Chitradurga News | Nammajana.com | 31-07-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ(New DC office) ಜಿಲ್ಲಾ ಅಭಿವೃದ್ಧಿಯ ವಿಚಾರ ಕುರಿತಂತೆ ಮುಖ್ಯಮಂತ್ರಿಯ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ ತಾಲೂಕು ಶಾಸಕರಾದ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿದ್ದಾರೆ.
ಇದನ್ನೂ ಓದಿ: ಕೃಷಿ ಪ್ರಶಸ್ತಿಗೆ ಅರ್ಜಿ

ಬೆಂಗಳೂರಿನ ವಿಕಾಸ ಸೌಧದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಿತ್ರದುರ್ಗ ನಗರದ ಅಭಿವೃದ್ಧಿ ವಿಚಾರದ ಬಗ್ಗೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚರ್ಚಿಸಿ ಅಭಿವೃದ್ಧಿ ಕಾರ್ಯಗಳ ಕ್ರಮ ಆದೇಶ ನೀಡುವಂತೆ ಮನವಿ ಮಾಡಿದ್ದಾರೆ.
ಚಿತ್ರದುರ್ಗ ನಗರದ ಮುಖ್ಯ ರಸ್ತೆ(New DC office) ಅಗಲೀಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದ ಮುಖ್ಯ ರಸ್ತೆಯನ್ನು ಡಿಪಿಆರ್ ಮಾಡುವಂತೆ ನಿರ್ದೇಶನವನ್ನು ನೀಡಿದ್ದಾರೆ.
ಚಿತ್ರದುರ್ಗ ನಗರದ ಹೊರವಲಯದ ಕುಂಚಿಗನಾಳ್ ಬಳಿ ಇರುವ ನೂತನ ಜಿಲ್ಲಾಧಿಕಾರಿ ಕಟ್ಟಡವನ್ನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ, ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ವಸತಿ ಗೃಹದ ಸಮೀಪದಲ್ಲಿ ನೂತನವಾಗಿ ಜಿಲ್ಲಾಧಿಕಾರಿ ಕಚೇರಿಯನ್ನು ನಿರ್ಮಿಸುವಂತೆ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ.
ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
ಈ ಸಂದರ್ಭದಲ್ಲಿ ಚಿತ್ರದುರ್ಗ(New DC office) ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗದ ಶಾಸಕ ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252