Chitradurga News | Nammajana. Com | 30-4-2024
ನಮ್ಮಜನ.ಕಾಂ.ಚಿತ್ರದುರ್ಗ: ಸಾಮಾಜಿಕ ಹಾಗೂ ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ವರ್ಗದ (ಎಸ್.ಟಿ) ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು, ಪರಿಶಿಷ್ಟ ವರ್ಗಗಳ ಇಲಾಖೆ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 9 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಮೇ 21 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
5ನೇ ತರಗತಿಯಲ್ಲಿ ಶೇ. 60 ಕ್ಕಿಂತ ಹೆಚ್ಚು ಅಂಕಗಳಿಸಿರುವ ವಾರ್ಷಿಕವಾಗಿ, ಕುಟುಂಬದ ವರಮಾನ ರೂ.2.00 ಲಕ್ಷ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಧೃಡೀಕೃತ ಅಂಕಪಟ್ಟಿಯನ್ನು ಅರ್ಜಿ ಜೊತೆಗೆ ಕಡ್ಡಾಯವಾಗಿ ಲಗತ್ತಿಸಬೇಕು. ಮುಖ್ಯೋಪಾಧ್ಯಯರು ಕಡ್ಡಾಯವಾಗಿ ಶೇಕಡವಾರು ನಮೂದಿಸಿದ ಅಂಕಪಟ್ಟಿಯನ್ನು ಮಾತ್ರ ಆಯ್ಕೆ ಪರಿಗಣಿಸಲಾಗುವುದು. ಅಂಕಪಟ್ಟಿಯಲ್ಲಿನ ಗ್ರೇಡ್‍ಅನ್ನು ನಮೂದಿಸಿದ್ದಲ್ಲಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಅರ್ಹತಾ ಪರೀಕ್ಷಾ ಮೂಲಕ ವಿದ್ಯಾರ್ಥಿಗಳು ಆಯ್ಕೆ ಮಾಡಲಾಗುವುದು. ಪೋಷಕರು ಆಯ್ಕೆ ಮಾಡಿದ ಪ್ರತಿಷ್ಠಿತ ಶಾಲೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗುವುದು.

ವಿದ್ಯಾರ್ಥಿಗಳ ಶುಲ್ಕ ಮತ್ತು ನಿರ್ವಹಣಾ ವೆಚ್ಚವನ್ನು ಸರ್ಕಾರದ ನಿಯಮಗಳ ಅಡಿ ಪ್ರವೇಶ ಪಡೆದ ಶಾಲೆಯು ನಿಗಧಿ ಪಡಿಸಿದ ದರದಲ್ಲಿ ನೀಡಲಾಗುವುದು.
ಆಯಾ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಚಿತ್ರದುರ್ಗ ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅರ್ಜಿ ಪಡೆದುಕೊಳ್ಳಬಹುದು.
ಇದನ್ನೂ ಓದಿ: ಚಿತ್ರದುರ್ಗ:ನ್ಯಾಯಾಲಯಕ್ಕೆ ಶರಣಾದ ಮುರುಘಾ ಶರಣರು
ಅಪೂರ್ಣಗೊಂಡ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಟ ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಓ.ಪರಮೇಶ್ವರಪ್ಪ ಪ್ರಕಟಣೆ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252