Chitradurga news|nammajana.com|9-8-2024
ನಮ್ಮಜನ.ಕಾಂ, ಚಳ್ಳಕೆರೆ: ಗ್ರಾಮೀಣ ಭಾಗಗಳಲ್ಲಿ (Residential School) ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಸರ್ಕಾರ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ವಸತಿ ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಸದುಪಯೋಗದ (Residential School) ಬಗ್ಗೆ ಮಾಹಿತಿ ಪಡೆಯಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಶಶಿಧರ ಬಾಲೇನಹಳ್ಳಿಯ ಶ್ರೀಮತಿ ಇಂದಿರಾಗಾಂಧಿ ವಸತಿಯುತ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ನೀಡುವ ಊಟದ ಗುಣಮಟ್ಟವನ್ನು ಪರಿಶೀಲಿಸಿದರಲ್ಲದೆ, ಮಕ್ಕಳಿಗೆ ಶಾಲೆಯಲ್ಲಿ ಸಿಗುತ್ತಿರುವ (Residential Schoo) ಗುಣಾತ್ಮಕ ಶಿಕ್ಷಣದ ಬಗ್ಗೆ ಮಾಹಿತಿ ಪಡೆದರು. ಎಲ್ಲಾ (Residential School) ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಿ ವಿದ್ಯಾಭ್ಯಾಸ ಮಾಡಬೇಕಿದೆ.
ಇದನ್ನೂ ಓದಿ: Power Cut: 8 ದಿನ ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್ ವ್ಯತ್ಯಯ | ಈ ಹಳ್ಳಿಗಳಲ್ಲಿ ಕರೆಂಟ್ ಕಟ್
ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡುವಲ್ಲಿ ಯಶಸ್ವಿಯಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ತನ್ನ ಶೈಕ್ಷಣಿಕ ಪ್ರಗತಿಯ ಬಗ್ಗೆ ತಾನೇ ಚಿಂತನೆ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಎಲ್ಲಾ (Residential School) ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಹೊಂದಲು ಪೂರ್ಣಪ್ರಮಾಣದಲ್ಲಿ ಸಿದ್ದತೆ ನಡೆಸಬೇಕು ಎಂದರು.
