Chitradurga News | Nammajana.com | 28-08-2025
ನಮ್ಮಜನ ನ್ಯೂಸ್ ಕಾಂ,ಚಿತ್ರದುರ್ಗ: ಕರ್ನಾಟಕ(Seminar) ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‍ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್ ದೃಷ್ಟಿಕೋನ” ವಿಷಯ ಕುರಿತು ಒಂದು ದಿನದ ವಿಚಾರಸಂಕಿರಣ ಕಾರ್ಯಕ್ರಮ ಆ. 30 ರಂದು ಬೆಳಿಗ್ಗೆ 10 ಗಂಟೆಗೆ ಪತ್ರಿಕಾ ಭವನದ “ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣ”ದಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ: ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.
ಸಂಸದ ಗೋವಿಂದ ಎಂ. ಕಾರಜೋಳ ಅವರು ಘನ ಉಪಸ್ಥಿತಿ ವಹಿಸುವರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಹಿರಿಯ ಪತ್ರಕರ್ತ ಡಿ. ಉಮಾಪತಿ ಅವರು ದಿಕ್ಸೂಚಿ ಭಾಷಣ ಮಾಡುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸಲಿದ್ದು, ಪ್ರಾಸ್ತಾವಿಕವಾಗಿ ಮಾತನಾಡುವರು. ಗೌರವಾನ್ವಿತ ಅತಿಥಿಗಳಾಗಿ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ. ಗೋವಿಂದಪ್ಪ, ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ. ಎಂ. ಚಂದ್ರಪ್ಪ.
ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ : ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ವಿಧಾನಪರಿಷತ್ ಸದಸ್ಯರುಗಳಾದ(Seminar) ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ಡಿ.ಟಿ. ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ. ಬಿ. ಯೋಗೇಶ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್. ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ ಬಂಡಾರು, ಕರ್ನಾಟಕ ರಾಜ್ಯ ಎಸ್ಸಿ/ಎಸ್ಟಿ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಗೌಡಗೆರೆ ಮುಂತಾದ ಗಣ್ಯಮಾನ್ಯರು ಭಾಗವಹಿಸುವರು.
ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 11.30 ಗಂಟೆಗೆ ಜರುಗುವ ಮೊದಲ ಗೋಷ್ಠಿಯಲ್ಲಿ ಶಿವಮೊಗ್ಗ ಟೆಲೆಕ್ಸ್ ದಿನಪತ್ರಿಕೆ ಸಂಪಾದಕ ರವಿಕುಮಾರ್ ಎನ್. ಅವರು “ಅಂಬೇಡ್ಕರ್ ಅವರ ಪತ್ರಿಕಾ ವೃತ್ತಿ” ಕುರಿತು ಹಾಗೂ ಸಾಮಾಜಿಕ ಚಿಂತಕ ವಿ.ಎಲ್. ನರಸಿಂಹಮೂರ್ತಿ ಅವರು “ಪತ್ರಕರ್ತರಾಗಿ ಅಂಬೇಡ್ಕರ್ ಅವರ ಬರವಣಿಗೆಗಳು” ಕುರಿತು ವಿಷಯ ಮಂಡಿಸುವರು.
ಮಧ್ಯಾಹ್ನ 2 ಗಂಟೆಗೆ ನಡೆಯುವ ಎರಡನೆ ಗೋಷ್ಠಿಯಲ್ಲಿ ಶಿವಮೊಗ್ಗದ ಕನ್ನಡ ಸಹಪ್ರಾಧ್ಯಾಪಕಿ ಡಾ. ಭಾರತಿದೇವಿ ಪಿ. ಅವರು “ಅಂಬೇಡ್ಕರ್ ದೃಷ್ಟಿಯಿಲ್ಲಿ ಲಿಂಗಸಮಾನತೆ” ಕುರಿತು ಹಾಗೂ ಬೆಳಗಾವಿಯ ದಿ ಹಿಂದೂ ಪತ್ರಿಕೆಯ ಹಿರಿಯ ಸಹಾಯಕ ಸಂಪಾದಕ ರಿಷಿಕೇಶ್ ಬಹದ್ದೂರ್ ದೇಸಾಯಿ ಅವರು “ಪತ್ರಕರ್ತರಲ್ಲಿ ಸಾಮಾಜಿಕ ನ್ಯಾಯದ ಪ್ರಜ್ಞೆ” ಕುರಿತು ವಿಷಯ ಮಂಡಿಸುವರು.
ಸಂಜೆ 04 ಗಂಟೆಗೆ ಜರುಗುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಪತ್ರಕರ್ತರು ಹಾಗೂ ಅಂಕಣಕಾರರಾದ ಸನತ್ ಕುಮಾರ್ ಬೆಳಗಲಿ ಸಮಾರೋಪ ಭಾಷಣ ಮಾಡುವರು.
ಇದನ್ನೂ ಓದಿ: ಶಾಲಾ ಮಾದರಿಯ ಗಣಪತಿ ಮಂಟಪ ರಚನೆ
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ(Seminar) ಹಾಗೂ ಡಾ. ಜೆ. ಕರಿಯಪ್ಪ ಮಾಳಿಗೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ಅಧ್ಯಕ್ಷತೆ ವಹಿಸುವರು ಎಂದು ಕಾರ್ಯಕ್ರಮದ ಸಂಯೋಜಕರು ಹಾಗೂ ಮಾಧ್ಯಮ ಅಕಾಡೆಮಿ ಸದಸ್ಯರಾದ ಎಂ.ಎನ್. ಅಹೋಬಳಪತಿ ಹಾಗೂ ಅಕಾಡೆಮಿಯ ಕಾರ್ಯದರ್ಶಿ ಎಂ. ಸಹನಾ ಅವರು ತಿಳಿಸಿದ್ದಾರೆ.
