ನಮ್ಮಜನ.ಕಾಂ ಚಳ್ಳಕೆರೆ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾನ ಏ.26ರಂದು ನಡೆಯಲಿದ್ದು, ಈ ಕ್ಷೇತ್ರದ ಮಾಜಿ ಸಂಸದ, ಕ್ರಿಯಾಶೀಲ ವ್ಯಕ್ತಿ ಬಿ.ಎನ್.ಚಂದ್ರಪ್ಪ ಸ್ವರ್ಧಿಸಿದ್ದು, ಈಗಾಗಲೇ ಎರಡು ಸುತ್ತಿನ ಪ್ರಚಾರ ಕಾರ್ಯ ಮುಕ್ತಾಯವಾಗಿದೆ. ಎಲ್ಲೆಡೆ ಕಾಂಗ್ರೆಸ್ ಪಕ್ಷದ ಅಲೆಎದ್ದು ಕಾಣುತ್ತಿದೆ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅತಿ ಹೆಚ್ಚು ಮತಗಳಿಂದ ವಿಜಯ ಸಾಧಿಸುವರು ಎಂದು ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ತಿಳಿಸಿದರು.
ಸೋಮವಾರ ಪರಶುರಾಂಪುರ ಹೋಬಳಿಯ ಅಲ್ಲಾಪುರ, ಚೌಳೂರು, ಜುಂಜರಗುಂಟೆ, ಸೂರನಹಳ್ಳಿ ಮುಂತಾದ ಕಡೆಗಳಲ್ಲಿ ಪಕ್ಷದ ಅಭ್ಯರ್ಥಿಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುತ್ತಿರುವ ದಳದ ಕಾರ್ಯಕರ್ತರು, ಮುಖಂಡರು:
ಕಾಂಗ್ರೆಸ್ ಶಾಸಕ ಟಿ.ರಘುಮೂರ್ತಿ ಅವರ ಕಾರ್ಯ ಮೆಚ್ಚಿ ಜೆಡಿಎಸ್ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್‌ಗೆ ಸೇರ್ಪಡೆಯಾದ ನಾಗರಾಜು, ಇನ್ನಿತರೆ ಮುಖಂಡರನ್ನು ಸ್ವಾಗತಿಸಿದ ಅವರು, ಚುನಾವಣೆ ಪ್ರಚಾರ ಕಾರ್ಯ ಆರಂಭವಾದಾಗಿನಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ನೂರಾರು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಭೇಷರತ್ ಬೆಂಬಲ ವ್ಯಕ್ತಪಡಿಸಿ ಸೇರ್ಪಡೆಯಾಗಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ಧಾರೆ. ಇಡೀ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ವಾತಾವರಣ ಹೆಚ್ಚುತ್ತಿದೆ.
ಚಂದ್ರಪ್ಪ ಗೆದ್ದರೆ ಭದ್ರಾ ಮೇಲ್ದಂಡೆ ಯೋಜನೆಗೆ ವೇಗ
ಬಿ.ಎನ್.ಚಂದ್ರಪ್ಪ ಲೋಕಸಭಾ ಸದಸ್ಯರಾಗಿ ಆಯ್ಕೆಯಾದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯೂ ಸೇರಿದಂತೆ ಹಲವಾರು ನೀರಾವರಿ ಯೋಜನೆಗಳಿಗೆ ಅನುದಾನ ತಂದು ಕಾರ್ಯಗತಗೊಳಿಸುತ್ತಾರೆಂಬ ವಿಶ್ವಾಸ ನನಗಿದೆ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗದ್ದಿಗೆ ತಿಪ್ಪೇಸ್ವಾಮಿ, ಪರಶುರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ, ಚನ್ನಕೇಶವ, ಚೌಳೂರು ಬಸವರಾಜು, ಕೆ.ಟಿ.ಮುತ್ತುರಾಜ್ ಮುಂತಾದವರು ಪ್ರಚಾರ ಕಾರ್ಯದಲ್ಲಿ ತೊಡಗಿದ್ದರು.