Chitradurga News | Nammajana.com | 19-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಸೋಮವಾರ(Rain report) ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 2 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನ
ಚಳ್ಳಕೆರೆ ತಾಲ್ಲೂಕಿನಲ್ಲಿ 1.7 ಮಿ.ಮೀ, ಚಿತ್ರದುರ್ಗ ತಾಲ್ಲೂಕು 1.7 ಮಿ.ಮೀ, ಹಿರಿಯೂರು ತಾಲ್ಲೂಕು 1.8 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 1.8 ಮಿ.ಮೀ, ಹೊಸದುರ್ಗ ತಾಲ್ಲೂಕು 1.8ಮಿ.ಮೀ ಹಾಗೂ ಮೊಳಕಾಲ್ಮೂರು ತಾಲ್ಲೂಕಿನಲ್ಲಿ 1 ಮಿ.ಮೀ. ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 1.7 ಮಿ.ಮೀ, ನಾಯಕನಹಟ್ಟಿ 1.3 ಮಿ.ಮೀ, ಪರಶುರಾಂಪುರ 2.6 ಮಿ.ಮೀ, ತಳಕು 1.1 ಮಿ.ಮೀ, ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 1.8 ಮಿ.ಮೀ, ಭರಮಸಾಗರ 1.7 ಮಿ.ಮೀ, ಹಿರೇಗುಂಟನೂರು 1.5 ಮಿ.ಮೀ, ತುರುವನೂರು 1.5 ಮಿ.ಮೀ, ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 1.6 ಮಿ.ಮೀ,. ಐಮಂಗಳ 2 ಮಿ.ಮೀ, ಧರ್ಮಪುರ 1.9 ಮಿ.ಮೀ, ಜವನಗೊಂಡನಹಳ್ಳಿ 1.5 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.6 ಮಿ.ಮೀ, ಬಿ.ದುರ್ಗ 2 ಮಿ.ಮೀ, ರಾಮಗಿರಿ 2.8 ಮಿ.ಮೀ, ತಾಳ್ಯ 1 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: ಹೊಳಲ್ಕೆರೆ | 44 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 2.8 ಮಿ.ಮೀ, ಮಾಡದಕೆರೆ 1.7 ಮಿ.ಮೀ,, ಮತ್ತೋಡು 1.4 ಮಿ.ಮೀ, ಶ್ರೀರಾಂಪುರ 1 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 0.7 ಮಿ.ಮೀ, ದೇವಸಮುದ್ರದಲ್ಲಿ 1.4 ಮಿ.ಮೀ ಮಳೆಯಾಗಿದೆ.
18 ಮನೆಗಳು ಹಾನಿ
ಮಳೆಯಿಂದಾಗಿ ಜಿಲ್ಲೆಯಾದ್ಯಂತ(Rain report) 18 ಮನೆಗಳು ಭಾಗಶಃ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 09 ಭಾಗಶಃ ಮನೆಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 03 ಭಾಗಶಃ ಮನೆಹಾನಿ, ಹೊಳಲ್ಕೆರೆ ತಾಲ್ಲೂಕಿನಲ್ಲಿ 06 ಭಾಗಶಃ ಮನೆಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
