Chitradurga news|nammajana.com|26-11-2024
ನಮ್ಮಜನ.ಕಾಂ, ಚಿತ್ರದುರ್ಗ: 2024-25ನೇ ಸಾಲಿನ ಹಿಂಗಾರು ಹಂಗಾಮಿನ ಈರುಳ್ಳಿ ನೀರಾವರಿ ಬೆಳೆಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) (Onion Insurance) ಯೋಜನೆಯಡಿ ಬೆಳೆ ವಿಮೆ ನೊಂದಣಿ ಪ್ರಾರಂಭವಾಗಿದೆ.
ಚಿತ್ರದುರ್ಗ ತಾಲ್ಲೂಕು ಕಸಬಾ ಹಾಗೂ ತುರುವನೂರು, ಚಳ್ಳಕೆರೆ ತಾಲ್ಲೂಕಿನ ಕಸಬಾ ಹಾಗೂ ತಳಕು, ಹಿರಿಯೂರು ತಾಲ್ಲೂಕಿನ (Onion Insurance) ಐಮಂಗಲ ಹಾಗೂ ಜೆ.ಜಿ.ಹಳ್ಳಿ ಹೋಬಳಿಗೆ ಈರುಳ್ಳಿ ನೀರಾವರಿ ಬೆಳೆಯನ್ನು ಅಧಿಸೂಚಿಸಲಾಗಿದೆ.

ಶೇ.90 ಇಡಿಮ್ಮಿಟಿ ಮಟ್ಟದ ನೀರಾವರಿ ಈರುಳ್ಳಿ ವಿಮೆ ಮೊತ್ತ ಹೆಕ್ಟೇರ್‌ಗೆ ರೂ.80500 ಇದ್ದು, ಇದರ ಶೇ.5 ರಷ್ಟು ರೈತ ವಿಮಾ ಕಂತು ರೂ.4025 ಆಗಿದೆ. ದಿ ಓರಿಯಂಟಲ್ ಇನ್ಸುರೆನ್ಸ್ ಕಂಪನಿ ಲಿಮಿಟೆಡ್ ವಿಮಾ ಕಂಪನಿಯಾಗಿ ಜಿಲ್ಲೆಗೆ ನಿಗಧಿಪಡಿಸಲಾಗಿದೆ.
ಇದನ್ನೂ ಓದಿ: ಸಚಿವ ಸುಧಾಕರ್ ಗೆ ಸೆಡ್ಡು ಹೊಡೆದು ಡಿಸಿಸಿ ಬ್ಯಾಂಕ್ ನಾಮ ನಿರ್ದೇಶನ ಸದಸ್ಯರಾದ ಶಾಸಕ ಟಿ.ರಘುಮೂರ್ತಿ | Chitradurga DCC Bank
ಬೆಳೆ ವಿಮೆ ನೊಂದಣಿಗೆ ಡಿಸೆಂಬರ್ 30 ಕಡೆಯ ದಿನವಾಗಿದೆ. ರೈತರು ವಿಮೆಯನ್ನು ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ ಹಾಗೂ ಆರ್ಥಿಕ ಸಂಸ್ಥೆಗಳಲ್ಲಿ ನೊಂದಣಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಸಮೀಪದ ತೋಟಗಾರಿಕೆ ಇಲಾಖೆ ಕಚೇರಿ, ರೈತ ಸಂಪರ್ಕ ಕೇಂದ್ರ ಅಥವಾ ಹತ್ತಿರದ ಬ್ಯಾಂಕುಗಳನ್ನು (Onion Insurance) ಸಂಪರ್ಕಿಸಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252