Namma JanaNamma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಕ್ರೀಡೆ
  • ಆರೋಗ್ಯ
  • ದಿನ ಭವಿಷ್ಯ
Reading: Petrol diesel price hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ | ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
Share
Notification Show More
Font ResizerAa
Font ResizerAa
Namma JanaNamma Jana
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Search
  • ಇಂದಿನ ಸುದ್ದಿ
  • ರಾಜಕೀಯ
  • ವಿಶೇಷ ಸುದ್ದಿ
  • ಕ್ರೈಂ ಸುದ್ದಿ
  • ಅಡಿಕೆ ಧಾರಣೆ
  • ಆರೋಗ್ಯ
  • ಕ್ರೀಡೆ
  • ದಿನ ಭವಿಷ್ಯ
  • ರಾಜಕೀಯ
Have an existing account? Sign In
Follow US
  • Advertise
© 2024 Namma Janna. Kannada News Portal. All Rights Reserved.
Namma Jana > Blog > ಇಂದಿನ ಸುದ್ದಿ > Petrol diesel price hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ | ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
ಇಂದಿನ ಸುದ್ದಿ

Petrol diesel price hike: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ | ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

Editor Nammajana
Last updated: 17 June 2024 09:12
By Editor Nammajana 2 Min Read
Share
SHARE

Chitradurga news|nammajana.com|17-6-2024

ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯ ಸರ್ಕಾರ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ (Petrol diesel price hike) ವಿರೋಧಿಸಿ ಬಿಜೆಪಿ.ಯಿಂದ ಒನಕೆ ಓಬವ್ವ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರಗಳನ್ನು ಕೂಗಲಾಯಿತು.

ಬಿಜೆಪಿ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ರಾಜ್ಯದ ಜನತೆಯನ್ನು ಮರಳು ಮಾಡಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗ್ಯಾರೆಂಟಿಗಳನ್ನು ನೀಡಲು ಹಣವಿಲ್ಲದೆ ಪೆಟ್ರೋಲ್-ಡೀಸೆಲ್ ಬೆಲೆಗಳನ್ನು ಹೆಚ್ಚಿಸಿ (Petrol diesel price hike) ಬಡವರ ಮೇಲೆ ಹೊರೆ ಹೇರಿದ್ದಾರೆ. ಸ್ಟಾಂಪ್ ಡ್ಯೂಟಿ ಜಾಸ್ತಿಯಾಗಿದೆ. ಮದ್ಯದ ಬೆಲೆ ದುಬಾರಿಯಾಗಿದೆ. ಬಡವರ, ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿದರು.

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ಪ್ರಯಾಣ ದರ ಸೇರಿದಂತೆ ಸಾಗಾಣಿಕೆ ವೆಚ್ಚ ಏರಿಕೆಯಾಗುತ್ತದೆ. ಓಟಿಗಾಗಿ ಗ್ಯಾರೆಂಟಿ ಯೋಜನೆಗಳನ್ನು ನೀಡಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗ ಹೆಣಗಾಡುತ್ತಿದ್ದಾರೆ. ಸಮಾಜಕ್ಕೆ ಕಂಟಕವಾಗಿರುವ ಈ ಸರ್ಕಾರ ಬೇಕಿಲ್ಲ. ತಕ್ಷಣವೇ ಬೆಲೆ ಏರಿಕೆ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.

ಇದನ್ನೂ ಓದಿ: Today petrol diesel price in Chitradurga: ಕರ್ನಾಟಕದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ, ಚಿತ್ರದುರ್ಗದಲ್ಲಿ ಎಷ್ಟಿದೆ ರೇಟ್?

ರೈತ ಮೋರ್ಚ ಜಿಲ್ಲಾಧ್ಯಕ್ಷ ವೆಂಕಟೇಶ್‍ಯಾದವ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರೈಸಿ ಸಂಭ್ರಮಾಚರಣೆಯಲ್ಲಿರುವ ಇದರ ಬೆನ್ನಲ್ಲೆ ಸ್ಟಾಂಪ್ ಡ್ಯೂಟಿ, ಮದ್ಯದ ಬೆಲೆ ಹೆಚ್ಚಿಸಿ ಬಡವರಿಗೆ ಬರೆ ಎಳೆದಿದೆ. ಬಿಟ್ಟಿ ಭಾಗ್ಯಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದಲ್ಲಿ ಬೊಕ್ಕಸ ಖಾಲಿಯಾಗಿದ್ದರೂ. ಸುಮ್ಮನೆ ಶೋ ಕೊಡುತ್ತಿದ್ದಾರೆ. ಡೀಸೆಲ್ 3.50 ರೂ. ಪೆಟ್ರೋಲ್ ಲೀಟರ್‍ಗೆ ಮೂರು ರೂ.ಗಳನ್ನು (Petrol diesel price hike) ಜಾಸ್ತಿ ಮಾಡಿ. ಬಡವರು, ಶ್ರೀಸಾಮಾನ್ಯನ ಜೇಬಿಗೆ ಕತ್ತರಿ ಹಾಕಿದೆ. ರೈತರಿಗೆ ಬೀಜ, ರಸಗೊಬ್ಬರಗಳ ಕೊರತೆಯಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ಹಿಂದಕ್ಕೆ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಇಳಿಯಬೇಕಾಗುತ್ತದೆಂದು ಎಚ್ಚರಿಸಿದರು.

ಇದನ್ನೂ ಓದಿ: Dina Bhavishya: ಇಂದಿನ ದಿನ ಭವಿಷ್ಯ 17-6-2024

ಬಿಜೆಪಿ. ಎಸ್ಸಿ.ಮೋರ್ಚ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ್‍ಕಾರಜೋಳ, ರೈತ ಮೋರ್ಚ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ್, ಮಾಧ್ಯಮ ವಕ್ತಾರ ದಗ್ಗೆಶಿವಪ್ರಕಾಶ್, ವಕ್ತಾರ ನಾಗರಾಜ್‍ಬೇದ್ರೆ, ನಗರ ಮಂಡಲ ಅಧ್ಯಕ್ಷ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ಕಲ್ಲೇಶಯ್ಯ, ನಾಗರಾಜ್ ಸಂಗಮ್, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷೆ ಶೈಲಜಾರೆಡ್ಡಿ, ಉಪಾಧ್ಯಕ್ಷೆ ಶ್ಯಾಮಲ ಶಿವಪ್ರಕಾಶ್, ಬಸಮ್ಮ, ವೀಣ, ಕವನ, ರಜಿನಿ, ಕಿರಣ್, ಆದರ್ಶ, ವೀರೇಶ್, ಅಭಿಲಾಷ್ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

You Might Also Like

Dina Bhavishya | ದಿನ ಭವಿಷ್ಯ, ಇವತ್ತು ಯಾವ ರಾಶಿಗೆ ಶುಭ?

Gold Rate | ಬಂಗಾರದ ಬೆಲೆಯಲ್ಲಿ ಇಳಿಕೆ

Transfer | ಜಿಲ್ಲಾ ಬಿಸಿಎಂ ಅಧಿಕಾರಿ ಆರ್.ಸುಬ್ರಾನಾಯಕ್ ವರ್ಗಾವಣೆ, ನೂತನ ಅಧಿಕಾರಿ ಅಧಿಕಾರ ಸ್ವೀಕಾರ

POWER CUT | ಇಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ ಲಾಭ, ನಷ್ಟ ನೋಡಿ

TAGGED:BJP protest against governmentChitradurgaChitradurga NewsDieselKannada Newskannada suddiLatest NewsNammajana.comPetrolprice hikeToday's Newsಇತೀಚಿನ ಸುದ್ದಿಇಂದಿನ ಸುದ್ದಿಕನ್ನಡ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಡೀಸೆಲ್ನಮ್ಮಜನ.ಕಾಂಪೆಟ್ರೋಲ್ಬೆಲೆ ಏರಿಕೆಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
Share This Article
Facebook Twitter Whatsapp Whatsapp Telegram Email Print
ಈ ಮೇಲಿನ ಸುದ್ದಿ, ಲೇಖನದ ಬಗ್ಗೆ ನಿಮ್ಮ ಅನಿಸಿಕೆ ಏನು?
Love0
Sad0
Happy0
Sleepy0
Angry0
Dead0
Wink0
Previous Article Dina Bhavishya: ಇಂದಿನ ದಿನ ಭವಿಷ್ಯ 17-6-2024
Next Article Bakrid: ಕೋಟೆ ನಾಡಿನಲ್ಲಿ ತ್ಯಾಗ ಬಲಿದಾನಗಳ ಸಂಕೇತ ಬಕ್ರೀದ್ ಸಂಭ್ರಮದ ಆಚರಣೆ
Leave a comment

Leave a Reply Cancel reply

Your email address will not be published. Required fields are marked *

Stay Connected

TelegramFollow

Latest News

Gold Rate | ಬಂಗಾರದ ಬೆಲೆಯಲ್ಲಿ ಏರಿಕೆ
ಇಂದಿನ ಸುದ್ದಿ
Dina Bhavishya | ದಿನ ಭವಿಷ್ಯ, ಇವತ್ತು ಯಾವ್ಯಾವ ರಾಶಿಗೆ ಶುಭ?
ದಿನ ಭವಿಷ್ಯ
POWER CUT | ಇಂದಿನಿಂದ ಎರಡು ದಿನ ಬೆಳಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ
ಇಂದಿನ ಸುದ್ದಿ
Adike rate | ಅಡಿಕೆ ಬೆಲೆಯಲ್ಲಿ ಇಳಿಕೆ
ಅಡಿಕೆ ಧಾರಣೆ

Kannada News (ಕನ್ನಡ ಸುದ್ದಿ): Get the latest updates of karnataka news, world news, india news, political News and celebrity Kannada news and more on Nammajana (nammajana.com).

Sign Up for Our Newsletter

Subscribe to our newsletter to get our newest articles instantly!

Namma JanaNamma Jana
© 2025 NammaJanna. Kannada News Portal. All Rights Reserved.
adbanner
AdBlock Detected
Our site is an advertising supported site. Please whitelist to support our site.
Okay, I'll Whitelist
Welcome Back!

Sign in to your account

Lost your password?