Chitradurga news| nammajana.com | 13-11-2024
ನಮ್ಮಜನ.ಕಾಂ, ಚಿತ್ರದುರ್ಗ: ನೇಕಾರರ ವಿಶೇಷ ಪ್ಯಾಕೇಜ್ (SME unit) ಯೋಜನೆಯ ವಿಶೇಷ ಘಟಕ, ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್.ಎಂ.ಇ) ಘಟಕಗಳ ಸ್ಥಾಪನೆಗೆ ಶೇ.75 ರಷ್ಟು ಸಹಾಯಧನ, ಗರಿಷ್ಠ ರೂ.2.00ಕೋಟಿವರಗೆ ಸಹಾಯಧನ ನೀಡುವ ಯೋಜನೆಯಡಿ 2024-25ನೇ ಸಾಲಿಗೆ ವಿಶೇಷ ಘಟಕ ಯೋಜನೆಯಡಿ 3 ಮತ್ತು ಗಿರಿಜನ ಉಪ (SME unit) ಯೋಜನೆಯಡಿ 2 ಸೇರಿದಂತೆ ಒಟ್ಟು 5 ಎಸ್.ಎಂ.ಇ ಘಟಕಗಳನ್ನು ಸ್ಥಾಪಿಸಲು ಗುರಿ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ವಾಣಿ ವಿಲಾಸ ಸಾಗರಕ್ಕೆ 1040 ಕ್ಯೂಸೆಕ್ಸ್ ನೀರು, ಎಷ್ಟಿದೆ ಇಂದಿನ ನೀರಿನ ಮಟ್ಟ | Vani Vilasa Sagara DamDam
ಘಟಕಗಳನ್ನು ಸ್ಥಾಪಿಸಲು ಆಸಕ್ತಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳು ಡಿಸೆಂಬರ್ 15ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಗರದ ಬಿ.ಡಿ.ರೋಡ್, ಭಾಗ್ಯ ಕಾಂಪ್ಲೆಕ್ಸ್ನಲ್ಲಿನ ಕೈಮಗ್ಗ ಮತು ಜವಳಿ (SME unit) ಇಲಾಖೆ ಉಪನಿರ್ದೇಶಕ ಕಚೇರಿ ದೂರವಾಣಿ ಸಂಖ್ಯೆ 08194-221426 ಗೆ ಸಂರ್ಕಿಸಲು ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ನಮ್ಮ ವರದಿಗಾರರು. ನಿಮ್ಮೂರಿನ ಸಭೆ, ಸಮಾರಂಭ, ಶಾಲೆ ಕಾಲೇಜು ಕಾರ್ಯಕ್ರಮಗಳು, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಉತ್ತಮವಾದ ಫೋಟೋ ಜೊತೆಗೆ ಕಳುಹಿಸಬಹುದು. ಸುದ್ದಿ ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ. ಮತ್ತು ಜಾಹಿರಾತುಗಳನ್ನು ಆಕರ್ಷಕ ದರದಲ್ಲಿ ಪ್ರಕಟಿಸಲಾಗುವುದು.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ನಮ್ಮಜನ.ಕಾಂ gmail: nammajananews@gmail.com
» Whatsapp Number-9686622252