Chitradurga news|nammajana.com|2-8-2024
ನಮ್ಮಜನ.ಕಾಂ, ಹೊಸದುರ್ಗ: ಆಗಸ್ಟ್ 2 ರಂದು ಶುಕ್ರವಾರ ಮತ್ತು ಆಗಸ್ಟ್ 3 ರಂದು ಶನಿವಾರ ರಸ್ತೆ ಅಗಲೀಕರಣ ಮತ್ತು ಒಳಚರಂಡಿ ನಿರ್ವಹಣಾ ಕಾಮಗಾರಿ (Power cut) ನಿರ್ವಹಿಸುತ್ತಿರುವುದರಿಂದ ಈ ಎರಡೂ ದಿನಗಳಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: Anganwadi post: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಮೀಸಲಾತಿ, ತಾಲೂಕಿನ ಖಾಲಿ ಹುದ್ದೆಗಳ ವಿವರ

ತಾಲೂಕಿನ ಮಧುರೆ ೬೬/೧೧ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಲ್ಲಾ ೧೧ ಕೆ.ವಿ.ಮಾರ್ಗಗಳಾದ ತಾಲೂಕಿನ ಮಧುರೆ ೨೨೦/೦೬/೧೧ ಕೆ.ವಿ ವಿದ್ಯುತ್ (Power cut) ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಕಸಬಾ ಹೋಬಳಿಯ ಮಧುರೆ, ದೇವಿಗೆರೆ ಮತ್ತು ಹೆಬ್ಬಳ್ಳಿ ಪಂಚಾಯಿತಿಯ ಎಲ್ಲಾ ಗ್ರಾಮಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (Power cut) ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252