
Chitradurga news|nammajana.com|08-02-2025
ನಮ್ಮಜನ.ಕಾಂ, ಚಿತ್ರದುರ್ಗ: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ವಿದ್ಯುತ್ ಸ್ಥಾವರದಲ್ಲಿ ಬ್ರೇಕರ್ ಅಳವಡಿಸುವ ಕೆಲಸ ಕೈಗೊಳ್ಳಬೇಕಾಗಿರುವುದರಿಂದ ಶಾಂತಿ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು (Shanti Sagara) ತಾತ್ಕಾಲಿಕವಾಗಿ ಇದೇ ಫೆ.09 ಮತ್ತು 10ರಂದು ಸ್ಥಗಿತಗೊಳಿಸಲಾಗುತ್ತಿದೆ.
ಇದನ್ನೂ ಓದಿ: Chitradurga |15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಸಚಿವ ಮಧು ಬಂಗಾರಪ್ಪ

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಲು ಕೋರಿದೆ. ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು (Shanti Sagara) ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ತಿಳಿಸಿದ್ದಾರೆ.
