Chitradurga news|Nammajana.com|14-8-2025
ನಮ್ಮಜನ.ಕಾಂ, ಚಿತ್ರದುರ್ಗ: ಒಳ ಮೀಸಲಾತಿ (Nagamohan Das Report) ಜಾರಿಗೊಳಿಸಲು ಮೀನಾಮೇಷ ಎಣಿಸುತ್ತಿರುವ ಸರಕಾರ ತನ್ನ ನಿಲುವು ಬದಲಿಸಿ ನ್ಯಾ. ನಾಗಮೋಹನ್ ದಾಸ್ ವರದಿಯನ್ವಯ ಶೀಘ್ರ ಒಳ ಮೀಸಲಾತಿ ಜಾರಿಗೆ ತರುವಂತೆ ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರ ಒತ್ತಾಯಿಸಿದ್ದಾರೆ.
ಶ್ರೀಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ನೇತೃತ್ವದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆಗ್ರಹಿಸಿತು.

ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಕಳೆದ (Nagamohan Das Report) ಮೂರು ದಶಕಗಳಿಂದ ಮಾದಿಗ ಸಮುದಾಯ ನಡೆಸುತ್ತಿರುವ ಹೋರಾಟ ಹಾಗೂ ಒಳ ಮೀಸಲು ನೀಡದೆ ಇರುವುದರಿಂದ ಸಮುದಾಯಕ್ಕೆ ಆಗುತ್ತಿರುವ ತಾರತಮ್ಯದ ಕುರಿತು ವಿವರಿಸಿದ ಶ್ರೀಗಳು, ಯಾವುದೇ ಒತ್ತಡಕ್ಕೆ ಮಣಿಯದೆ ಜಾರಿಗೊಳಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ: Dogs: ಮಿತಿಮೀರಿದ ನಾಯಿಗಳ ನಿಯಂತ್ರಣಕ್ಕೆ ಮುಂದಾದ ಚಳ್ಳಕೆರೆ ನಗರಸಭೆ
ಒಳ ಮೀಸಲಾತಿ ಸರಕಾರವನ್ನು ಸ್ವಾಮೀಜಿಯವರ ಮನವಿಗೆ ಸ್ಪಂದಿಸಿದ ಸಿಎಂ ಹಾಗೂ ಡಿಸಿಎಂ ಸರಕಾರ ಸಾಮಾಜಿಕ (Nagamohan Das Report) ನ್ಯಾಯದ ಪರವಿದೆ ಹೀಗಾಗಿ ಒಳ ಮೀಸಲಾತಿ ಜಾರಿ ಮಾಡುವುದು ಶತಸಿದ್ದ ಎಂದು ಭರವಸೆ ನೀಡಿದರು.
ನಿಯೋಗದಲ್ಲಿ ಮಾಜಿ ಸಂಸತ್ ಸದಸ್ಯರಾದ ಬಿಎನ್ ಚಂದ್ರಪ್ಪ ಮಾಜಿ ರಾಜ್ಯಸಭಾ ಸದಸ್ಯರಾದ ಡಾ. ಎಲ್.ಹನುಮಂತಯ್ಯ ಸೇರಿದಂತೆ ಮಾದಿಗ ಸಮುದಾಯದ ಮುಖಂಡರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252