Chitradurga News | Nammajana.com 07-08-2025
ನಮ್ಮಜನ.ಕಾಂ, ಚಿತ್ರದುರ್ಗ: ಜಿಲ್ಲಾ ಏಡ್ಸ್ (Quiz competition)ನಿಯಂತ್ರಣ ಮತ್ತು ತಡೆ ಘಟಕದ ವತಿಯಿಂದ ಸೋಮವಾರ ನಗರದ ವಾಸವಿ ವಿದ್ಯಾ ಸಂಸ್ಥೆಯಲ್ಲಿ ಹೆಚ್.ಐ.ವಿ, ಏಡ್ಸ್ ಕುರಿತು ಅರಿವು ಮೂಡಿಸುವ ಸಲುವಾಗಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಕಾರ್ಯಕ್ರಮ ನಡೆಯಿತು.
ಇದನ್ನೂ ಓದಿ: ವಸತಿ ಶಾಲೆಗಳಿಗೆ AC ಮಹಬೂಬ್ ಜಿಲಾನಿ ಖುರೇಶಿ ಭೇಟಿ, ಪರಿಶೀಲನೆ

ಹೆಚ್.ಐ.ವಿ./ಏಡ್ಸ್ ಕುರಿತು ಅರಿವು ಮೂಡಿಸುವ ಸಲುವಾಗಿ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿರುವ “ತೀವ್ರಗೊಳಿಸಿದ ಪ್ರಚಾರಾಂದೋಲನ” ಅಂಗವಾಗಿ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ಮಲ್ಲಾಡಿಹಳ್ಳಿ ಪ್ರೌಢಶಾಲೆಯ ಚಿನ್ಮಯಿ ಆರ್., ಚೇತನಪುಷ್ಕರಣಿ ಪ್ರಥಮ, ಹೊಳಲ್ಕೆರೆಯ ಶ್ರೀ ಮಂಜುನಾಥ ಸ್ವಾಮಿ ಪ್ರೌಢಶಾಲೆಯ ಎಂ. ಪ್ರೀತಿ, ಕಾವ್ಯಂಜಲಿ ಸಿ.ಎಸ್ ದ್ವಿತೀಯ ಹಾಗೂ ಭರಮಸಾಗರ ಬಾಪೂಜಿ ಪ್ರೌಢಶಾಲೆಯ ನಯನ ಕೆ. ಯು., ನೂತನ ಆರ್. ತೃತೀಯ ಸ್ಥಾನ ಪಡೆದು, ಕ್ರಮವಾಗಿ ರೂ.6000, 5000, 4000 ನಗದು ಬಹುಮಾನವನ್ನು ಪಡೆದರು. ಪ್ರಥಮ ಬಹುಮಾನ ಪಡೆದ ವಿದ್ಯಾರ್ಥಿಗಳನ್ನು ಜಿಲ್ಲಾಮಟ್ಟದ ರಸಪ್ರಶ್ನೆ ಕಾರ್ಯಕ್ರಮಕ್ಕೆ ಕಳುಹಿಸಿಕೊಡಲಾಗುವುದು.
ರೇಖಲಗೆರೆ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕ ಕೆ.ಟಿ.ನಾಗಭೂಷಣ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮೇಲ್ವಿಚಾರಕ ವಿ.ಅಶೋಕ ಅವರು ಸ್ಪರ್ಧಾ ಕಾರ್ಯಕ್ರಮ ನಡೆಸಿಕೊಟ್ಟರು.
ಇದನ್ನೂ ಓದಿ: CHITRADURGA ಜಿಲ್ಲೆಯಲ್ಲಿ 31 ಮಿ.ಮೀ ಮಳೆ | 18 ಮನೆ ಹಾನಿ | ಯಾವ ತಾಲೂಕಿನಲ್ಲಿ ಎಷ್ಟು ಮಳೆಯಾಗಿದೆ?
ಶ್ರೀ ವಾಸವಿ ವಿದ್ಯಾಸಂಸ್ಥೆಯ(Quiz competition) ಮುಖ್ಯೋಪಾಧ್ಯಾಯರಾದ ಅಶೋಕ್, ಡ್ಯಾಪ್ಕೂ ಕಚೇರಿಯ ಸಿಬ್ಬಂದಿಗಳಾದ ರವೀಂದ್ರ, ನಾಗರಾಜ್, ಪ್ರಶಾಂತ್, ನರಹರಿ, ಶಂಕರಾನಂದ ಹಾಗೂ ಜಿಲ್ಲೆಯ ವಿವಿಧ ಶಾಲೆಯ ಶಿಕ್ಷಕರು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252