
Chitradurga news|nammajana.com|18-7-2024
ನಮ್ಮಜನ.ಕಾಂ, ಚಿತ್ರದುರ್ಗ: ಹೆಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ (Siddaramaiah) ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಇದೇ ಜುಲೈ 20 ರಂದು ಸಂಜೆ 4ಕ್ಕೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ “ಪ್ರತಿಭಾ ಪುರಸ್ಕಾರ” ಸಮಾರಂಭ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್ ಉದ್ಘಾಟನೆ ಮತ್ತು ಪ್ರತಿಭಾವಂತ (Siddaramaiah) ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡುವರು.

ಇದನ್ನೂ ಓದಿ: Chitradurga Prostitution: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಇಬ್ಬರ ಬಂಧನ
ಮುಖ್ಯ ಅತಿಥಿಗಳಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, (Siddaramaiah) ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ್, ಕರ್ನಾಟಕ ಆದಿ ಜಾಂಬವ ಅಭಿವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಮುಂಡರಗಿ ನಾಗರಾಜ್ ಭಾಗವಹಿಸುವರು.
ಎಸ್‍ಎಲ್‍ಎಲ್‍ಸಿ, ಪಿಯುಸಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಗಳಿಸಿದ ಮಾದಿಗ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜುಲೈ 20ರಂದು ಮಧ್ಯಾಹ್ನ 1.30 ರಿಂದ 2.30 ರವರೆಗೆ ಭೋಜನ, ಭೂಮಿ ತಾಯಿ ಬಳಗದಿಂದ ವಾದ್ಯಗೋಷ್ಠಿ, ಮೈಸೂರು ನಗಾರಿ ಮಂಜು ತಂಡದಿಂದ ನಗಾರಿ ಕುಣಿತ (Siddaramaiah) ಹಮ್ಮಿಕೊಳ್ಳಲಾಗಿದೆ. ಸಂಜೆ 4.30ಕ್ಕೆ ಮುಖ್ಯಮಂತ್ರಿಗಳಿಂದ ಪ್ರತಿಭಾ ಪುರಸ್ಕಾರ ಪ್ರಧಾನ ಕಾರ್ಯಕ್ರಮ ನಡೆಯಲಿದೆ ಹೆಚ್.ಆಂಜನೇಯ ಚಾರಿಟೆಬಲ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ.
