Chitradurga news|nammajana.com|09-04-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲೆಯಲ್ಲಿ ಕಳೆದ ಮಾರ್ಚ್ 01 ರಿಂದ 20ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1ರ (PUC Result) ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಪರೀಕ್ಷೆ-1ರಲ್ಲಿ ಶೇ.59.87 ರಷ್ಟು ಫಲಿತಾಂಶ ಲಭಿಸಿದೆ.
ಕಲಾ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 4,590 ವಿದ್ಯಾರ್ಥಿಗಳ ಪೈಕಿ 1,684 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 3,746 ವಿದ್ಯಾರ್ಥಿಗಳ ಪೈಕಿ 2,192 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 6,425 ವಿದ್ಯಾರ್ಥಿಗಳ ಪೈಕಿ 4,330 ವಿದ್ಯಾರ್ಥಿಗಳು (PUC Result) ಉತ್ತೀರ್ಣರಾಗಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ 14761 ವಿದ್ಯಾರ್ಥಿಗಳ ಪೈಕಿ 8206 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ ಹಾಜರಾದ 13,426 ರೆಗ್ಯುಲರ್ ವಿದ್ಯಾರ್ಥಿಗಳ ಪೈಕಿ 8,038 ತೇರ್ಗಡೆಯಾಗಿದ್ದಾರೆ. 1,082 ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 107 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಹಾಗೂ 253 ಖಾಸಗಿ ವಿದ್ಯಾರ್ಥಿಗಳ ಪೈಕಿ 61 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನಗರ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ 9,926 ವಿದ್ಯಾರ್ಥಿಗಳ ಪೈಕಿ 5,471 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಹಾಜರಾದ 4,835 ವಿದ್ಯಾರ್ಥಿಗಳ ಪೈಕಿ 2,735 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳ ವಿವರ: ಕಲಾ ವಿಭಾಗದಲ್ಲಿ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯ ಬಿ.ಲಿಂಗಯ್ಯ ಪಿ.ಯು ಕಾಲೇಜು ವಿದ್ಯಾರ್ಥಿ ಪಾಂಡುರಂಗ ಆನೆಗೊಂದಿ 586 (ಶೇ.97.66) ಅಂಕ ಗಳಿಸುವುದರೊಂದಿಗೆ ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಹೊಳಲ್ಕೆರೆ ತಾಲ್ಲೂಕಿನ ಮುತ್ತಗದೂರು ಗ್ರಾಮದ ತರಳಬಾಳು ಪಿಯು ಕಾಲೇಜಿನ ಅಂಜುಮನ್ ಬಾನು ಹೆಚ್.ಎಸ್ 581 (ಶೇ.96.83) ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ಚಿಕ್ಕೋಬನಹಳ್ಳಿ ಶ್ರೀ.ಆಂಜನೇಯ ಪಿಯು ಕಾಲೇಜಿನ ಸಮೀನ ಜೆ. 579 (ಶೇ.96.5) ಅಂಕಗಳಿಸುವುದರೊಂದಿಗೆ (PUC Result) ಅನುಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಇಶಿತಾ ಬಿ.ಎನ್ 592 (ಶೇ.98.66), ಸಾಕ್ಷಿ ಎಸ್.ಬಿ 589 (ಶೇ.98.16) ಹಾಗೂ ರಿಯ ಎಸ್ ಕೊಠಾರಿ 588 (ಶೇ.588) ಅಂಕಗಳನ್ನು ಗಳಿಸುವ ಮೂಲಕ ಅನುಕ್ರಮವಾಗಿ ಜಿಲ್ಲೆಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಪಿಯು ಕಾಲೇಜು ವಿದ್ಯಾರ್ಥಿ ಮಾರುತಿ ಎಂ 593 (ಶೇ.98.83) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾನೆ.
ಇದನ್ನೂ ಓದಿ: ದಿನ ಭವಿಷ್ಯ | 09-04-2025 | ಇವತ್ತು ಯಾವ್ಯಾವ ರಾಶಿಗೆ ಶುಭ ಯೋಗ |Dina Bhavishya
ಚಿತ್ರದುರ್ಗ ನಗರದ ಎಸ್.ಆರ್.ಎಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ವಿಜೇತರೆಡ್ಡಿ ಬಿ.ಸಿ 589 (ಶೇ.98.16) ಹಾಗೂ ಅಮರೇಶ್ 587 (ಶೇ.97.83) ಅಂಕಗಳನ್ನು ಗಳಿಸುವ (PUC Result) ಮೂಲಕ ಅನುಕ್ರಮವಾಗಿ ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252