Chitradurga news | nammajana.com | 29-07-2025
ನಮ್ಮಜನ.ಕಾಂ, ಚಿತ್ರದುರ್ಗ: ಮಳೆ ಹಾನಿಯಿಂದ(Rain Damage) ಮನೆ ಕಳೆದುಕೊಂಡ ಕುಟುಂಬಸ್ಥರನ್ನು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಭೇಟಿ ಮಾಡಿ ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿ, ಸರ್ಕಾರದಿಂದ ಮನೆಗಳನ್ನು ಮಂಜೂರು ಮಾಡಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಜೆಜೆಎಂ ಕಾಮಗಾರಿ ಪರಿಶೀಲಿಸಿದ ಜಿ.ಪಂ. ಸಿಇಒ ಡಾ.ಎಸ್.ಆಕಾಶ್

ತಾಲೂಕಿನ ಓಬಣ್ಣನಹಳ್ಳಿ ಗ್ರಾಮಕ್ಕೆ ಮಂಗಳವಾರ ಭೇಟಿ ನೀಡಿ ಮಳೆ ಹಾನಿಯಿಂದಾಗಿ ಮನೆಯನ್ನು ಕಳೆದುಕೊಂಡAತಹ ತಿಮ್ಮಯ್ಯ, ತಿಮ್ಮಕ್ಕ ಎಂಬುವರ ಮನೆಯು ಕುಸಿದಿದ್ದು ಅದೃಷ್ಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಮನೆಯನ್ನ ಕಳೆದುಕೊಂಡು ಕಂಗಲಾಗಿದ್ದ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ದಾವಿಸಿ ಆರ್ಥಿಕ ಸಹಾಯ ಮಾಡಿದ್ದಾರೆ.
ಕ್ಷೇತ್ರದ ಅಭಿವೃದ್ಧಿಗೋಸ್ಕರ(Rain Damage) ಮುಖ್ಯಮಂತ್ರಿಗಳು ಹಾಗೂ ಸಚಿವರನ್ನು ಭೇಟಿ ಮಾಡಿ ಅನುದಾನಗಳನ್ನು ತಂದು ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡುವೆ, ಈಗಾಗಲೇ ಶಾಸಕರ ಅನುದಾನದ ಅಡಿಯಲ್ಲಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿ, ಚೆಕ್ ಡ್ಯಾಂಗಳು, ಅಂಗನವಾಡಿ ಕೇಂದ್ರಗಳು ಇತರೆ ಅಭಿವೃದ್ಧಿ ಕಾರ್ಯಗಳ ಭೂಮಿ ಪೂಜೆಯನ್ನು ನೆರವೇರಿಸಲಾಗಿದೆ, ಮುಂದಿನ ದಿನಗಳಲ್ಲಿ ಉಳಿದಂತಹ ಕ್ಷೇತ್ರಗಳ ಹಳ್ಳಿಗಳಲ್ಲಿಯೂ ಸಹ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ತಿಳಿಸಿದರು.
ಗ್ರಾಮದಲ್ಲಿ ಸಿಸಿ ರಸ್ತೆಗಳು ಬಾಕ್ಸ್ ಚರಂಡಿ ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆಗಳನ್ನ ಎದುರಿಸುತ್ತಿದ್ದೇವೆ ಎಂದು ಶಾಸಕರಿಗೆ ಗ್ರಾಮಸ್ಥರು ಮನವಿ ಮಾಡಿದರು ಮನವಿಗೆ ಸ್ಪಂದಿಸಿದ ಶಾಸಕರು ಗ್ರಾಮಕ್ಕೆ ಸಿಸಿ ರಸ್ತೆ ಹಾಗೂ ಬಾಕ್ಸ್ ಚರಂಡಿಗಳನ್ನ ನಿರ್ಮಾಣ ಮಾಡಿಕೊಡುವುದಕ್ಕೆ ಅತಿ ಶೀಘ್ರದಲ್ಲೇ ಭೂಮಿ ಪೂಜೆಯನ್ನು ಮಾಡಲಾಗುವುದು ಎಂದು ಗ್ರಾಮಸ್ಥರಿಗೆ ಸ್ಥಳದಲ್ಲೇ ಭರವಸೆ ನೀಡಿದರು.
ಇದನ್ನೂ ಓದಿ: ಸರ್ಕಾರಕ್ಕೆ ಯೂರಿಯಾ ಬಿಸಿ, ಸರ್ಕಾರದ ವಿರುದ್ಧ BJP ಕಿಡಿ
ಗ್ರಾಮದಲ್ಲಿರುವಂತಹ ಈಶ್ವರ(Rain Damage) ದೇವಾಲಯ ದೇವಸ್ಥಾನದ ಜೀರ್ಣೋದ್ಧಾರಕ್ಕೆ 5 ಲಕ್ಷ ಹಣವನ್ನು ಸ್ಥಳದಲ್ಲೇ ದೇವಾಲಯದ ಕಮಿಟಿಯವರಿಗೆ ಚೆಕ್ ವಿತರಿಸಿದ್ದಾರೆ.
ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಗ್ಯಾರಟಿ ಸಮಿತಿ ಅಧ್ಯಕ್ಷರಾದ ಶಿವಣ್ಣ, ಓಬಣ್ಣನಹಳ್ಳಿ ಗ್ರಾಮ ಪಂಚಾಯತಿ ಸದಸ್ಯ ಓಬಳೇಶ್, ಚಿತ್ರದುರ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್,ಗ್ರಾಮಸ್ಥರಾದ ವೆಂಕಟೇಶ್, ಹನುಮಂತಪ್ಪ, ತಿಮ್ಮಯ್ಯ, ರುದ್ರಪ್ಪ, ಚಂದ್ರಪ್ಪ, ರಮೇಶ್, ಈಶ್ವರ್, ಜಯಣ್ಣ, ಹನುಮಂತಪ್ಪ, ತಿಮ್ಮಪ್ಪ ನಾಗರಾಜ್, ಮಂಜುನಾಥ್ ಹಾಗೂ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252