Chitradurga news |nammajana.com|14-6-2024
ನಮ್ಮಜನ.ಕಾ, ಚಿತ್ರದುರ್ಗ: ರೋಟರಿ ಕ್ಲಬ್ ಚಿತ್ರದುರ್ಗ ವತಿಯಿಂದ ಹೊಳಲ್ಕೆರೆ ರಸ್ತೆಯಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ (Rotary Club Chitradurga) ಆಚರಿಸಲಾಯಿತು.
ರೋಟರಿ ಕ್ಲಬ್ ಚಿತ್ರದುರ್ಗ ಅಧ್ಯಕ್ಷ ಕನಕರಾಜ್ ಗಿಡ ನೆಟ್ಟು ಮಾತನಾಡುತ್ತ 1973 ರಿಂದಲೂ ಪ್ರತಿ ವರ್ಷ ವಿಶ್ವ ಪರಿಸರ ದಿನಾಚರಣೆಯನ್ನು (Rotary Club Chitradurga) ಆಚರಿಸಿಕೊಂಡು ಬರಲಾಗುತ್ತಿದೆ.

ರಸ್ತೆ ಅಗಲೀಕರಣದ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿದ್ದ ದೊಡ್ಡ ದೊಡ್ಡ ಮರಗಳನ್ನು ಕಡಿಯಲಾಗಿದೆ. ಇದಕ್ಕೆ ಪರ್ಯಾಯವಾಗಿ ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕಾಗಿದೆ. ಗಿಡ-ಮರಗಳನ್ನು ಕಡಿದು ನಾಶಪಡಿಸುವುದರಿಂದ ಪರಿಸರದಲ್ಲಿ (Rotary Club Chitradurga) ಅಸಮತೋಲನ ಉಂಟಾಗಿ ಸಮಯಕ್ಕೆ ಸರಿಯಾಗಿ ಮಳೆ ಬರುವುದಿಲ್ಲ. ಹಾಗಾಗಿ ಪರಿಸರ ಸಂರಕ್ಷಣೆ ಕುರಿತು ಎಲ್ಲರಲ್ಲಿಯೂ ಜಾಗೃತಿ ಮೂಡಬೇಕು ಎಂದು ತಿಳಿಸಿದರು.
ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕ ಮಾತನಾಡಿ ಪ್ರತಿಯೊಬ್ಬರು ಒಂದೊಂದು ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು (Rotary Club Chitradurga) ಆಚರಿಸಬೇಕು. ಆಗ ಮುಂದಿನ ಪೀಳಿಗೆಗೆ ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಬಹುದು. ಗಿಡ-ಮರಗಳಿಲ್ಲದಿದ್ದರೆ ಮಾನವನ ಉಸಿರಾಟಕ್ಕೆ ಶುದ್ದವಾದ ಗಾಳಿ ಸಿಗುವುದಿಲ್ಲ ಎಂದು ಹೇಳಿದರು.
ಇದನ್ನೂ ಓದಿ: Dina Bhavishya kannada: ಇಂದಿನ ದಿನ ಭವಿಷ್ಯ 14-6-2024
ರೋಟರಿ ಕ್ಲಬ್ ಚಿತ್ರದುರ್ಗ ನಿಯೋಜಿತ ಅಧ್ಯಕ್ಷ ವೀರಣ್ಣ, ಜಿ.ಎ.ವಿಶ್ವನಾಥ್, ಜಯಶ್ರಿಷಾ, ತರುಣ್‍ಷಾ, ಶಿವಣ್ಣ, ಗುರುರಾಜ್, ಹೆಗ್ಗನಗೌಡ್ರು, ಡಾ.ತಿಪ್ಪೇಸ್ವಾಮಿ, ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಿವರಶ್ಮಿ ಅಕ್ಕ ಇನ್ನು ಅನೇಕರು ವಿಶ್ವಪರಿಸರ ದಿನಾಚರಣೆಯಲ್ಲಿ ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252