Chitradurga News | Nammajana.com |05-08-2025
ನಮ್ಮಜನ.ಕಾಂ, ಚಿತ್ರದುರ್ಗ: ಸೋಮವಾರ ರಾತ್ರಿ ಸುರಿದ ಮಳೆ (Rain) ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 22 ಮಿ.ಮೀ ಮಳೆಯಾಗಿದೆ.
ಯಾವ ತಾಲೂಕಿನಲ್ಲಿ ಎಷ್ಟು ಮಳೆ:
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 30 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 15 ಮಿ.ಮೀ, ಹಿರಿಯೂರು ತಾಲ್ಲೂಕು 39.4 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 6.8 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 14 ಮಿ.ಮೀ ಹಾಗೂ ಮೊಳಕಾಲ್ಮುರು (Rain) ತಾಲ್ಲೂಕಿನಲ್ಲಿ 8.4 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ:
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 36 ಮಿ.ಮೀ, ನಾಯಕನಹಟ್ಟಿ 23 ಮಿ.ಮೀ, ಪರಶುರಾಂಪುರ 39.1 ಮಿ.ಮೀ, ತಳಕು 20.3 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 16.4 ಮಿ.ಮೀ, ಭರಮಸಾಗರ 10.4 ಮಿ.ಮೀ, ಹಿರೇಗುಂಟನೂರು 12 ಮಿ.ಮೀ, ತುರುವನೂರು 19.9 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 33 ಮಿ.ಮೀ, ಐಮಂಗಲ 32.2 ಮಿ.ಮೀ, ಧರ್ಮಪುರ 49.3 ಮಿ.ಮೀ, ಜವನಗೊಂಡನಹಳ್ಳಿ 42.4 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 7.7 ಮಿ.ಮೀ, ಬಿ.ದುರ್ಗ 4.7 ಮಿ.ಮೀ, ರಾಮಗಿರಿ 7.9 ಮಿ.ಮೀ, ತಾಳ್ಯ 6.8 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ (Rain) ಹೊಸದುರ್ಗದಲ್ಲಿ 9.9 ಮಿ.ಮೀ, ಮಾಡದಕೆರೆ 9.1 ಮಿ.ಮೀ, ಮತ್ತೋಡು 20 ಮಿ.ಮೀ, ಶ್ರೀರಾಂಪುರ 21 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 6.8 ಮಿ.ಮೀ ಹಾಗೂ ದೇವಸಮುದ್ರದಲ್ಲಿ 10.3 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: BL Venu: ಕುವೆಂಪು ವಿಶ್ವವಿದ್ಯಾಲಯ ಪಠ್ಯಕ್ಕೆ ಸಾಹಿತಿ ಬಿ.ಎಲ್.ವೇಣು ಕಥೆ ಸೇರ್ಪಡೆ
14 ಮನೆಗಳಿಗೆ ಹಾನಿ:
ಮಳೆಯಿಂದಾಗಿ ಜಿಲ್ಲೆಯಾದ್ಯಂತ 11 ಮನೆಗಳು ಭಾಗಶಃ ಹಾಗೂ 3 ಮನೆಗಳು ಸಂಪೂರ್ಣ ಹಾನಿಯಾಗಿವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 4 ಭಾಗಶಃ ಮನೆಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 3 ಭಾಗಶಃ ಮನೆ ಹಾನಿ, ಹೊಳಲ್ಕೆರೆ 4 ಭಾಗಶಃ ಮನೆ ಹಾನಿ ಹಾಗೂ 3 ಪೂರ್ಣ ಮನೆಹಾನಿ ಹಾಗೂ ಹಿರಿಯೂರು (Rain) ತಾಲ್ಲೂಕಿನಲ್ಲಿ 3 ಭಾಗಶಃ ಮನೆಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252