Chitradurga news |nammajana.com | 28-5-2024
ನಮ್ಮಜನ.ಕಾಂ, ಹೊಸದುರ್ಗ: ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ತಾಲೂಕಿನ ಸಾಣೆಹಳ್ಳಿ (Sanehalli) ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯು 2024-25 ನೇ ಸಾಲಿನ ರಂಗಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ.
ವಿದ್ಯಾರ್ಹತೆ ಮತ್ತು ಸೌಲಭ್ಯದ ವಿವರ (Sanehalli)
ಪ್ರವೇಶಕ್ಕೆ ಕನಿಷ್ಟ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕಾದದ್ದು ಅಗತ್ಯ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ಇರುತ್ತದೆ.
ಕರ್ನಾಟಕ ಹಾಗೂ ಭಾರತದ ರಂಗತಜ್ಞರಿಂದ ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ. ಗ್ರಂಥಭಂಡಾರ ಹಾಗೂ ದೃಶ್ಯ, ಶ್ರವ್ಯ, ಪರಿಕರಗಳ ಅನುಕೂಲತೆ ಇದೆ. ರಂಗಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.
ವಿಳಾಸ
ಪ್ರಾಚಾರ್ಯರು
ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ
ಸಾಣೇಹಳ್ಳಿ (Sanehalli) -577515 ಹೊಸದುರ್ಗ ತಾಲ್ಲೂಕ್, ಚಿತ್ರದುರ್ಗ ಜಿಲ್ಲೆ
ವಿಳಾಸದ ವಿವರ ಇಲ್ಲಿದೆ (Sanehalli)
ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ನಮ್ಮ ರಂಗಶಾಲೆಯ ವೆಬ್‌ಸೈಟ್ www.theatreschoolsanehlli.org ನಲ್ಲಿ ಪ್ರವೇಶ (Sanehalli) ಅರ್ಜಿಗಳನ್ನು ಡೌನ್‌ಲೋಡ್ ಮಾಡಿ ಜೂನ್ 25ರ ಒಳಗಾಗಿ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸುವುದು.
ಸಂಪರ್ಕ ಸಂಖ್ಯೆ (Sanehalli)
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252
