Chitradurga news |nammajana.com|23-9-2024
ನಮ್ಮಜನ.ಕಾಂ, ಚಿತ್ರದುರ್ಗ: ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಿದ್ದು, (Scheduled Tribe) ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರಿಸಿದ ರೂ.79,156 ಕೋಟಿಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳನ್ನು ಅಭಿವೃದ್ಧಿ ಪಡಿಸಲು ಕ್ರಿಯಾಯೋಜನೆ (Scheduled Tribe) ರೂಪಿಸಲಾಗಿದೆ. ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ.
ದೇಶದ ಸುಮಾರು 5 ಕೋಟಿ ಜನರಿಗೆ ಯೋಜನೆಯಿಂದ ಅನುಕೂಲವಾಗಲಿದೆ. 2024-25 ರಿಂದ 2028-29ನೇ ಸಾಲಿನ ವರೆಗೆ 5 ವರ್ಷಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು.
2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ ರೂ.4000 ಕೋಟಿ ಅನುದಾನವನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ನಿಗದಿ ಮಾಡಲಾಗಿದೆ.
ಈ ಅಭಿಯಾನದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ಪರಿಶಿಷ್ಟ ವರ್ಗದ ಜನಾಂಗದವರು ಹೆಚ್ಚಾಗಿರುವ 87 ಗ್ರಾಮಗಳನ್ನು ಆಯ್ಕೆ ಮಾಡಿ ಭೌತಿಕ ಗುರಿ ನಿಗಧಿ ಪಡಿಸಲಾಗಿzದ್ದು, 17 ವಿವಿಧ ಇಲಾಖೆಗಳು (Scheduled Tribe) ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಿವೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಪಕ್ಕಾ ಮನೆ, ಸಂಪರ್ಕ ರಸ್ತೆಗಳು, ಗ್ರಾಮೀಣ ನೀರು ಸರಬರಾಜು ಇಲಾಖೆಯಿಂದ ನೀರು ಸರಬರಾಜು (ಜೆಜೆಎಂ), ವಿದ್ಯುತ್ ಇಲಾಖೆಯಿಂದ ಮನೆಗಳ ವಿದ್ಯುದೀಕರಣ (ಆರ್‍ಡಿಎಸ್‍ಎಸ್) ಒದಗಿಸಲಾಗುತ್ತದೆ.
ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಆಫ್-ಗ್ರಿಡ್ ಸೌರ, ಹೊಸ ಸೌರ ವಿದ್ಯುತ್ ಯೋಜನೆ, ಆರೋಗ್ಯ ಇಲಾಖೆಯಿಂದ ಸಂಚಾರಿ ವೈದ್ಯಕೀಯ ಘಟಕಗಳು, ರಾಷ್ಟ್ರೀಯ ಆರೋಗ್ಯ ಮಿಷನ್, ಆಯುಷ್ಮಾನ್ ಕಾರ್ಡ್, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (Scheduled Tribe) ಇಲಾಖೆಯಿಂದ ಎಲ್‍ಪಿಜಿ ಪಿಎಂ ಉಜ್ವಲ ಯೋಜನೆಯಡಿ ಸಂಪರ್ಕಗಳು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿ, ಪೋಷಣ್ ಅಭಿಯಾನ್, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿನಿಲಯಗಳ ನಿರ್ಮಾಣ, ಆಯುಷ್ ಇಲಾಖೆಯಿಂದ ಪೋಷಣ್ ವಾಟಿಕಾಸ್, ಟೆಲಿಕಾಂ ಇಲಾಖೆಯಿಂದ ಯುನಿವರ್ಸಲ್ ಸೇವೆ, ಕೌಶಲ್ಯಾಭಿವೃದ್ಧಿ (Scheduled Tribe) ಇಲಾಖೆಯಿಂದ ಸ್ಕಿಲ್ ಇಂಡಿಯಾ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಇಲಾಖೆಯಿಂದ ಡಿಜಿಟಲ್ ಇನಿಶಿಯೇಟಿವ್ಸ್, ಕೃಷಿ ಇಲಾಖೆಯಿಂದ ಸುಸ್ಥಿರ ಕೃಷಿ ಉತ್ತೇಜನ, ಮೀನುಗಾರಿಕೆ ಇಲಾಖೆಯಿಂದ ಮೀನು ಸಂಸ್ಕøತಿಯ ಬೆಂಬಲ, ಪಶುಸಂಗೋಪನೆ ಇಲಾಖೆಯಿಂದ ಜಾನುವಾರು ಪಾಲನೆ, ಪಂಚಾಯತ್ ರಾಜ್ ಇಲಾಖೆಯಿಂದ ಸಾಮಥ್ರ್ಯ ಕಟ್ಟಡ, ಪ್ರವಾಸೋದ್ಯಮ ಇಲಾಖೆಯಿಂದ ಟ್ರೈಬಲ್ ಹೋಂ ಸ್ಟೇಸ್, ಸ್ವದೇಶ್ ದರ್ಶನ, ಬುಡಕಟ್ಟು ವ್ಯವಹಾರಗಳ ಸಚಿವಾಲಯದಿಂದ ಪ್ರಧಾನಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಅನುಷ್ಠಾನಗೊಳ್ಳಲಿವೆ.
ಅಭಿಯಾನದಡಿ ಜಿಲ್ಲೆಯಲ್ಲಿ 100 ಬುಡಕಟ್ಟು ಬಹು ಉಪಯೋಗಿ ಮಾರ್ಕೆಟಿಂಗ್ ಕೇಂದ್ರಗಳು, ಆಶ್ರಮ ಶಾಲೆಗಳು, ವಿದ್ಯಾರ್ಥಿನಿಲಯಗಳು, ಸರ್ಕಾರಿ ಅಥವಾ ರಾಜ್ಯ ಬುಡಕಟ್ಟು (Scheduled Tribe) ವಸತಿ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು.
ಕೌನ್ಸೆಲಿಂಗ್ ಬೆಂಬಲ, ಅರಣ್ಯ ಹಕ್ಕು ಕಾಯ್ದೆ-2006 ಮತ್ತು ಸಮುದಾಯ ಅರಣ್ಯ ಹಕ್ಕು ನಿರ್ವಹಣೆ ಮಧ್ಯಸ್ಥಿಕೆಗಳಿಗೆ (Scheduled Tribe) ಬೆಂಬಲ, ಯೋಜನಾ ನಿರ್ವಹಣಾ ನಿಧಿಗಳು ಉತ್ಪನ್ನ ಪ್ರದರ್ಶನ ನೀಡುವ ಬುಡಕಟ್ಟು ಜಿಲ್ಲೆಗಳಿಗೆ ಪ್ರೋತ್ಸಾಹ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಯೋಜನೆಗೆ ಒಳಪಟ್ಟ 87 ಗ್ರಾಮದ ಎಲ್ಲಾ ಬುಡಕಟ್ಟು ಜನಾಂಗದವರು ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.