Chitradurga news|Nammajana.com|13-8-2025
ನಮ್ಮಜನ.ಕಾಂ, ಚಿತ್ರದುರ್ಗ: ‘ಮಾಹಿತಿ ಹಕ್ಕು ಕಾಯ್ದೆಯ (RTI) ಅನುಸಾರ ನಿರ್ಮಿತಿ ಕೇಂದ್ರವು ಒಂದು ಸಾರ್ವಜನಿಕ ಪ್ರಾಧಿಕಾರ’ ಎಂಬ ಖಚಿತ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್ ಅರ್ಜಿ ಹಾಕಿದ ಒಬ್ಬ ವ್ಯಕ್ತಿಗೆ ಮಾಹಿತಿ ನೀಡಲು ನಿರಾಕರಣೆ ಮಾಡಿದ ಕಾರಣಕ್ಕಾಗಿ ಚಿತ್ರದುರ್ಗ ನಿರ್ಮಿತಿ ಕೇಂದ್ರಕ್ಕೆ ₹50 ಸಾವಿರ ದಂಡ ಹಾಕಿದೆ.
ಈ ಸಂಬಂಧ, ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆದ (ಪಿಐಒ) ಚಿತ್ರದುರ್ಗ ನಿರ್ಮಿತಿ ಕೇಂದ್ರದ ಯೋಜನಾ (RTI) ನಿರ್ದೇಶಕ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿದೆ.

ದಂಡದ ಮೊತ್ತವನ್ನು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಪಾವತಿಸಿ’ ಎಂದು ಚಿತ್ರದುರ್ಗ ನಿರ್ಮಿತಿ ಕೇಂದ್ರದ ಸಕ್ಷಮ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ನಿರ್ಮಿತಿ ಕೇಂದ್ರ ಸಹ ಸಾರ್ವಜನಿಕ ಪ್ರಾಧಿಕಾರ
ಪ್ರಕರಣದ ಪ್ರತಿವಾದಿ ತಿಮ್ಮಯ್ಯ ಅವರ ಪರ ಹೈಕೋರ್ಟ್ ವಕೀಲ ಜೆ.ಪ್ರಶಾಂತ್ ಮಂಡಿಸಿದ ವಾದವನ್ನು ಮಾನ್ಯ ಮಾಡಿರುವ ನ್ಯಾಯಪೀಠ ಈ ಪ್ರಕರಣದಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳು ಆಡಳಿತ ಪಾರದರ್ಶಕತೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿ ಕಾರಿದ್ದು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ನಿರ್ಮಿತಿ ಕೇಂದ್ರಗಳನ್ನು (RTI) ಸಾರ್ವಜನಿಕ ಪ್ರಾಧಿಕಾರಗಳು’ ಎಂದು ಘೋಷಿಸಿದೆ.
ಇದನ್ನೂ ಓದಿ: ಉದ್ಯೋಗ ಖಾತರಿ ಯೋಜನೆ ಕಾಮಗಾರಿ ವೀಕ್ಷಿಸಿದ ಜಿ.ಪಂ. CEO Dr.S.Akash
ನಿರ್ಮಿತಿ ಕೇಂದ್ರ ಸಹ ಆರ್ಟಿಐ ಕಾಯ್ದೆಗೆ ಒಳಪಟ್ಟಿದೆ.
ಎಲ್ಲಾ ಸರ್ಕಾರಿ ಅಧಿಕಾರಿಗಳು ಮತ್ತು ಇಲಾಖೆಗಳು ಆರ್‌ಟಿಐ ಕಾಯ್ದೆಗೆ ಒಳಪಟ್ಟಿರುವ ಅನುಸಾರವೇ ನಿರ್ಮಿತಿ ಕೇಂದ್ರವೂ ಮಾಹಿತಿ ಹಕ್ಕು ಕಾಯ್ದೆ–2005ರ (ಆರ್‌ಟಿಐ) ಕಲಂ 2(ಎಚ್) ಪ್ರಕಾರ ಆರ್‌ಟಿಐ ವ್ಯಾಪ್ತಿಗೆ ಒಳಪಡುತ್ತದೆ. ಆದ್ದರಿಂದ, ಈ ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಅರ್ಜಿದಾರರಾದ (RTI)ಹಿರಿಯೂರಿನ ‘ಭಾರತ ಕೃಷಿಕ ಸಮಾಜದ ಅಧ್ಯಕ್ಷ ಎಚ್.ಆರ್.ತಿಮ್ಮಯ್ಯ ಕೋರಿರುವ ಮಾಹಿತಿಯನ್ನು ಅವರಿಗೆ ಒದಗಿಸಿ ಎಂದು ನಿರ್ದೇಶನ ನೀಡಿದೆ.
