Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್
ಇಂದಿನ ಸುದ್ದಿ

New DC Office | ಜಿಲ್ಲಾಡಳಿತ ಭವನ ಕಟ್ಟಡ ಆರು ತಿಂಗಳಲ್ಲಿ ಪೂರ್ಣ: ಸಚಿವ ಡಿ.ಸುಧಾಕರ್

Editor Nammajana
Last updated: 8 May 2025 17:46
By Editor Nammajana 1 Min Read
Share
SHARE

Chitradurga news|nammajana.com|08-05-2025

ನಮ್ಮಜನ.ಕಾಂ, ಚಿತ್ರದುರ್ಗ: ನೂತನ ಜಿಲ್ಲಾಡಳಿತ ಭವನದ ಕಟ್ಟಡ ನಿರ್ಮಾಣ ಕಾರ್ಯವನ್ನು ಇನ್ನೂ ಆರು ತಿಂಗಳಲ್ಲಿ ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ (New DC Office) ಲೋಕಾರ್ಪಣೆಗೊಳಿಸಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.

ನಗರದ ಕುಂಚಿಗನಾಳ್ ಕಣಿವೆ ಬಳಿ ನಿರ್ಮಾಣವಾಗುತ್ತಿರುವ ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಗೆ ಭೇಟಿ ನೀಡಿ ಅವರು ಮಾತನಾಡಿದರು.

ರೂ.25 ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದ ಈ ಕಟ್ಟಡಕ್ಕೆ ಈಗಾಗಲೇ ರೂ.46 ಕೋಟಿ ವೆಚ್ಚವಾಗಿದೆ. ಪ್ರಸ್ತುತ ರೂಪಿಸಿರುವ ಯೋಜನೆಯಲ್ಲಿ ಕುಡಿಯುವ ನೀರು, ಕ್ಯಾಂಟೀನ್, ಸಂಪರ್ಕ ರಸ್ತೆ, ಪಾರ್ಕಿಂಗ್,  ಅಗ್ನಿನಿಯಂತ್ರಕ ವ್ಯವಸ್ಥೆ, (New DC Office) ಕೊರೆದಿರುವ ಗುಡ್ಡಕ್ಕೆ ರಕ್ಷಣಾ ವ್ಯವಸ್ಥೆ, ಪೀಠೋಪಕರಣಗಳು, ಇಂಟಿರಿಯರ್ ಸೇರಿದಂತೆ ಇನ್ನೂ ಹಲವು ಕಾಮಗಾರಿಗಳಿಗೆ ಯೋಜನಾ ವೆಚ್ಚ ಸಿದ್ಧಪಡಿಸಿರುವುದಿಲ್ಲ. ಈ ಎಲ್ಲ ಕಾಮಗಾರಿಗಳಿಗೆ ಇನ್ನೂ ಸುಮಾರು ರೂ.15 ಕೋಟಿ ಅನುದಾನದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಜಿಲ್ಲಾಡಳಿತ ಭವನದ ಕಟ್ಟಡ ಕಾಮಗಾರಿಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರ ಗಮನಕ್ಕೆ ತಂದು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಹೆಚ್ಚುವರಿ ಅನುದಾನ ಬಿಡುಗಡೆ ಮನವಿ ಮಾಡಲಾಗುವುದು ಎಂದು ಹೇಳಿದರು.
ನೂತನ ಜಿಲ್ಲಾಡಳಿತ ಭವನದ ಕಟ್ಟಡದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸೇರಿದಂತೆ ಹಲವು ಇಲಾಖೆಗಳು (New DC Office) ಕಾರ್ಯನಿರ್ವಹಿಸಲಿದ್ದು, ಚಿತ್ರದುರ್ಗ ಉಪವಿಭಾಗ ಕಚೇರಿ ನಗರದೊಳಗೆ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ, ಗುತ್ತಿಗೆದಾರ ಪಾಲಾಕ್ಷಯ್ಯ (New DC Office) ಇದ್ದರು.

You Might Also Like

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ

POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ

Gold Rate | ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ

TAGGED:ChitradurgaD. SudhakarDC OfficeDistrict In-charge MinisterNew DC OfficeT Raghumurthyಚಿತ್ರದುರ್ಗಜಿಲ್ಲಾ ಉಸ್ತುವಾರಿ ಸಚಿವಟಿ ರಘುಮೂರ್ತಿಡಿ. ಸುಧಾಕರ್ಡಿಸಿ ಆಫೀಸ್ಹೊಸ ಡಿಸಿ ಕಚೇರಿ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy1
Sleepy0
Angry0
Dead0
Wink0
Previous Article Hosadurga | ಮದುವೆ ಊಟ ಮಾಡಿದ 150 ಜನ ಅಸ್ವಸ್ಥ
Next Article Dina Bhavishya | ದಿನ ಭವಿಷ್ಯ , ಇವತ್ತು ಈ ರಾಶಿಗಳಿಗೆ ಪ್ರವಾಸ, ಆಸ್ತಿ ಖರೀದಿ ಯೋಗ!
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ
ದಿನ ಭವಿಷ್ಯ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ?
ದಿನ ಭವಿಷ್ಯ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?