Chitradurga news|nammajana.com|16-7-2024
ನಮ್ಮಜನ.ಕಾಂ, ಚಿತ್ರದುರ್ಗ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತದಿಂದ 2024-25ನೇ ಸಾಲಿಗೆ (sheep farming) ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20+1 ಕುರಿ ಅಥವಾ ಮೇಕೆ ಸಾಕಾಣಿಕೆ ಅರ್ಜಿ ಆಹ್ವಾನಿಸಲಾಗಿದೆ.
ನಿಗಮದ ಕೃಷಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ನೊಂದಾಯಿಸಿಕೊಂಡ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದವರು (sheep farming) ಅರ್ಜಿ ಸಲ್ಲಿಸಬಹುದು. ಚಿತ್ರದುರ್ಗ ಜಿಲ್ಲೆಗೆ ಒಟ್ಟು 706 ಘಟಕಗಳನ್ನು ನೀಡಲು ಗುರಿ ನಿಗಧಿ ಮಾಡಲಾಗಿದೆ.
ಪ್ರತಿ ಘಟಕ್ಕೆ ರೂ.1,75,000/- ವೆಚ್ಚ ನಿರ್ಧರಿಸಲಾಗಿದೆ. ಇದರಲ್ಲಿ ರಾಜ್ಯ ಸರ್ಕಾರದಿಂದ ರೂ.43,750 ಸಹಾಯ ಧನ ನೀಡಲಾಗುವುದು. ಫಲಾನುಭವಿಗಳು ರೂ.43,750ಗಳ ವಂತಿಕೆ ನೀಡಬೇಕು. ಕರ್ನಾಟಕ ರಾಜ್ಯ ಹಣಕಾಸು (sheep farming) ಸಂಸ್ಥೆಯಿಂದ ರೂ.87,500ಕ್ಕೆ ಶೇ.9.26ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ದೊರಕಲಿದೆ. ಫಲಾನುಭವಿಗಳು 20+1 ಕುರಿ ಅಥವಾ ಮೇಕೆಗಳನ್ನು ಖರೀದಿಸಿ ಸ್ವಂತವಾಗಿ ಸಾಗಾಣಿಕೆ ಮಾಡಬಹುದು.
ಇದನ್ನೂ ಓದಿ: Organization of NSUI: ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಯುವಕನ ಸಹಾಯಕ್ಕೆ ನಿಂತ ವಿದ್ಯಾರ್ಥಿ ಒಕ್ಕೂಟ
ಕುರಿ ಮತ್ತು ಉತ್ಪಾದಕರ ಸಹಕಾರ ಸಂಘಗಳಲ್ಲಿ ಅರ್ಜಿಗಳು ದೊರೆಯುತ್ತವೆ. ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ (sheep farming) ದಾಖಲೆಗಳೊಂದಿಗೆ ಸಹಕಾರಿ ಸಂಘ ಅಥವಾ ಚಿತ್ರದುರ್ಗ ಪಶು ಆಸ್ಪತ್ರೆ ಆವರಣದಲ್ಲಿರುವ ನಿಗಮದ ಸಹಾಯಕ ನಿರ್ದೇಶಕ ಕಚೇರಿಗೆ ಜುಲೈ 31 ರ ಸಂಜೆ 5:30ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ 08194-222718, ಮೊಬೈಲ್ ಸಂಖ್ಯೆ 9448656231ಕ್ಕೆ ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.