Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Monsoon is seasonal: ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸೇರಿ ಜಿಲ್ಲಾಡಳಿತದ ಸಿದ್ದತೆ ಬಗ್ಗೆ ಡಿಸಿ ಹೇಳಿದ್ದಿಷ್ಟು
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Monsoon is seasonal: ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸೇರಿ ಜಿಲ್ಲಾಡಳಿತದ ಸಿದ್ದತೆ ಬಗ್ಗೆ ಡಿಸಿ ಹೇಳಿದ್ದಿಷ್ಟು
ಇಂದಿನ ಸುದ್ದಿ

Monsoon is seasonal: ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆ ಸೇರಿ ಜಿಲ್ಲಾಡಳಿತದ ಸಿದ್ದತೆ ಬಗ್ಗೆ ಡಿಸಿ ಹೇಳಿದ್ದಿಷ್ಟು

Editor Nammajana
Last updated: 23 May 2024 05:25
By Editor Nammajana 6 Min Read
Share
SHARE

Chitradurga news | nammajana.com | 23-5-2024

ಮುಂಗಾರು ಹಂಗಾಮಿನ ಪೂರ್ವಸಿದ್ಧತಾ ಕಾರ್ಯಾಗಾರ

ನಮ್ಮಜನ.ಕಾಂ, ಚಿತ್ರದುರ್ಗ: ಮುಂಗಾರು ಹಂಗಾಮಿಗೆ (Monsoon is seasonal)ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ (Monsoon is seasonal)ಪೂರ್ವಸಿದ್ಧತಾ ಕಾರ್ಯಾಗಾರ ಹಾಗೂ ಕೃಷಿ ಪರಿಕರಗಳ ಮಾರಾಟಗಾರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ  ಲಕ್ಷ ಹೆಕ್ಟೇರ್ ಮುಂಗಾರು ಹಂಗಾಮಿಗೆ ಬಿತ್ತನೆಗೆ ಗುರಿ (Monsoon is seasonal)

ಚಿತ್ರದುರ್ಗ ಕೃಷಿಯಾಧಾರಿತ ಜಿಲ್ಲೆಯಾಗಿದ್ದು, ಈ ಬಾರಿ ಪೂರ್ವ ಮುಂಗಾರಿನಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಹಂಗಾಮಿಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ 3 ಲಕ್ಷಕ್ಕೂ ಹೆಚ್ಚು ಹೆಕ್ಟೇರ್‍ನಲ್ಲಿ ಮುಂಗಾರು ಹಂಗಾಮಿಗೆ (Monsoon is seasonal)ಬಿತ್ತನೆ ಗುರಿ ಹೊಂದಲಾಗಿದೆ. ಹಾಗಾಗಿ ಮುಖ್ಯವಾಗಿ ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ವಿತರಣೆ, ಕೃಷಿ ಚಟುವಟಿಕೆಯಲ್ಲಿ ಹೊಸ ತಾಂತ್ರಿಕತೆ ಅಳವಡಿಕೆ, ಹೊಸ ತಳಿ ಹಾಗೂ ಹೆಚ್ಚಿನ ಇಳುವರಿಯ ಬಿತ್ತನೆ ಬೀಜಗಳ ಪರಿಚಯವನ್ನು ನಿಗಧಿತ ಸಮಯದಲ್ಲಿ, ನಿರ್ಧಿಷ್ಟ ಅವಧಿಯಲ್ಲಿ ರೈತರಿಗೆ ಅಗತ್ಯ ಮಾಹಿತಿ ತಲುಪಿಸುವ ವ್ಯವಸ್ಥೆ ಮಾಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯ ರೈತರು ಕೃಷಿ ಚಟುವಟಿಕೆ ಕೈಗೊಳ್ಳಲು ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರಗಳು ನಿಗಧಿತ ಸಮಯಕ್ಕೆ ದೊರೆಯುವಂತಾಗಬೇಕು ಎಂದರು.

ಜಿಲ್ಲೆಯ ಅಗತ್ಯಕ್ಕೆ ತಕ್ಕಂತೆ ಬಿತ್ತನೆ ಬೀಜ, ರಸಗೊಬ್ಬರ ಪ್ರಮಾಣವನ್ನು ದಾಸ್ತಾನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಕಳಪೆ ಬಿತ್ತನೆ ಬೀಜ ಸರಬರಾಜು ಆಗದಂತೆ ಕ್ರಮವಹಿಸುವ ಮೂಲಕ ಅದರ ಗುಣಮಟ್ಟವನ್ನು ಪರಿಶೀಲನೆ ನಡೆಸಿ, ನಿಗಧಿತ ಅವಧಿಯಲ್ಲಿ ಪೂರೈಕೆ ಮಾಡಬೇಕು. ಮುಂಗಾರು ಪೂರ್ವ (Monsoon is seasonal)ಸಿದ್ಧತೆಯ ಈ ಹಂತದಲ್ಲಿ ರೈತರಿಗೆ ಅಗತ್ಯವಾಗಿ ಬೇಕಾಗಿರುವ ಸಲಹೆ ಸೂಚನೆಗಳನ್ನು ನೀಡುವುದು ಕೃಷಿ ಇಲಾಖೆ ಅಧಿಕಾರಿಗಳ ಕರ್ತವ್ಯವೂ ಹೌದು ಎಂದು ತಿಳಿಸಿದರು.

ನಿಗದಿತ ದರಕ್ಕೆ  ಬೀಜ, ಗೊಬ್ಬರ ಮಾರಟ ಮಾಡಿ (Monsoon is seasonal)

ಜಿಲ್ಲೆಯ ಕೃಷಿ ಪರಿಕರಗಳ ಮಾರಾಟಗಾರರು ಬಿತ್ತನೆ, ರಸಗೊಬ್ಬರವನ್ನು ನಿಗಧಿತ ದರಕ್ಕೆ ಸರಿಯಾಗಿ ಮಾರಾಟ ಮಾಡಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರಕ್ಕೆ ಮಾರಾಟ ಮಾಡಬಾರದು ಎಂದು ಸೂಚನೆ ನೀಡಿದ ಅವರು, ರೈತ ಸಂಪರ್ಕ ಕೇಂದ್ರಗಳು ಹಾಗೂ ಇಲಾಖೆ ಅಧಿಕಾರಿಗಳು ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ರೈತರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು.

ರೈತ ಸಂಪರ್ಕ ಕೇಂದ್ರದಲ್ಲಿ 24 ಗಂಟೆ ಸಮರ್ಪಕ ಮಾಹಿತಿ ನೀಡಿ (Monsoon is seasonal)

ರೈತ ಸಂಪರ್ಕ ಕೇಂದ್ರಗಳು 24*7 ಕಾರ್ಯನಿರ್ವಹಿಸುವ ಮೂಲಕ ರೈತರಿಗೆ ಸಮರ್ಪಕವಾದ ಮಾಹಿತಿ ನೀಡಬೇಕು ಎಂದರು.

ರೈತರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ:

ಬೆಳೆವಿಮೆ ಹಾಗೂ ಬೆಳೆ ನಷ್ಟ ಪರಿಹಾರ ಪಾವತಿಗೆ ಸಂಬಂಧಪಟ್ಟಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿ, ಉಪವಿಭಾಗಾಧಿಕಾರಿಗಳ ಕಚೇರಿ ಸೇರಿದಂತೆ ಜಿಲ್ಲೆಯ ಆಯಾ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ಸ್ಥಾಪಿಸಿ, ರೈತರಿಂದ ದೂರುಗಳನ್ನು ಸ್ವೀಕೃತಿ ಮಾಡಲಾಗುತ್ತಿದೆ ಎಂದು ತಿಳಿಸಿದ ಅವರು, ಕೆಲವು ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದು, ಬೆಳೆವಿಮೆ ಹಾಗೂ ಬೆಳೆನಷ್ಟ ಪಾವತಿ ಸಂಬಂಧ ಹಾಗೂ ರೈತರ ಸಮಸ್ಯೆಗಳಿಗೆ ಸರಿಯಾದ ಮಾಹಿತಿ ನೀಡದೇ ಇರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: CHITRADURGA WEATHER: ಚಿತ್ರದುರ್ಗದಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಂದಿನ ಹವನಮಾನ ವರದಿ

 ರೈತರ ಇತರೆ ಸಾಲಕ್ಕೆ ಜಮೆ ಮಾಡಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸರ್ಕಾರದ ನಿರ್ದೇಶನ ಹಾಗೂ ಜಿಲ್ಲಾಡಳಿತದಿಂದಲೂ ಈಗಾಗಲೇ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಮೂಲಕ ಬ್ಯಾಂಕ್‍ಗಳಿಗೆ ನಿರ್ದೇಶನ ನೀಡಲಾಗಿದ್ದು, ಬೆಳೆಪರಿಹಾರ, (Monsoon is seasonal) ಪಿಂಚಣಿ ಹಣವನ್ನು ರೈತರ ಸಾಲದ ಖಾತೆಗಳಿಗೆ ಯಾವುದೇ ಕಾರಣಕ್ಕೂ ಜಮೆ ಮಾಡಿಕೊಳ್ಳಬಾರದು. ಒಂದು ವೇಳೆ ತಾಂತ್ರಿಕ ಕಾರಣದಿಂದ ಸಾಲದ ಖಾತೆಗೆ ಜಮೆಯಾಗಿದ್ದರೆ, ಕಡ್ಡಾಯವಾಗಿ ಮರು ಪಾವತಿ ಮಾಡಬೇಕು.ಮರು ಪಾವತಿ ಮಾಡದೇ ಇರುವ ಬ್ಯಾಂಕ್‍ಗಳ ವಿರುದ್ಧ ಕಾನೂನು ರೀತ್ಯಾ ಕ್ರಮಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕೈಗೊಂಡಿರುವ ಬೆಳೆ ಸಮೀಕ್ಷೆ ಪ್ರಯೋಗಗಳ ವ್ಯಾತ್ಯಾಸದಿಂದಾಗಿ ಸುಮಾರು ರೈತರಿಗೆ ಬೆಳೆವಿಮೆ ಪಾವತಿಯಾಗಿಲ್ಲ. ಹಾಗಾಗಿ ಮರು ಬೆಳೆ ಸಮೀಕ್ಷೆ ಪ್ರಯೋಗ ನಡೆಸಿ ಬೆಳೆವಿಮೆ ಪಾವತಿ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಆದರೆ ಪ್ರಸಕ್ತ ಸಾಲಿನ ಬೆಳೆ ಸಮೀಕ್ಷೆ ಪ್ರಯೋಗಗಳ ಸಂದರ್ಭದಲ್ಲಿ ಇಂತಹ ವ್ಯತ್ಯಾಸಗಳು ಆಗಬಾರದು.

ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಪ್ರಯೋಗ ಕೈಗೊಳ್ಳುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾರ್ಯಾಗಾರ ಹಮ್ಮಿಕೊಂಡು, ಬೆಳೆ ಸಮೀಕ್ಷೆ ಪ್ರಯೋಗಗಳ ಕುರಿತು ಮಾಹಿತಿ ನೀಡಲಾಗುವುದು. ಬೆಳೆ ಸಮೀಕ್ಷೆ ಪ್ರಯೋಗಗಳನ್ನು ಕ್ರಮಬದ್ಧವಾಗಿ, ನಿಯಮಬದ್ಧವಾಗಿ ಮಾಡಬೇಕು ಎಂದರು.

ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ಯಾವುದೇ ರೀತಿಯ ಸಮಸ್ಯೆಗಳು ಬರಬಾರದು ಎಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಮುಂಗಾರು ಹಂಗಾಮು (Monsoon is seasonal) ಪೂರ್ವ ಸಿದ್ಧತೆ ಕುರಿತು ಸೂಕ್ತ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಸುಮಾರು 80 ಸಾವಿರ ರೈತರಿಗೆ ರೂ.284 ಕೋಟಿ ಬೆಳೆವಿಮೆ ಪಾವತಿಯಾಗಿದೆ. ಇದರ ಜೊತೆಗೆ ರೂ. 144 ಕೋಟಿ ಬೆಳೆಹಾನಿ ಪರಿಹಾರ ಸೇರಿದಂತೆ ಒಟ್ಟು ರೂ.400 ಕೋಟಿ ಪರಿಹಾರದ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದರು.

ಕೃಷಿ ಪರಿಕರಗಳ ವ್ಯವಸ್ಥಿತ ವಿತರಣೆಗೆ ಜೊತೆಜೊತೆಗೆ ನವೀನ ತಾಂತ್ರಿಕತೆ ಅಳವಡಿಕೆ ಹಾಗೂ ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮುಂಗಾರು ಹಂಗಾಮಿನಲ್ಲಿ ಕಾರ್ಯಕ್ರಮ, ರೂಪುರೇಷೆಗಳನ್ನು ಕೈಗೊಳ್ಳಲಾಗಿದೆ. ಈ ಬಾರಿಯ ಮುಂಗಾರು ಉತ್ತಮ ಆಶದಾಯಕವಾಗಿದ್ದು, ಕಳೆದ 10 ದಿನಗಳಿಂದ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಶೇ.9ರಷ್ಟು ಹೆಚ್ಚುವರಿ ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 7 ಲಕ್ಷ 70 ಸಾವಿರ ಹೆಕ್ಟೇರ್ ಪ್ರದೇಶವಿದ್ದು, ಜಿಲ್ಲೆಯ ಆರು ತಾಲ್ಲೂಕುಗಳು ಸಹ ಭೌಗೋಳಿಕ ಭಿನ್ನತೆಯನ್ನು ಕಾಣಬಹುದಾಗಿದೆ. ಕೃಷಿ ಪ್ರಧಾನ ಜಿಲ್ಲೆಯಾಗಿರುವ ಚಿತ್ರದುರ್ಗದಲ್ಲಿ ಶೇ.75ರಷ್ಟು ಮುಂಗಾರು ( Monsoon is seasonal)  ಕೃಷಿ ಜಿಲ್ಲೆಯಲ್ಲಿದೆ. ಮುಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳಾದ ಸುಮಾರು 3 ಲಕ್ಷ 4 ಸಾವಿರ ಹೆಕ್ಟೇರ್ ಮುಂಗಾರು ಹಂಗಾಮಿನಲ್ಲಿ ಬಿತ್ತನೆಯಾಗುವ ಪ್ರದೇಶವಾಗಿದೆ.

ಪ್ರಮುಖವಾಗಿ 1 ಲಕ್ಷ 14 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಶೇಂಗಾ ಬಿತ್ತನೆ, ಮುಸುಕಿನ ಜೋಳ ಸುಮಾರು 90 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಲಿದೆ. 50 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಬಿತ್ತನೆಯಾಗಲಿದೆ. 21 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳು ಬಿತ್ತನೆಯಾಗಲಿದೆ.

ರಾಜ್ಯದಲ್ಲಿಯೇ ಚಿತ್ರದುರ್ಗ ಜಿಲ್ಲೆಯಲ್ಲಿ ವಿಶೇಷವಾಗಿ ಹೊಸದುರ್ಗ ತಾಲ್ಲೂಕಿನಲ್ಲಿ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತಿದೆ. ಇದಕ್ಕೆ ಪೂರಕವಾಗಿ ಈ ಬಾರಿ 4 ಕೋಟಿ ವೆಚ್ಚದಲ್ಲಿ ಸಿರಿಧಾನ್ಯ ಮೌಲ್ಯವರ್ಧನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಮುಂಗಾರು ಹಂಗಾಮಿಗೆ (Monsoon is seasonal) ಸಂಬಂಧಪಟ್ಟಂತೆ ಜಿಲ್ಲೆಗೆ 64 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದೆ. 12 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ಬಿತ್ತನೆ ಸಂದರ್ಭದಲ್ಲಿ ಅವಶ್ಯಕತೆ ಇದ್ದು, ಪ್ರಸ್ತುತ 4 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರ ದಾಸ್ತಾನು ಇದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: Challakere: ಜಾತ್ರೆಯಲ್ಲಿ ಜನರ ಮೇಲೆ ಹಾರಿದ ಬೀಡಾಡಿ ದನ, ಮುಂದೆ ಆಗಿದ್ದೇನು ನೋಡಿ

ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಅಧ್ಯಕ್ಷ ರೇವಣಸಿದ್ದಪ್ಪ ಮಾತನಾಡಿ, ರಸಗೊಬ್ಬರ ಸಮರ್ಪಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ರೇಕ್ ಪಾಯಿಂಟ್ ಅವಶ್ಯಕತೆ ಇದೆ. ದಾವಣಗೆರೆ ರೇಕ್ ಪಾಯಿಂಟ್‍ನಿಂದ ಚಿತ್ರದುರ್ಗ ಜಿಲ್ಲೆಗೆ ರಸಗೊಬ್ಬರ ಸರಬರಾಜು ಮಾಡಲಾಗುತ್ತಿದೆ. ಹಾಗಾಗಿ ಜಿಲ್ಲೆಗೆ ರೇಕ್ ಪಾಯಿಂಟ್ ಅವಶ್ಯಕತೆ ಇದೆ. ಈ ಕುರಿತು ಜಿಲ್ಲಾಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: Vani Vilasa Sagara Dam: ಮೇ 22ರ ವಿ.ವಿ.ಸಾಗರ ಡ್ಯಾಂ ನೀರಿನ ಮಟ್ಟ

ಇದೇ ಸಂದರ್ಭದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಔಷಧಿ ಸಿಂಪರಣೆ ಮಾಡುವ ಡ್ರೋನ್‍ಗಳಿಗೆ ಚಾಲನೆ ನೀಡಿದರು.( Monsoon is seasonal)

ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳು

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ತಿಮ್ಮಪ್ಪ, ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಓಂಕಾರಪ್ಪ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕ ತಿಪ್ಪೇಶ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಉಪಕೃಷಿ ನಿರ್ದೇಶಕರಾದ ಶಿವಕುಮಾರ್, ಪ್ರಭಾಕರ್, ಸಹಾಯಕ ಕೃಷಿ ನಿರ್ದೇಶಕರಾದ ಚಂದ್ರಕುಮಾರ್, ಪ್ರವೀಣ್ ಚೌಧರಿ, ತಹಶೀಲ್ದಾರ್ ಡಾ.ನಾಗವೇಣಿ, ಇಪ್ಕೊ ಸಂಸ್ಥೆಯ ಜಿಲ್ಲಾಮಟ್ಟದ ಅಧಿಕಾರಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕೃಷಿ ಪರಿಕರಗಳ ಮಾರಾಟಗಾರರು ಇದ್ದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:ChitradurgaChitradurga NewsCollector NoticefarmerFertilizer SupplyFor Monsoon SeasonKannada Newskannada suddiNammajana.comNecessary PreparednessSeedಅಗತ್ಯ ಸಿದ್ದತೆಕನ್ನಡ ನ್ಯೂಸ್ಕನ್ನಡ ಸುದ್ದಿಗೊಬ್ಬರ ಪೂರೈಕೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಿಲ್ಲಾಧಿಕಾರಿ ಸೂಚನೆನಮ್ಮಜನ.ಕಾಂಬೀಜಮುಂಗಾರು ಹಂಗಾಮಿಗೆರೈತ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article CHITRADURGA WEATHER: ಚಿತ್ರದುರ್ಗದಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ಇಂದಿನ ಹವನಮಾನ ವರದಿ
Next Article District Hospital: ಚಿತ್ರದುರ್ಗ | ಹೃದಯಘಾತ ಮತ್ತು ಪಾಶ್ರ್ವವಾಯು ರೋಗಕ್ಕೆ ಔಷಧಿ ಲಭ್ಯ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?