
Chitradurga news|nammajana.com|14-2-2025
ನಮ್ಮಜನ.ಕಾಂ, ಚಿತ್ರದುರ್ಗ: ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿದ್ದ ತಾಂತ್ರಿಕ ಸಹಾಯಕ ಆರ್.ಸಂಜಯ್ ಅವರನ್ನು ಕರ್ತವ್ಯ ಲೋಪ ಹಿನ್ನಲೆಯಲ್ಲಿ (Narega) ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
ಮೊಳಕಾಲ್ಮೂರು ತಾಲ್ಲೂಕು ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ, ಪ್ರಸ್ತುತ ಚಳ್ಳಕೆರೆ ತಾಲ್ಲೂಕು ತಾಂತ್ರಿಕ ಸಹಾಯಕ ಆರ್.ಸಂಜಯ್ ಇವರು ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಚಿಕ್ಕೋಬನಹಳ್ಳಿ ಗ್ರಾಮದ ರಿ.ಸರ್ವೆ ನಂ.27/1ಎ ರ ಜಮೀನಿನಲ್ಲಿ ಪಿಡಿಒ ಮತ್ತು ಜಮೀನು ಮಾಲೀಕರಾದ ಮಂಗಳಮ್ಮ ಕೋಂ ಗುಡ್ಡುಪಾಲಯ್ಯ ಅವರ ಹೆಸರಿನಲ್ಲಿರುವ ಜಮೀನಿನಲ್ಲಿ ವಿರುಪಣ್ಣ ನಾಯಕ ಇವರ ಹೆಸರಿನಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ನಿಯಮಬಾಹಿರವಾಗಿ (Narega) ಅನುಷ್ಠಾನಗೊಳಿಸಿರುವುದರಿಂದ ಜಿಲ್ಲಾ ಪಂಚಾಯಿತಿ ಓಂಬುಡ್ಸ್ ಪರ್ಸನ್ ತನಿಖೆ ನಡೆಸಿದ ಸಂದರ್ಭದಲ್ಲಿ ಕಂಡುಬಂದಿದ್ದು, ನರೇಗಾ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪವೆಸಗಿದ್ದಾರೆ.

ಇದನ್ನೂ ಓದಿ: Suspension | ಜೆ.ಬಿ.ಹಳ್ಳಿ PDO ಸೇವೆಯಿಂದ ಅಮಾನತು
ನರೇಗಾ ಯೋಜನೆಯ ಮಾರ್ಗಸೂಚಿ ಉಲ್ಲಂಘನೆ (Narega) ಮಾಡಿರುವುದರಿಂದ ತಾಂತ್ರಿಕ ಸಹಾಯಕ ಆರ್.ಸಂಜಯ್ ಅವರ ಸೇವೆಯು ಇಲಾಖೆಗೆ ಅವಶ್ಯಕತೆ ಇಲ್ಲದಿರುವುದರಿಂದ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.
