Chitradurga news | nammajana.com 30-07-2025
ನಮ್ಮಜನ.ಕಾಂ,ಚಿತ್ರದುರ್ಗ: ಸರ್ವೋಚ್ಛ(Notice) ಹಾಗೂ ಉಚ್ಛ ನ್ಯಾಯಾಲಯಗಳ ತೀರ್ಪು ಮತ್ತು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ-2014 ಕಾಯ್ದೆ ಅನುಸಾರ ಕೆರೆ ಒತ್ತುವರೆ ಮಾಡುವುದು ಕಾನೂನು ಬಾಹಿರವಾಗಿರುತ್ತದೆ.

ಇದನ್ನೂ ಓದಿ: ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು
ಈ ಹಿನ್ನಲೆಯಲ್ಲಿ ಚಿತ್ರದುರ್ಗ(Notice) ತಾಲ್ಲೂಕಿನ ಅನ್ನೇಹಾಳ್ ಕೆರೆ ಒತ್ತುವರಿ ಮಾಡಿದ ರೈತರಿಗೆ ಒತ್ತುವರಿ ತೆರವು ಮಾಡುವಂತೆ ಸಣ್ಣ ನೀರಾವರಿ ಮತ್ತು ಅಂರ್ತಜಲ ಅಭಿವೃದ್ಧಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ರೈತರು ಕೂಡಲೇ ಒತ್ತುವರಿ ತೆರವುಗೊಳಿಸಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
