Chitradurga news | nammajana.com | 18-07-2025
ನಮ್ಮಜನ.ಕಾಂ,ಚಿತ್ರದುರ್ಗ: ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆಗಳ 2025-26ನೇ ಸಾಲಿನ 6ನೇ ತರಗತಿಯ ವಿದ್ಯಾರ್ಥಿಗಳ 5ನೇ ಸುತ್ತಿನ ಸೀಟು ಹಂಚಿಕೆ ಕೌನ್ಸಿಲಿಂಗ್ (Counselling) ಕಾರ್ಯಕ್ರಮವನ್ನು ಇದೇ ಜುಲೈ 21ರಂದು ಬೆಳಿಗ್ಗೆ 10 ಗಂಟೆಯಿಂದ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಪಕ್ಕದ ಕ್ರೀಡಾ ಭವನದಲ್ಲಿ ನಡೆಸಲಾಗುವುದು.

ಇದನ್ನೂ ಓದಿ: ಲೋಕಾಯುಕ್ತ ಅಧಿಕಾರಿಗಳ ಪ್ರವಾಸ : ಸಾರ್ವಜನಿಕರ ಅಹವಾಲು ಸ್ವೀಕಾರ
5ನೇ ಸುತ್ತಿನ ಆಯ್ಕೆ ಪಟ್ಟಿ ಹಾಗೂ ಕಟ್ ಆಫ್ ಅಂಕಗಳ ವಿವರವನ್ನು ಎಲ್ಲಾ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರಕಟಿಸಲಾಗಿದ್ದು, ಕಟ್ ಆಫ್ ಅಂಕಗಳ ಮೇಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷಾ ಪ್ರವೇಶ ಪತ್ರ, ಜಾತಿ-ಆದಾಯ ಪ್ರಮಾಣ ಪತ್ರ, ವಿಶೇಷ ವರ್ಗಕ್ಕೆ ಸೇರಿದ್ದಲ್ಲಿ ಸಂಬಂಧಪಟ್ಟ ಪ್ರಮಾಣ ಪತ್ರ ಹಾಗೂ ವಿದ್ಯಾರ್ಥಿ ಆಧಾರ್ ಕಾರ್ಡ್ ಮೂಲ ಪ್ರತಿಗಳೊಂದಿಗೆ ಹಾಜರಾಗಲು ಸೂಚಿಸಿದೆ.
ಜುಲೈ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಇತರೆ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್(Counselling) ನಡೆಯಲಿದೆ.
ಅಭ್ಯರ್ಥಿಗಳಿಗೆ ಮೀಸಲಾತಿ ಹಾಗೂ ಮೆರಿಟ್ ಅನುಸಾರ ಖಾಲಿ ಇರುವ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ಪ್ರವೇಶ ನೀಡಲಾಗುವುದು.
ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ, ವ್ಯಕ್ತಿ ಸಾವು
ಹೆಚ್ಚಿನ ಮಾಹಿತಿಗೆ ಪೋಷಕರು ತಮಗೆ ಸಮೀಪವಿರುವ ಕ್ರೈಸ್ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಎಂದು ವಸತಿ ಶಾಲೆಗಳ ದಾಖಲಾತಿ ಸಮಿತಿ ಅಧ್ಯಕ್ಷರು ಹಾಗೂ ಚಿತ್ರದುರ್ಗ ಉಪವಿಭಾಗ ಸಹಾಯಕ ಆಯುಕ್ತರು ತಿಳಿಸಿದ್ದಾರೆ.
