Chitradurga News | Nammajana.com | 01-08-2025
ನಮ್ಮಜನ.ಕಾಂ, ಚಿತ್ರದುರ್ಗ: ರಾಜ್ಯದಲ್ಲಿ (internal reservation) ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆಗಳು ಹೆಚ್ಚುತ್ತಿದ್ದು ಶುಕ್ರವಾರದಂದು ಕೋಟೆ ನಾಡಿನಲ್ಲಿ ಒಳ ಮೀಸಲಾತಿ ಜಾರಿಗಾಗಿ ಸ್ವಾಭಿಮಾನಿ ಮಾದಿಗ ಮಹಾಸಭಾದವರು ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಇದನ್ನೂ ಓದಿ: Chitradurga DC ಕಚೇರಿಗೆ ಮುತ್ತಿಗೆ ಹಾಕಿದ ಮಾದಿಗ ಸಮುದಾಯ

ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ ನಂತರ ಒನಕೆ ಓಬವ್ವ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಬಹಿರಂಗ ಸಭೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾದಿಗ ಸಮುದಾಯದ ಮುಖಂಡ ಸೂರನಹಳ್ಳಿ ಶ್ರೀನಿವಾಸ್ ಎಪ್ಪತ್ತು ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷ ಮಾದಿಗರ ಮತಗಳನ್ನು ಪಡೆದು ವಂಚಿಸಿಕೊಂಡು ಬರುತ್ತಿದೆ. ಮಾದಿಗ ಸಮುದಾಯವನ್ನು ಕಾಂಗ್ರೆಸ್ ಪಕ್ಷ ದಲಿತರನ್ನು ವೋಟ್ ಹಾಕಿಸಿಕೊಳ್ಳುವ ಮಿಷನ್ ಎಂದು ತಿಳಿದುಕೊಂಡಿದ್ದು ಒಳಮೀಸಲಾತಿ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಪೋಲಿಸ್ ಬ್ಯಾರಿಕೇಡ್ ತಳ್ಳಿ ಡಿಸಿ ಕಚೇರಿಗೆ ಲಗ್ಗೆ
ಪೊಲೀಸ್ ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಜಿಲ್ಲಾಧಿಕಾರಿ ಆವರಣಕ್ಕೆ ನುಗ್ಗಿ ಧಿಕ್ಕಾರಗಳನ್ನು ಕೂಗಿದರೆ ಕೆಲವರು ಕಚೇರಿಯ ಮೆಟ್ಟಿಲುಗಳನ್ನು ಹತ್ತಿಕೊಂಡು ಚೇಂಬರ್ ನುಗ್ಗಲು ಯತ್ನಿಸಿದರು.ಜೊತೆಗೆ ಡಿಸಿ ಕಚೇರಿಯ ಬಾಗಿಲಿಗೆ ಮಲಗಿಕೊಂಡು ಪ್ರತಿಭಟನೆ ನಡೆಸಿದರ. ಈ ಸಂದರ್ಭದಲ್ಲಿ ಪ್ರತಿಭಟನೆ ನಿರತರನ್ನಯ ತಡೆದು ಪೊಲೀಸರು ತಡೆದು ಪರಿಸ್ಥಿತಿಯನ್ನು ನಿಯಂತ್ರಿಸಿ ವಾತವರಣ ತಿಳಿಗೊಳಿಸಿದರು ನಂತರ ಜಿಲ್ಲಾಧಿಕಾರಿಗಳು ಆಗಮಿಸಿ ಮನವಿ ಸ್ವೀಕರಿಸಿದರು.
ಸುಪ್ರೀಂಕೋರ್ಟ್ ತೀರ್ಪು ನೀಡಿ ಆಗಸ್ಟ್ 1 ಕ್ಕೆ ಒಂದು ವರ್ಷಗಳು ಮುಗಿದಿದ್ದರು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ಇನ್ನು ಕಾಲಹರಣ ಮಾಡುತ್ತಿದ್ದಾರೆ. ಆ.15 ರೊಳಗೆ ಒಳ ಮೀಸಲಾತಿಯನ್ನು ಕೊಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸಿ ಜೈಲಿಗೆ ಹೋಗಲು ಸಿದ್ದರಿದ್ದೇವೆಂದು ಎಚ್ಚರಿಸಿದರು.
ಇದನ್ನೂ ಓದಿ: Chitradurga ದಲ್ಲಿ ಒಳ ಮೀಸಲಾತಿ ಕಿಚ್ಚು | ಸರ್ಕಾರದ ವಿರುದ್ದ ಸಮುದಾಯ ಅಕ್ರೋಶ
ನಾಮಕಾವಸ್ಥೆ ಸದಾಶಿವ(internal reservation) ಆಯೋಗದ ವರದಿಯನ್ನು ಜಾರಿಗೊಳಿಸಿದ್ದು, ಈಗ ದತ್ತಾಂಶ ಸಂಗ್ರಹಕ್ಕಾಗಿ ರಾಜ್ಯ ಸರ್ಕಾರ ನಾಗಮೋಹನ್‍ದಾಸ್ ಆಯೋಗ ರಚಿಸಿ ವರದಿಗಾಗಿ ಕಾಯುತ್ತಿದೆ. ವಿಧಾನಸಭೆ ಚುನಾವಣೆ ಪೂರ್ವದಲ್ಲಿಯೇ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಕ್ಯಾಬಿನೆಟ್‍ನಲ್ಲೇ ಚರ್ಚಿಸಿ ಒಳ ಮೀಸಲಾತಿ ಜಾರಿಗೊಳಿಸುತ್ತೇವೆಂದು ಈಗಿನ ಗೃಹ ಮಂತ್ರಿ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದರು. ಇದುವರೆವಿಗೂ ಈಡೇರಿಲ್ಲ. ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವತನಕ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದರು.
ಜಿ.ಹೆಚ್.ಮೋಹನ್‍ಕುಮಾರ್ ಮಾತನಾಡಿ, ಒಳ ಮೀಸಲಾತಿಗಾಗಿ ಮೂರುವರೆ ದಶಕಗಳಿಂದಲೂ ಹೋರಾಟ ನಡೆಸುತ್ತಿದ್ದೇವೆ. ಕಾನೂನು ತೊಡಕೊ ಇಲ್ಲ ರಾಜಕಾರಣಿಗಳ ಒಳ ಹೊಡೆತವೋ ಗೊತ್ತಾಗುತ್ತಿಲ್ಲ. ಇದರ ಬಗ್ಗೆ ಮಾದಿಗರು ಚಿಂತಿಸಬೇಕಿದೆ. ಹಿಂದಿನಿಂದಲೂ ಮಾದಿಗರ ಮತಗಳನ್ನು ಪಡೆಯುತ್ತಿರುವ ಕಾಂಗ್ರೆಸ್ ಮಾದಿಗರ ಪರವಾಗಿಲ್ಲ. ದಲಿತರನ್ನು ಕೇವಲ ಮತ ಬ್ಯಾಂಕ್ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆಂದರು.
ಕಾಂಗ್ರೆಸ್ ದಲಿತರನ್ನು ಮತಕ್ಕಾಗಿ ಇಟ್ಟುಕೊಂಡಿದೆ
ಮಾದಿಗರ ಮತಗಳನ್ನು ಪಡೆಯುತ್ತಿರುವ ಕಾಂಗ್ರೆಸ್ ಮಾದಿಗರ ಪರವಾಗಿಲ್ಲ. ದಲಿತರನ್ನು ಕೇವಲ ಮತಬ್ಯಾಂಕ್ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತೇವೆ, ಒಳ ಮೀಸಲಾತಿ ಜಾರಿಯಾಗದಿದ್ದರೆ ಮುಂದಿನ ದಿನಗಳ ಹೋರಾಟದ ಸ್ವರೂಪ ಬದಲಾಗಲಿದೆ. -ಜಿ.ಹೆಚ್.ಮೋಹನ್‍ಕುಮಾರ್, ಮಾದಿಗ ಸಮುದಾಯದ ಮುಖಂಡ
ಮಲ್ಲಿಕಾರ್ಜುನ ಖರ್ಗೆ ಎಂದಿಗೂ(internal reservation) ಒಳ ಮೀಸಲಾತಿ ಬಗ್ಗೆ ಧ್ವನಿ ಎತ್ತಲಿಲ್ಲ. ಕಳೆದ ಐವತ್ತು ವರ್ಷಗಳ ಕಾಲ ಅಧಿಕಾರದಲ್ಲಿ ಇರುವ ಖರ್ಗೆ ಅವರು ಒಂದು ದಿನಕ್ಕೂ ಒಳ ಮೀಸಲಾತಿ ಬಗ್ಗೆ ಚಕಾತವೆತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು. ದಲಿತರ ಹೋರಾಟಕ್ಕೆ ಮಣಿಯದೇ ಕುರ್ಚಿಗಾಗಿ ಅಧಿಕಾರ ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕ ಎಂದು ಮಾತು ಮಾತಿಗೂ ಹೇಳುತ್ತಾರೆ. ಆದರೆ ಒಳಮೀಸಲಾತಿ ಜಾರಿಗೆ ಏಕೆ ಮೀನಮೇಷ ಎಣಿಸುತ್ತಿದ್ದಾರೆ ಎಂದರಿ. ಈ ಬಾರಿಯ ನಮ್ಮ ಹೋರಾಟ ಇದು ಆರಂಭ ಮಾತ್ರ, ಮುಂದಿನ ದಿನಗಳಲ್ಲಿ ಉಗ್ರ ರೂಪಕ್ಕೆ ಕೊಂಡೊಯ್ಯಲಾಗುವುದೆಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ಐತಿಹಾಸಿಕ ಹಿಂದೂ ಮಹಾಗಣಪತಿ ಪೆಂಡಲ್ ನಿರ್ಮಾಣಕ್ಕೆ ಭೂಮಿ ಪೂಜೆ
ದಲಿತ ಮುಖಂಡ ಮಹಾಂತೇಶ್ ಮಾತನಾಡುತ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮತ ಪಡೆದು ಅಧಿಕಾರಕ್ಕೆ ಬಂದಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಹಿಂದಾ ನಾಯಕ ಅಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲು ಮಾದಿಗರು ಕಾರಣ ಎನ್ನುವುದನ್ನು ನಾಯಕರುಗಳು ಮರೆತಿದ್ದಾರೆ. ಒಳ ಮೀಸಲಾತಿ ಜಾರಿಯಾಗದಿದ್ದರೆ ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಸಿದರು.
ಕರಿಬಸಪ್ಪ ಮಾತನಾಡಿ ಒಳ(internal reservation) ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯ ಸರ್ಕಾರಗಳಿಗಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿ ಒಂದು ವರ್ಷವಾಗಿದೆ. ನೆರೆಯ ಆಂಧ್ರ, ಹರಿಯಾಣ, ತಮಿಳುನಾಡು, ಪಂಜಾಬ್‍ನಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ನಮ್ಮ ರಾಜ್ಯದಲ್ಲಿ ಇನ್ನು ಅನುಷ್ಟಾನಕ್ಕೆ ತರಲು ವಿಳಂಬ ನೀತಿ ಅನುಸರಿಸಲಾಗುತ್ತಿದೆ. ಇದರ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆಂದರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ
ಮುರಾರ್ಜಿ, ಭೀಮನಕೆರೆ ಶಿವಮೂರ್ತಿ, ಹನುಮಂತರಾಯಪ್ಪ, ಶಿವಣ್ಣ, ಬಸಮ್ಮ, ಕೃಷ್ಣಮೂರ್ತಿ ಸೇರಿದಂತೆ ನೂರಾರು ಮಾದಿಗರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252