Chitradurga News | nammajana.com |30-4-2024
ನಮ್ಮಜನ.ಕಾಂ.ಚಿತ್ರದುರ್ಗ: 2024-25ನೇ ಸಾಲಿಗೆ “ಪ್ರತಿಷ್ಠಿತ ಶಾಲೆಗಳಿಗೆ ಪ್ರತಿಭಾವಂತ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳನ್ನು “ಆಯ್ಕೆ ಮಾಡುವ ಕಾರ್ಯಕ್ರಮದಡಿ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ 5ನೇ ತರಗತಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರವೇಶ ನೀಡಲು ಆನ್‍ಲೈನ್ ಮುಖಾಂತರ ನೊಂದಣಿ ಮಾಡಿಕೊಳ್ಳಲು ಮೇ 9 ರಿಂದ ಮೇ21 ರ ವರೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆನ್‍ಲೈನ್ ನೊಂದಣಿ ಪ್ರಕ್ರಿಯೆಯು ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರು ಗ್ರೇಡ್-1&2 ಸಮಾಜ ಕಲ್ಯಾಣ ಇಲಾಖೆಯ ಕಛೇರಿ ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಕಛೇರಿಯ ಕಛೇರಿ ವೇಳೆಯಲ್ಲಿ ನೊಂದಣಿ ಮಾಡಲಾಗುವುದು.

ವಿಶೇಷ ಸೂಚನೆ: ಪೋಷಕರಿಗೆ ಮಾಹಿತಿಗಾಗಿ
ಸಂಬಂಧಪಟ್ಟ ಎಲ್ಲಾ ದಾಖಲಾತಿಗಳೊಂದಿಗೆ ಪೋಷಕರು ಸದರಿ ಇಲಾಖಾ ಕಛೇರಿಗಳಲ್ಲಿ ಆನ್‍ಲೈನ್ ಮೂಲಕ ನೊಂದಣಿ ಮಾಡಿಸುವಂತೆ ಸೂಚಿಸಿದೆ. ಮೇ 21 ರ ಕೊನೆಯ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.
ಷರತ್ತುಗಳು ಅನ್ವಯ
ವಿದ್ಯಾರ್ಥಿಯು ಪರಿಶಿಷ್ಟ ಜಾತಿಗೆ ಸೇರಿದ್ದು, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ.2.50 ಲಕ್ಷ ಮೀರಿರಬಾರದು. ಪ್ರತಿಭಾವಂತ ವಿದ್ಯಾರ್ಥಿಯಾಗಿರಬೇಕು. 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದಿರಬೇಕು.
ನಿಗಧಿಪಡಿಸಲಾದ ಗುರಿಯಲ್ಲಿ ಬಾಲಕಿಯರಿಗೆ ಶೇ50ರಷ್ಟು ಮೀಸಲಾತಿ ಇರುತ್ತದೆ. ವಿದ್ಯಾರ್ಥಿಗಳು ಪ್ರತಿಷ್ಟಿತ ಶಾಲೆಗಳ ಆಯ್ಕೆ ಕೋರಿ ವಿದ್ಯಾರ್ಥಿಗಳು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸತಕ್ಕದ್ದು.
ಒಂದೇ ಕುಟುಂಬದ ಇಬ್ಬರಿಗೆ ಅವಕಾಶ
ಒಂದೇ ಕುಟುಂಬದಲ್ಲಿ ಇಬ್ಬರಿಗೆ ಒಬ್ಬ ಬಾಲಕ ಮತ್ತು ಒಬ್ಬ ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೂ ಅಥವಾ ಬಾಲಿ ಇಲ್ಲದಿದ್ದಲ್ಲಿ ಇಬ್ಬರು ಬಾಲಕರಿಗೆ ಪ್ರವೇಶಾವಕಾಶ ಕಲ್ಪಿಸಲಾಗುವುದು. 5ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದು.
ಇದನ್ನೂ : ಮೇ 1 ರಂದು ವಿದ್ಯುತ್ ವ್ಯತ್ಯಯ
ಅಗತ್ಯವಿರುವ ದಾಖಲುಗಳು
ಪೋಷಕರು ನಿಗದಿತ ಅರ್ಜಿಯೊಂದಿಗೆ 04 ಪಾರ್ಸ್ ಪೋಟೋ ಸೈಜ್ ಭಾವಚಿತ್ರ 5ನೇ ತರಗತಿಯ ಅಂಕಪಟ್ಟಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್. ಇತ್ಯಾದಿ ಅಗತ್ಯ ನಕಲು ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಜಗದೇಶ್ ಹೆಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252