Chitradurga news|Nammajana.com|6-8-2025
ನಮ್ಮಜನ.ಕಾಂ, ಚಳ್ಳಕೆರೆ: ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ (ST) ಸರ್ಕಾರಿ ನೌಕರರ ಸಂಘದ ಜಿಲ್ಲಾ ಸಮ್ಮೇಳನವನ್ನು ಆಯೋಜಿಸುವ ಕುರಿತು ಸಮಾಲೋಚನ ಸಭೆಯನ್ನು ಸರ್ಕಾರಿ ನೌಕರರ ಭವನದಲ್ಲಿ ಸರ್ಕಾರಿ ನೌಕರರ ಸಂಘದ ಚಳ್ಳಕೆರೆ ತಾಲೂಕು ಸಿ.ಟಿ.ವೀರೇಶ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪ್ರಾಸ್ತಾವಿಕವಾಗಿ ಸಭೆಯಲ್ಲಿ ಮಾತನಾಡಿದ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ರಾಜಣ್ಣ, ಈಗಾಗಲೇ ಸಂಘಟನೆ ಯನ್ನು ಬಿಗಿಗೊಳಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಸಂಘಟನೆಯ ಕಾರ್ಯ ಯೋಜನೆಗಳಿಗೆ ಚಾಲನೆ ನೀಡುವ ದೃಷ್ಠಿಯಿಂದ ಜಿಲ್ಲಾ (ST) ಸಮ್ಮೇಳನವನ್ನು ನಡೆಸಲು ಎಲ್ಲರೂ ಅಭಿಲಾಷೆ


ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕು ಘಟಕ ಇದರ ಪೂರ್ಣ ಜವಾ ಬ್ದಾರಿಯನ್ನು ಹೊತ್ತು ಜಿಲ್ಲಾ ಸಮ್ಮೇಳನ ನಡೆಸಲು ಅಗತ್ಯವಿರುವ ವ್ಯವಸ್ಥೆಯನ್ನು ಸಿದ್ದಪಡಿಸಿಕೊಳ್ಳುವಂತೆ ವಿನಂತಿಸಿದರು.
ಇದನ್ನೂ ಓದಿ: Today Dina Bhavishya | ದಿನ ಭವಿಷ್ಯ | ಯಾವ್ಯಾವ ರಾಶಿಗೆ ಶುಭ!
ನಾಯಕ ನೌಕರರ ಸಂಘದ ತಾಲೂಕು ಅಧ್ಯಕ್ಷಸಿ.ಟಿ.ವೀರೇಶ್ ಮಾತನಾಡಿದರು. ಈ ವೇಳೆ ಉಪಾಧ್ಯಕ್ಷಶ್ರೀನಿವಾಸ್ ನಾಯಕ, ಜಂಟಿ ಕಾರ್ಯದರ್ಶಿ ಎಚ್.ಮಹೇಶ್, ಜಿಲ್ಲಾ ಕಾರ್ಯದರ್ಶಿ ರಾಜಯ್ಯ, ನಾಯಕ ನೌಕರರ ಸಂಘಟನೆಯ ಮುಖಂಡರಾದ ಜಿ.ಟಿ.ವೀರಭದ್ರಸ್ವಾಮಿ, ಸಿ.ಗುರುಸ್ವಾಮಿ, ಡಾ.ರಘುನಾಥ, (ST) ಟಿ.ಸೂರನಾಯಕ, ಹನುಮಂತರಾಯ, ಡಿ.ಎಸ್.ಪಾಲಯ್ಯ, ಬೊಮ್ಮಯ್ಯ, ಮಂಜುನಾಥ, ರಜನಿಕಾಂತ್, ಸುರೇಶ್, ಉಮೇಶ್ ಮುಂತಾದವರು ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252