
Chitradurga news | nammajana.com | 17-5-2024
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ತಾಲ್ಲೂಕಿನ ಕುಂಚಿಗನಾಳು ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ (Morarji) ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಥಮ ಪಿಯುಸಿ ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಪ್ರವೇಶಾತಿ ಪ್ರಾರಂಭವಾಗಿದ್ದು, ಶೇ.75 ರಷ್ಟು ಅಲ್ಪಸಂಖ್ಯಾತರಿಗೆ ಮತ್ತು ಇನ್ನುಳಿದ ಶೇ.25ರಷ್ಟು ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಾಗಿರುತ್ತವೆ. ಕಾಲೇಜಿಗೆ ಪ್ರವೇಶ ಪಡೆಯುವುದರಿಂದ ಪದವಿ ಪೂರ್ವ ಶಿಕ್ಷಣದ ಜೊತೆಗೆ ಸಿಇಟಿ, ನೀಟ್, ಜೆಇಇ ಮತ್ತು ಸಿಎ, ಸಿಎಸ್‍ಎಟಿ ಆನ್‍ಲೈನ್ ಮತ್ತು ಆಪ್‍ಲೈನ್ ತರಗತಿಗಳು ನಡೆಸಲಾಗುವುದು ಮತ್ತು ಕಲಿಕಾ ಸಾಮಾಗ್ರಿಗಳನ್ನು ಹಾಗೂ ಇತರೆ ಸೌಲಭ್ಯಗಳನ್ನು ಉಚಿತವಾಗಿ ನೀಡಲಾಗುವುದು.

ಇದನ್ನೂ ಓದಿ: Dina Bhavishya: ಇಂದಿನ ರಾಶಿ ಭವಿಷ್ಯ
ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ (Morarji) ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಬಿ.ಲಿಂಗರಾಜ್ ತಿಳಿಸಿದ್ದಾರೆ.