Chitradurga news | nammajana.com |15-07-2025
ನಮ್ಮಜನ ನ್ಯೂಸ್, ಕಾಂ, ಚಿತ್ರದುರ್ಗ: ನಗರದ ರೈಲ್ವೇ ನಿಲ್ದಾಣದ ಹತ್ತಿರದ ಚಿತ್ರದುರ್ಗ-ದಾವಣಗೆರೆ ರಸ್ತೆಯಲ್ಲಿ ದ್ವೀಪಥ ರೈಲ್ವೇ ಮೇಲ್ಸೇತುವೆ(Railway Flyover) ನಿರ್ಮಾಣಕ್ಕೆ ಅನುಮತಿ ನೀಡಲಾಗಿದೆ. ರೈಲ್ವೇ ಇಂಜಿನಿಯರಿಂಗ್ ವಿಭಾಗದಿಂದ ಶೀಘ್ರವೇ ಮೇಲ್ಸೇತುವೆ ನಿರ್ಮಾಣ ಕಾಮಗಾರಿಯನ್ನು ಆರಂಭಿಸುವುದಾಗಿ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ಇದನ್ನೂ ಓದಿ: ಗಾಣಿಗ ಸಮಾಜದ ಅಭಿವೃದ್ಧಿಗೆ ನೆರವು | ಸಚಿವ ಸುಧಾಕರ್

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರೈಲ್ವೇ ಮೇಲ್ಸೇತುವೆ ಹಾಗೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆ ಕುರಿತು ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ನಡೆಸಿ ಅವರು ಮಾತನಾಡಿದರು.
ಚಿತ್ರದುರ್ಗ ನಗರದಿಂದ ದಾವಣಗೆರೆ ನಗರಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ, ರೈಲ್ವೆ ನಿಲ್ದಾಣದ ಬಳಿ ರೈಲ್ವೇ ಗೇಟ್ ನಂ.15 ರಲ್ಲಿ ರೈಲುಗಳ ಓಡಾಟದ ಸಮಯದಲ್ಲಿ ದಿನಕ್ಕೆ 30 ಬಾರಿ ರೈಲ್ವೇ ಗೇಟ್(Railway Flyover) ಹಾಕಲಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ, ಆಂಬುಲೆನ್ಸ್ ವಾಹನಗಳು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ದ್ವೀಪಥ ರೈಲ್ವೇ ಮೇಲ್ಸೇತುವೆ ನಿರ್ಮಾಣ ಮಾಡುವಂತೆ ಸೂಚಿಸಿದ್ದೇನೆ.
ನಾಲ್ಕು ಪಥದ ರೈಲ್ವೇ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಭೂಸ್ವಾಧೀನ ನಡೆಸಬೇಕಾಗುತ್ತದೆ. ಇದರ ಜೊತೆಗೆ ನಿರ್ಮಾಣದ ವೆಚ್ಚವನ್ನು ಸಹ ಭರಿಸಬೇಕಾಗುತ್ತದೆ. ಇದಕ್ಕೆ ಸಾಕಷ್ಟು ಸಮಯ ಬೇಕಾಗಲಿದೆ. ಹೀಗಾಗಿ ಇದರ ಬದಲಿಗೆ, ದ್ವೀಪಥ ಮೇಲ್ಸೇತುವೆ ನಿರ್ಮಾಣ ಮಾಡಿದರೆ ಭಾರತ ಸರ್ಕಾರವೇ ಶೇ.100 ರಷ್ಟು ಕಾಮಗಾರಿ ವೆಚ್ಚವನ್ನು ಭರಿಸಲಿದೆ.
ಇದನ್ನೂ ಓದಿ: Award: ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿಗೆ ಝೀ ಕನ್ನಡ ನ್ಯೂಸ್ ಯುವರತ್ನ ಪ್ರಶಸ್ತಿ
ಈ ಹಿನ್ನಲೆಯಲ್ಲಿ ನಾಲ್ಕುಪಥ ಮೇಲ್ಸೇತುವೆ ನಿರ್ಮಾಣ ಪ್ರಸ್ತಾವನೆಯನ್ನು ಸದ್ಯಕ್ಕೆ ರದ್ದು ಪಡಿಸಿ, ದ್ವೀಪಥ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಲು ಅನುಮತಿ ನೀಡುವಂತೆ ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ, ರೈಲ್ವೇ ಮುಖ್ಯ ಇಂಜನಿಯರ್, ಜಿಲ್ಲಾಧಿಕಾರಿ ಹಾಗೂ ಭೂಸ್ವಾಧೀನಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಇದರಿಂದಾಗಿ ಭೂಸ್ವಾಧೀನ ಮಾಡುವ ಪ್ರಮೇಯ ಉದ್ಭವಿಸುವುದಿಲ್ಲ.
ಇದೇ ಮಾದರಿಯಲ್ಲಿ ಜಿಲ್ಲೆಯ(Railway Flyover) ಇತರೆ ಭಾಗದ ಎರಡು ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೂ ಅನುಮತಿ ನೀಡಲಾಗಿದೆ. ತಾಂತ್ರಿಕ ಅನುಮೋದನೆಗಳನ್ನು ಪೂರ್ಣಗೊಳಿಸಿ ನಿರ್ಮಾಣ ಕಾಮಗಾರಿಯ ಟೆಂಡರ್ ಕರೆಯಲಾಗುವುದು. ಒಂದು ವರ್ಷದಲ್ಲಿಯೆ ರೈಲ್ವೇ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ಇದನ್ನೂ ಓದಿ: MLA ಕಾಶಪ್ ಅವರು 55 ಶಾಸಕರ ಪಟ್ಟಿ ರಿಲೀಸ್ ಮಾಡಲಿ | ಗೋವಿಂದ ಕಾರಜೋಳ
ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ವಿಶೇಷ ಭೂಸ್ವಾಧೀನಾಧಿಕಾರಿ ವೆಂಕಟೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್.ಬಿ, ಪೊಲೀಸ್ ಉಪಾಧೀಕ್ಷಕ ಪಿ.ಕೆ. ದಿನಕರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಪೌರಾಯುಕ್ತೆ ರೇಣುಕಾ.ಎಂ, ಲೋಕೋಪಯೋಗಿ ಇಲಾಖೆ ತಾಂತ್ರಿಕ ಸಹಾಯಕ ಮಂಜುನಾಥ.ಬಿ.ಎನ್. ಪಿ.ಯು. ಉಪನಿರ್ದೇಶಕ ತಿಪ್ಪಮ್ಮ, ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ರವಿಕಾಂತ.ಎಂ.ಎನ್ ಸಭೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252