Chitradurga News | Nammajana.com | 16-07-2025
ನಮ್ಮಜನ ನ್ಯೂಸ್, ಕಾಂ, ಚಿತ್ರದುರ್ಗ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಇದೇ ಜುಲೈ 17 ರಿಂದ 19 ರವರೆಗೆ ಹಿರಿಯೂರು ತಾಲ್ಲೂಕಿನ ಬಬ್ಬೂರುಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲೆಯ ಆಸಕ್ತ ರೈತರಿಗೆ ವೈಜ್ಞಾನಿಕ ಹೈನುಗಾರಿಕೆ, ಕುರಿ ಮತ್ತು ಮೇಕೆ(sheep and goat) ಸಾಕಾಣಿಕೆ ಕುರಿತು 3 ದಿನಗಳ ವಸತಿಯುಕ್ತ ಉಚಿತ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಅಗ್ನಿವೀರ್ ನೇಮಕಾತಿ

ಜುಲೈ 17ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಹೈನುಗಾರಿಕೆ ಪದ್ದತಿ ಕುರಿತು ವಿಷಯ ಮಂಡನೆ ಮಾಡಲಿದ್ದಾರೆ.
ಜುಲೈ18ರಂದು ಮೊಳಕಾಲ್ಮುರು ಪಶು ಆಸ್ಪತ್ರೆ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಸಿ.ತಿಪ್ಪೇಸ್ವಾಮಿ, ಚಿತ್ರದುರ್ಗ ಪಶುಸಂಗೋಪನಾ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಡಾ.ದೊಡ್ಡಮಲ್ಲಯ್ಯ, ಹಿರಿಯೂರು(sheep and goat) ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ ಡಾ.ನಾಗರಾಜ್ ಅವರು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಪದ್ದತಿ ಕುರಿತು ಮಹಿತಿ ನೀಡಲಿದ್ದಾರೆ.
ಜುಲೈ19ರಂದು ಸೂಗೂರು, ಕಾಂತ್ರಿಕೇನಹಳ್ಳಿ ಮತ್ತು ಹಿರಿಯೂರಿನ ವಿವಿಧ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ ತಾಕುಗಳಿಗೆ ರೈತರನ್ನು ಕರೆದುಕೊಂಡು ಹೋಗಲಾಗುವುದು.
ಇದನ್ನೂ ಓದಿ: ಡಿಜಿಟಲ್ ರೂಪದಲ್ಲಿ ಭೂದಾಖಲೆ ವಿತರಣೆ | DC ಟಿ.ವೆಂಕಟೇಶ್
ಆದ ಪ್ರಯುಕ್ತ ಆಸಕ್ತ 40 ಜನ ರೈತಭಾಂದವರು ಈ ತರಬೇತಿಯಲ್ಲಿ ಭಾಗವಹಿಸಲು ಮೊಬೈಲ್ ಸಂಖ್ಯೆ 8277931058 ಗೆ ಕರೆಮಾಡಿ ಈ ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.
ಮೊದಲು ನೋಂದಾವಣಿ(sheep and goat) ಮಾಡಿಕೊಂಡ 40 ಜನ ರೈತಭಾಂದವರಿಗೆ ಆದ್ಯತೆ ಮೇರೆಗೆ ತರಬೇತಿಗೆ ಪರಿಗಣಿಸಲಾಗುವುದು ಹಾಗೂ ತರಬೇತಿಗೆ ಹಾಜರಾಗುವ ರೈತಬಾಂಧವರು ಕಡ್ಡಾಯವಾಗಿ ತಮ್ಮ ಎಫ್ಐಡಿ ಕಾರ್ಡ್ ಅಥವಾ ಚುನಾವಣೆ ಗುರುತಿನ ಚೀಟಿ ತರಬೇಕು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಮುಖ್ಯಸ್ಥ ಆರ್.ರಜನೀಕಾಂತ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252