Chitradurga news|nammajana.com|11-8-2024
ನಮ್ಮಜನ.ಕಾಂ, ಹಿರಿಯೂರು: ಕೇವಲ ಮೀಸಲಾತಿಯಿಂದಷ್ಟೇ ಅಭಿವೃದ್ಧಿ ಹೊಂದುತ್ತೇವೆ ಎಂದು ಸುಮ್ಮನೆ ಕೂರದೇ ಎಲ್ಲರೂ ವೈಯಕ್ತಿಕವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಅಭಿಪ್ರಾಯಪಟ್ಟರು.
ನಗರದ ನೆಹರೂ ಮೈದಾನದ ಎ.ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ಶನಿವಾರ ತಾಲೂಕು ವಾಲ್ಮೀಕಿ ನಾಯಕ ಸಮಾಜ, ವಾಲ್ಮೀಕಿ ನೌಕರರ ಸಂಘ, ವಾಲ್ಮೀಕಿ ನಾಯಕ (Satish Jarakiholi) ವಕೀಲರ ಸಂಘ, ವಾಲ್ಮೀಕಿ ನಾಯಕ ನಿವೃತ್ತ ನೌಕರರ ಸಂಘದ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಡಾ.ಅಂಬೇಡ್ಕರ್ ಹೇಳಿದಂತೆ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. ಯಾರೂ ಯಾರನ್ನು ಉದ್ಧಾರ ಮಾಡುವುದಿಲ್ಲ. ಹೋರಾಟ, ಛಲ, ಹಠ ಇಟ್ಟು ಕೊಂಡು ವಿದ್ಯಾರ್ಥಿಗಳು ಬದುಕನ್ನು (Satish Jarakiholi) ಎದುರಿಸಬೇಕು. ನೌಕರಿಗಳ ಕೊರತೆ ಕಾಡುತ್ತಿದ್ದು ಬಹಳಷ್ಟು ಜನರು ಉದ್ಯೋಗ ವಂಚಿತರಾಗಿದ್ದಾರೆ. ಹಾಗಾಗಿ ವೈಯಕ್ತಿ ಕವಾಗಿ ಒಂದೊಂದು ವೃತ್ತಿ ಆಯ್ದುಕೊಂಡು ಅಭಿವೃ
ಹಿರಿಯೂರು ನಗರದ ನೆಹರೂ ಮೈದಾನದ ಎ ಕೃಷ್ಣಪ್ಪ ರೋಟರಿ ಸಭಾಂಗಣದಲ್ಲಿ ತಾಲೂಕು ವಾಲ್ಮೀಕಿ ನಾಯಕ ಸಮಾಜದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟನೆ ನಡೆಯಿತು.
ಕೇವಲ ಮೀಸಲಾತಿಯಿಂದಲೇ ಎಲ್ಲಾ ಸಮಸ್ಯೆಗಳು ಪರಿಹಾರವಾಗಲ್ಲ. ಬದುಕಿಗೆ ಬೇರೆ ಬೇರೆ ದಾರಿ ನಾವೇ (Satish Jarakiholi) ಹುಡುಕಿಕೊಳ್ಳಬೇಕು. 75 ವರ್ಷಗಳ ಹೋರಾಟದ ನಂತರ ಸಮಾಜ ಒಂದು ಹಂತ ತಲುಪಿದೆ. ಈಗಿನ ಮಕ್ಕಳು ಶೇ.80ಕ್ಕಿಂತ ಹೆಚ್ಚಿನ ಅಂಕ ತೆಗೆಯುತ್ತಿದ್ದಾರೆ.
ಇದು ಒಳ್ಳೆಯ ಬೆಳವಣಿಗೆಯಾಗಿದ್ದು, ಶಿಕ್ಷಣದಿಂದ ಮಾತ್ರ ಸಮಾಜದ ಪ್ರಗತಿ ಸಾಧ್ಯ. ಈಗಿನ ಮತ್ತು ಈ ಹಿಂದಿನ ಸ್ವಾಮೀಜಿಗಳಿಂದಾಗಿ ವಾಲ್ಮೀಕಿ ಸಮುದಾಯ ಮುನ್ನೆಲೆಗೆ ಬರುತ್ತಿದೆ. ಮುಖ್ಯವಾಗಿ ಪೋಷಕರು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿಸಲು ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಾತನಾಡಿ, ವಿದ್ಯಾರ್ಥಿಗಳ ಪ್ರತಿಭೆ ಗುರುತಿಸಿ ಅವರಿಗೆ ಪ್ರೋತ್ಸಾಹ ಕೊಡಬೇಕಾದುದು ಆಯಾ ಸಮಾಜದ ಕರ್ತವ್ಯವಾಗಿದೆ. (Satish Jarakiholi) ಪಿಯುಸಿ ನಂತರ ವಿದ್ಯಾರ್ಥಿಗಳ ಭವಿಷ್ಯ ಪ್ರಮುಖ ಘಟ್ಟದಲ್ಲಿರು ಇದೆ. ಆ ಸಮಯದಲ್ಲಿ ವಿದ್ಯಾರ್ಥಿಗಳು ಆಲಸ್ಯ ತೋರದೇ ವಿದ್ಯಾಭ್ಯಾಸದ ಮಹತ್ವ ಅರಿತು ಮುನ್ನಡೆಯಬೇಕು.
ವಿದ್ಯೆ ಜೊತೆಗೆ ಸಂಸ್ಕಾರ ಕಲಿತರೆ ಮಾತ್ರ ವಿದ್ಯೆಗೆ ಗೌರವ ಸಿಗುತ್ತದೆ. ನಾನು ಮೊದಲ ಬಾರಿ ಶಾಸಕನಾದ ದಿನದಿಂದಲೂ ವಾಲ್ಮೀಕಿ ಭವನಗಳು, ಬೋರ್‌ವೆಲ್ ಗಳನ್ನು ನೀಡುತ್ತಾ ಬಂದಿದ್ದೇನೆ. ವಾಲ್ಮೀಕಿ ಸಮುದಾಯದ ಅಭಿವೃದ್ಧಿಗೆ ಬೆಳವಣಿಗೆಗೆ ಸದಾ ಸಹಕಾರ ನೀಡಿದ ತೃಪ್ತಿ ನನಗಿದೆ. ಪಂಚ ಗ್ಯಾರಂಟಿಗಳಿಂದಾಗಿ ಒಂದಿಷ್ಟು ಆರ್ಥಿಕ ಹಿನ್ನಡೆಯಾಗಿದ್ದರು ಸಹ ಬರುವ ದಿನಗಳಲ್ಲಿ ಎಲ್ಲವನ್ನು ಸರಿದೂಗಿಸಲಾ ಗುವುದು. ಎಲ್ಲಾ ರೀತಿಯ ಅಭಿವೃದ್ಧಿ ಕಾರ್ಯಕ್ರಮಗಳೂ ಚಾಲನೆಗೊಂಡಿದ್ದು ಸಮಗ್ರ ಅಭಿವೃದ್ಧಿ ಸಂಕಲ್ಪ ಹೊಂದಿದ್ದೇವೆ ಎಂದರು.
ಚಳ್ಳಕೆರೆ ಶಾಸಕ ರಘುಮೂರ್ತಿ ಮಾತನಾಡಿ, ಮಾನವ ಬಂಧುತ್ವ ವೇದಿಕೆಯು ಎಲ್ಲಾ ತುಳಿತಕ್ಕೊಳ ಗಾದವಾರ ಬೆನ್ನಿಗೆ ನಿಂತಿದೆ. ಜನಾಂಗದ ಅಭಿವೃದ್ಧಿಗೆ ನಮ್ಮೆಲ್ಲ ನಾಯಕರು (Satish Jarakiholi) ಕಟಿಬದ್ದರಾಗಿದ್ದಾರೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುವುದಷ್ಟೇ ಅಲ್ಲ. ಉತ್ತಮ ಸಂಸ್ಕೃತಿ ಮತ್ತು ಮೌಲ್ಯ ಬೆಳೆಸಿಕೊಳ್ಳಬೇಕು ಎಂದರು.
ಇದನ್ನೂ ಓದಿ: Today Dina Bhavishya: ಇಂದಿನ ರಾಶಿ ಭವಿಷ್ಯ 11-8-2024
ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಯೋಗೀಶ್ ಬಾಬು, ಹರ್ತಿಕೋಟೆ ವೀರೇಂದ್ರ ಸಿಂಹ, ಪ್ರಾಚಾರ್ಯ ಡಿ ಚಂದ್ರಶೇಖರ್, ಜೆ ಕರಿಯಪ್ಪ ಮಾಳಿಗೆ, ಎಚ್ ಎಸ್ ಮಂಜುನಾಥ್, ಡಾ ಹೇಮಣ್ಣ ನಾಯಕ, ಈಶ್ವರಪ್ಪ, ನಾಗರಾಜ್ ಸೊಂಡೆಕೆರೆ, ಬಸವರಾಜ್, ಅನಿಲ್ ಕುಮಾರ್, ಕವಿತಾ ಲೋಕೇಶ್, ಹೇಮದಳ ಶ್ರೀಧರ್, ಮಂಜುನಾಥ್ ಮಾಳಿಗೆ, ವಿ ಗಿರೀಶ್, ಎಂಡಿ ಕೋಟೆ ಕುಮಾರ್, ಶಿವಮೂರ್ತಿ ಇತರರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252