Chitradurga News | Nammajana.com | 08-07-2025
ನಮ್ಮಜನ.ಕಾಂ, ಚಿತ್ರದುರ್ಗ: ತಾಲೂಕಿನ ಸಿರಿಗೆರೆಯ ತರಳಬಾಳು ಬೃಹನ್ಮಠದಲ್ಲಿ ಈ ವರ್ಷದ ನವೆಂಬರ್ ತಿಂಗಳಲ್ಲಿ ರಾಜ್ಯಮಟ್ಟದ ಕನ್ನಡ ನುಡಿಹಬ್ಬ(Nudi festival) ಆಯೋಜಿಸಲು ತರಳಬಾಳು ಬೃಹನ್ಮಠದ ಡಾ.ಶ್ರೀಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಮ್ಮತಿಸಿದ್ದಾರೆ.

ಇದನ್ನೂ ಓದಿ: ಸೇವಂತಿಗೆ ಹೂವು ಬೆಳೆಗೆ ಸೊರಗು ರೋಗ ಬಾಧೆ | ಗಗನಕ್ಕೇರಿದೆ ಬೆಲೆ
ಮಧ್ಯಕರ್ನಾಟಕ ಮೂರು ಜಿಲ್ಲೆಗಳ ಕಸಾಪ ಅಧ್ಯಕ್ಷರು ಸೋಮವಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಈ ಕುರಿತು ಶ್ರೀಗಳೊಂದಿಗೆ ಚರ್ಚಿಸಿದರು.
ಚಿತ್ರದುರ್ಗ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಸಿರಿಗೆರೆ ಮಠದ ಆಶ್ರಯದಲ್ಲಿ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮ ನಿರಂತರವಾಗಿ ಜರುಗುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಪ್ರತಿವರ್ಷ ನವೆಂಬರ್‌ನಲ್ಲಿ ತರಳಬಾಳು ನುಡಿಹಬ್ಬ( Nudi festival) ಆಚರಿಸಲಾಗುತ್ತದೆ. ಈ ಬಾರಿ ಒಂದಷ್ಟು ವಿಭಿನ್ನವಾಗಿ ಆಚರಿಸಲು ಮಠದಿಂದ ಅವಕಾಶ ನೀಡಬೇಕೆಂದು ವಿನಂತಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶ್ರೀಗಳು ನುಡಿಹಬ್ಬದಲ್ಲಿ ಅರ್ಥಪೂರ್ಣ ಚರ್ಚೆ ಮತ್ತು ಕವಿಗೋಷ್ಠಿಗಳು ಆಯೋಜಿಸಬೇಕು. ಮಧ್ಯ ಕರ್ನಾಟಕಕ್ಕೆ ಬದಲಾಗಿ ರಾಜ್ಯಮಟ್ಟದ ನುಡಿಹಬ್ಬ ಆಯೋಜಿಸಿ, ಶಾಂತಿವನದಲ್ಲಿ ವಿಶೇಷ ಕವಿಗೋಷ್ಠಿ ನಡೆಸಿ. ಈ ಬಗ್ಗೆ ರಾಜ್ಯದ ಪ್ರಮುಖ ಸಾಹಿತಿಗಳು, ಕವಿಗಳನ್ನು ಆಹ್ವಾನಿಸಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಇಂದು ಸಚಿವ ಶಿವರಾಜ ತಂಗಡಗಿ ಚಿತ್ರದುರ್ಗ ಜಿಲ್ಲಾ ಪ್ರವಾಸ
ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಮಧ್ಯ ಕರ್ನಾಟಕದ ಜಿಲ್ಲೆಗಳಾದ ಚಿತ್ರದುರ್ಗ, ದಾವಣಗೆರೆ(Nudi festival) ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಸಾಹಿತಿಗಳು, ಕವಿಗಳನ್ನು ಈ ನುಡಿಹಬ್ಬದಲ್ಲಿ ವಿಶೇಷವಾಗಿ ಆಹ್ವಾನಿಸಲಾಗುವುದು ಎಂದರು.
ದಾವಣಗೆರೆ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ ಮಾತನಾಡಿ, ಸಿರಿಗೆರೆ ಮಠದಿಂದ ತರಳಬಾಳು ನುಡಿಹಬ್ಬವನ್ನು ಪ್ರತಿವರ್ಷ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ.
ಈ ಬಾರಿ ಮೂರು ಜಿಲ್ಲೆಗಳಿಂದ ಜು.27ರಂದು ಅಂತರ ಜಿಲ್ಲಾ ಕವಿಗೋಷ್ಠಿ ಆಯೋಜಿಸಲಾಗುವುದು ಎಂದರು.
ಇದನ್ನೂ ಓದಿ: ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ
ಕಸಾಪ ಜಿಲ್ಲಾ ಕಾರ್ಯದರ್ಶಿ ಮಳಲಿ ಶ್ರೀನಿವಾಸ್ ಇದ್ದರು.
