ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಸರಕಾರದ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ದಾವಣಗೆರೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರವಾಗಿ ಆಶೀರ್ವಾದ ಆಪೇಕ್ಷಿಸಿ ಚಿತ್ರದುರ್ಗ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ ಭೋವಿ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಚಿತ್ರದುರ್ಗದ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಕುಂಚಿಟಿಗ ಗುರುಪೀಠದ ಶ್ರೀ ಶಾಂತವೀರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಭಗೀರಥ ಗುರುಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಯಾದವ ಗುರುಪೀಠದ ಶ್ರೀ ಕೃಷ್ಣ ಯಾದವಾನಂದ ಸ್ವಾಮೀಜಿ, ಮಡಿವಾಳ ಗುರುಪೀಠದ ಶ್ರೀ ಬಸವ ಮಾಚಿದೇವ ಸ್ವಾಮೀಜಿ, ಈಡಿಗ ಗುರುಪೀಠದ ಶ್ರೀ ರೇಣುಕಾನಂದ ಸ್ವಾಮೀಜಿ, ಹಡಪದ ಗುರುಪೀಠದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕುಂಬಾರ ಗುರುಪೀಠದ ಶ್ರೀ ಬಸವ ಕುಂಬಾರ ಗುಂಡಯ್ಯ ಸ್ವಾಮೀಜಿ, ಶಿವಶಕ್ತಿ ಗುರುಪೀಠದ ಶ್ರೀ ಬಸವಪ್ರಸಾದ ಸ್ವಾಮೀಜಿ, ಪಾರಮಾರ್ಥಿಕ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಕೊರಟಗೆರೆ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವ ಮಹಾಲಿಂಗ ಸ್ವಾಮೀಜಿ, ಬಸವಕಲ್ಯಾಣ ಶ್ರೀ ಸತ್ಯಕ್ಕ ತಾಯಿ, ಪೂಜ್ಯರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದಾವಣಗೆರೆ ಮುಖಂಡರಾದ ಎಚ್.ಜಯಣ್ಣ, ಎ.ಬಿ ನಾಗರಾಜ, ಉಮಾ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

English Summary: Minister S.S. Mallikarjun blessed by the Swamijis of the backward classes of Chitradurga.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252