಮಿಸಿ ಪರಿಶೀಲನೆ ನಡೆಸುತ್ತಿರುವೆ.
ಈಗಾಗಲೇ ಅನುಮತಿ ಪಡೆದ ಖಾಸಗಿ ಕಂಪನಿಯವರೊಂದಿಗೂ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಿದ್ಧಾರೆ, ಪ್ರತಿನಿತ್ಯ ಇಲ್ಲಿಗೆ ಆಗಮಿಸುವ ಪ್ರಮಾಣ ಮತ್ತು ಅದರಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಿದ್ದಪಡಿಸಿ ನೀಡಲಿದ್ಧಾರೆ.
ನಂತರ ಸರ್ಕಾರ ಕ್ರಮವಹಿಸಲಿದೆ,(Mining) ಈ ಬಗ್ಗೆ ಜನರ ಹಿತದೃಷ್ಠಿಯಿಂದ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ. ಅಧಿಕಾರಿಗಳ ವರದಿ ನಂತರ ಮುಂದಿನ ಕ್ರಮವನ್ನು ಜರುಗಿಸಲಾಗುವುದು, ಸಾರ್ವಜನಿಕರೂ ಸಹ ಜಿಲ್ಲಾ ಆಡಳಿತದೊಂದಿಗೆ ಸಹಕರಿಸಬೇಕೆಂದರು.
ಇದನ್ನೂ ಓದಿ: DGR ವತಿಯಿಂದ ವಿವಿಧ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ
ತಹಶೀಲ್ಧಾರ್ ರೇಹಾನ್ ಪಾಷ, ಜಿಲ್ಲಾಯೋಜನಾಧಿಕಾರಿ ರೇಷ್ಮಹಾನಗಲ್, ಗಣಿ ಮತ್ತು ಭೂಗರ್ಭ ಇಲಾಖೆ ಉಪನಿರ್ದೇಶಕರು, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ವಿಜಯಭಾಸ್ಕರ್, ಪೌರಾಯುಕ್ತ ಜಗರೆಡ್ಡಿ, ಠಾಣಾ ಇನ್ಸ್‌ಪೆಕ್ಟರ್ ಕೆ.ಕುಮಾರ್, ಕಂದಾಯಾಧಿಕಾರಿ ತಿಪ್ಪೇಸ್ವಾಮಿ, ಗ್ರಾಮಲೆಕ್ಕಾಧಿಕಾರಿ ಪ್ರಕಾಶ್ ಇನ್ನಿತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252