Chitradurga news|nammajana.com|20-7-2024
ನಮ್ಮಜನ.ಕಾಂ, ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ತಾಯಿ ಕಾರ್ಡು ನೀಡುವಾಗ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿಯಲ್ಲಿ ಜನ್ಮ ದಿನಾಂಕವನ್ನು (Pregnant minor) ಪರಿಶೀಲನೆ ಮಾಡಲಾಗುತ್ತಿದೆ. 18 ವರ್ಷಕ್ಕಿಂತ ಕಡಿಮೆ ಇರುವ ಬಾಲಕಿ ಗರ್ಭ ಧರಿಸಿದ ಪ್ರಕರಣ ಕಂಡು ಬಂದ ತಕ್ಷಣವೇ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಭಾರತಿ ಬಣಕಾರ್ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಅವರು ಗರ್ಭಿಣಿಯರಿಗೆ ಚಿಕಿತ್ಸೆ ನೀಡುವಾಗ ಜನ್ಮ (Pregnant minor) ದಿನಾಂಕವನ್ನು ಧೃಡೀಕರಿಸಿಕೊಳ್ಳಬೇಕು. ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು ಪತ್ತೆಯಾದ ಕೂಡಲೇ ವರದಿ ಮಾಡುವಂತೆ ಜಿಲ್ಲಾ ಆರೋಗ್ಯ ಇಲಾಖೆಯಿಂದ ಖಾಸಗಿ ಆಸ್ಪತ್ರೆಗಳಿಗೆ ನಿರ್ದೇಶನ ನೀಡಿ ಪತ್ರ ಬರೆಯುವಂತೆ ಸೂಚಿಸಿದರು.
ಇದನ್ನೂ ಓದಿ: Anganwadi Vacancy: ಅಂಗನವಾಡಿ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ವಹಿಸಿ: ಬಿ.ಟಿ.ಕುಮಾರಸ್ವಾಮಿ