Chitradurga news |nammajana.com |30-5-2024
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದಲ್ಲಿ ಮೂರು ರಾಜ್ಯಮಟ್ಟದ ಪತ್ರಿಕಾ ‘ವಿತರಕರ’ (NEWSPAPER AGENT) ಸಮ್ಮೇಳನ ಯಶಸ್ವಿಯಾಗಿ ಜರುಗಿದ್ದು, ನಾಲ್ಕನೇ ವಿತರಕರ ರಾಜ್ಯ ಸಮ್ಮೇಳನವನ್ನು ಕೋಟೆ ನಗರಿ ಚಿತ್ರದುರ್ಗದಲ್ಲಿ ನಡೆಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಶಂಭುಲಿಂಗ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲೆಯ ಕಾರ್ಯನಿರತ ಪತ್ರಿಕಾ ವಿತರಕರ ಸಂಘದ (NEWSPAPER AGENT) ಸಹಯೋಗದಲ್ಲಿ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ನಡೆಸಿ ತಿರ್ಮಾನಿಸಲಾಯಿತು.

ರಾಜ್ಯದ ವಿವಿಧ ಜಿಲ್ಲೆಯ ಪತ್ರಿಕಾ ವಿತರಕರ (NEWSPAPER AGENT) ಸಂಘಟನೆಗಳ ಮತ್ತು ಮುಖಂಡರುಗಳ ಸಭೆಯಲ್ಲಿ ಎಲ್ಲರ ಸಮ್ಮುಖದಲ್ಲಿ ನಿರ್ಣಯವಾದ ಒಮ್ಮತದ ತೀರ್ಮಾನದಂತೆ ಸೆಪ್ಟೆಂಬರ್ 8 ರಂದು ಚಿತ್ರದುರ್ಗದಲ್ಲಿ ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ಇದನ್ನೂ ಓದಿ: Chitradurga: ಈ ಹಳ್ಳಿಗಳಲ್ಲಿ ಸಂಜೆ 5 ಗಂಟೆವರೆಗೆ ಕರೆಂಟ್ ಇರಲ್ಲ
ಈ ಪೂರ್ವಭಾವಿ ಸಭೆಯಲ್ಲಿ ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಹುಬ್ಬಳ್ಳಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ತುಮಕೂರು, ಬೆಂಗಳೂರಿನ ಗಾಂಧಿನಗರ, ವಿಜಯನಗರ ಪತ್ರಿಕಾ ವಿತರಕರ (NEWSPAPER AGENT) ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252